Homeಮುಖಪುಟಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: 'ಪ್ರಜಾಪ್ರಭುತ್ವದ ಅಪಹಾಸ್ಯ' ಎಂದ ವಿಪಕ್ಷಗಳು

ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

- Advertisement -
- Advertisement -

ಬಿಜೆಪಿ ಮಾಜಿ ವಕ್ತಾರೆ ವಕೀಲೆ ಆರತಿ ಸಾಥೆ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸನ್ನು ಮಹಾರಾಷ್ಟ್ರದ ವಿರೋಧ ಪಕ್ಷಗಳು ಮಂಗಳವಾರ (ಆ.5) ಟೀಕಿಸಿವೆ.

ಈ ಬೆಳವಣಿಗೆಯನ್ನು ‘ನಾಚಿಕೆಗೇಡಿನ ಪರಮಾವಧಿ’ ಎಂದು ಬಣ್ಣಿಸಿರುವ ಕಾಂಗ್ರೆಸ್ ಮಹಾರಾಷ್ಟ್ರ ಘಟಕ, ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿದೆ ಎಂದು ಹೇಳಿದೆ.

ಸಾಥೆ ಅವರನ್ನು ಫೆಬ್ರವರಿ 2023ರಲ್ಲಿ ಮಹಾರಾಷ್ಟ್ರ ಬಿಜೆಪಿಯ ವಕ್ತಾರರನ್ನಾಗಿ ನೇಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು 2024ರ ಜನವರಿಯಲ್ಲಿ ತಮ್ಮ ಹುದ್ದೆಗೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 28ರಂದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಆರತಿ ಸಾಥೆ, ಅಜಿತ್ ಕಡೆತಂಕರ್ ಮತ್ತು ಸುಶಿಲ್ ಘೋಡೇಶ್ವರ್ ಅವರನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದೆ. ಸಚಿವಾಲಯ ಇದನ್ನು ಪ್ರಧಾನ ಮಂತ್ರಿ ಮುಂದೆ ಇಡುತ್ತದೆ, ಅವರು ನೇಮಕಾತಿಯ ಬಗ್ಗೆ ರಾಷ್ಟ್ರಪತಿಗೆ ಸಲಹೆ ನೀಡುತ್ತಾರೆ.

ಸಾಥೆ ಅವರ ಹೆಸರು ಶಿಫಾರಸ್ಸು ಮಾಡಿರುವ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿರುವ ಎನ್‌ಸಿಪಿ(ಎಸ್‌ಪಿ) ಶಾಸಕ ರೋಹಿತ್ ಪವಾರ್, “ಹೈಕೋರ್ಟ್ ನ್ಯಾಯಾಧೀಶರಾಗುವ ಮೊದಲು ಸಾಥೆ ಬಿಜೆಪಿಗೆ ರಾಜೀನಾಮೆ ನೀಡುವ ಮೂಲಕ ಕಾನೂನು ಅವಶ್ಯಕತೆಗಳನ್ನು ಪೂರೈಸಿರಬಹುದು. ಆದರೆ, ನ್ಯಾಯಾಂಗದ ಸದಸ್ಯರಾಗಿ ಹಿಂದುತ್ವ ಪಕ್ಷದ ವಿರುದ್ಧ ಅವರು ಹೇಗೆ ತೀರ್ಪು ನೀಡಲು ಸಾಧ್ಯ ಎಂಬುದು ಪ್ರಶ್ನಾರ್ಹವಾಗಿದೆ” ಎಂದಿದ್ದಾರೆ.

ಈ ವಿಷಯದ ಬಗ್ಗೆ ನಮ್ಮ ಪಕ್ಷವು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಸಂಪರ್ಕಿಸಿದೆ ಮತ್ತು ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವಾರ್ ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಮಾಧ್ಯಮ ವಿಭಾಗದ ಉಸ್ತುವಾರಿ ನವನಾಥ್ ಬಾನ್ ಅವರು ಸುಳ್ಳು ಆರೋಪಗಳನ್ನು ಮಾಡಬೇಡಿ, ಮಾತನಾಡುವ ಮೊದಲು ಸತ್ಯ ತಿಳಿದುಕೊಳ್ಳಿ ಎಂದು ರೋಹಿತ್ ಪವಾರ್ ಅವರಿಗೆ ಹೇಳಿದ್ದಾರೆ. ಆರತಿ ಸಾಥೆ ಜನವರಿ 6, 2024 ರಂದು ಬಿಜೆಪಿ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

20 ವರ್ಷಗಳಿಂದ ವಕೀಲರಾಗಿರುವ ಸಾಥೆ, ಪ್ರಾಥಮಿಕವಾಗಿ ತೆರಿಗೆ ವಿವಾದಗಳು, ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ, ಭದ್ರತಾ ಮೇಲ್ಮನವಿ ನ್ಯಾಯಮಂಡಳಿ, ಕಸ್ಟಮ್ಸ್, ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಮತ್ತು ವೈವಾಹಿಕ ವಿವಾದಗಳ ಮುಂದಿರುವ ಪ್ರಕರಣಗಳನ್ನು ನಿರ್ವಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಕೆಯ ತಂದೆ ಅರುಣ್ ಸಾಥೆ ಕೂಡ ವಕೀಲರಾಗಿದ್ದು, ಬಿಜೆಪಿ ಮತ್ತು ಅದರ ಮಾತೃ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಜೊತೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...