Homeಕರ್ನಾಟಕಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

ಒಳಮೀಸಲಾತಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಆ.11ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ: ಕರಿಯಪ್ಪ ಗುಡಿಮನಿ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ಆಗಸ್ಟ್ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಘೋಷಿಸಿದೆ. ನ್ಯಾ. ಹೆಚ್.ಎನ್. ನಾಗಮೋಹನ್‌ದಾಸ್ ಅವರ ಸಮೀಕ್ಷಾ ವರದಿಯನ್ನು ತಕ್ಷಣವೇ ಸ್ವೀಕರಿಸಿ, ಮುಂಬರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು, ಸುಪ್ರೀಂ ಕೋರ್ಟ್ ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪು ನೀಡಿ ಒಂದು ವರ್ಷ ಗತಿಸಿದೆ. ಆದರೆ, ಇಷ್ಟಾದರೂ ಸರ್ಕಾರಗಳು ಒಳಮೀಸಲಾತಿ ಜಾರಿಗೆ ಮುಂದಾಗಿಲ್ಲ. ನ್ಯಾ. ನಾಗಮೋಹನ್‌ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿ ಜುಲೈ 30ರೊಳಗೆ ವರದಿ ಸಲ್ಲಿಸಬೇಕಿತ್ತು. ಆದರೆ, ವಿಳಂಬ ಧೋರಣೆ ಮುಂದುವರಿದಿರುವುದರಿಂದ ಮತ್ತೊಂದು ಸುತ್ತಿನ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಕಳೆದ 30 ವರ್ಷಗಳಿಂದ ಒಳಮೀಸಲಾತಿ ಹೋರಾಟ ಮುಂದುವರಿದಿದ್ದು, ಆಯೋಗಗಳ ನೇಮಕ, ಅನುದಾನ ಬಿಡುಗಡೆ ಮತ್ತು ವರದಿ ಅನುಷ್ಠಾನದಲ್ಲಿ ನಿರಂತರ ವಿಳಂಬವಾಗುತ್ತಿದೆ. ಇದರಿಂದಾಗಿ, ಸಮುದಾಯದ ಜನರು ಯಾವ ಸರ್ಕಾರವನ್ನೂ ನಂಬುವ ಸ್ಥಿತಿಯಲ್ಲಿಲ್ಲ ಎಂದು ಸಮಿತಿ ವಿಷಾದ ವ್ಯಕ್ತಪಡಿಸಿದೆ.

ಹೋರಾಟದ ಭಾಗವಾಗಿ, ಆಗಸ್ಟ್ 11ರಂದು ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿಯೇ ಒಳಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು. ಇದರಿಂದ 30 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ವಂಚಿತ ಯುವಕ-ಯುವತಿಯರಿಗೆ ಸಿಗಲಿವೆ. ಸರ್ಕಾರವು ಈ ಅಧಿವೇಶನದಲ್ಲಿ ತನ್ನ ಬದ್ಧತೆಯನ್ನು ಪ್ರಕಟಿಸಬೇಕು ಎಂದು ಸಮಿತಿ ಆಗ್ರಹಿಸಿದೆ. ಈ ಹೋರಾಟದಲ್ಲಿ ಎಲ್ಲ ಸಂಘ-ಸಂಸ್ಥೆಗಳ ಮುಖಂಡರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಬೇಕೆಂದು ಸಮಿತಿ ಮನವಿ ಮಾಡಿದೆ.

ಒಳಮೀಸಲಾತಿ ಬೇಡಿಕೆಯ ಪ್ರಮುಖ ಅಂಶಗಳು:

ನ್ಯಾ. ನಾಗಮೋಹನ್‌ದಾಸ್ ಸಮೀಕ್ಷಾ ವರದಿಯನ್ನು ತಕ್ಷಣವೇ ಅಂಗೀಕರಿಸುವುದು

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ತಮ್ಮ ಬದ್ಧತೆಯನ್ನು ಘೋಷಿಸುವುದು

ಆಗಸ್ಟ್ 11ರಿಂದ ಆರಂಭವಾಗುವ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದು

30 ಸಾವಿರಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳಿಗೆ ವಂಚಿತ ಸಮುದಾಯದವರಿಗೆ ಅವಕಾಶ ಕಲ್ಪಿಸುವುದು

ಸರ್ಕಾರವು ಈ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಟ್ಟು, ನುಡಿದಂತೆ ನಡೆಯುವ ಮೂಲಕ ತಮ್ಮ ಬದ್ಧತೆಯನ್ನು ತೋರಿಸಬೇಕೆಂದು ಹೋರಾಟ ಸಮಿತಿ ಒತ್ತಾಯಿಸಿದೆ.

ಸುಳ್ಳು ಸುದ್ದಿ ಪ್ರಸಾರ ಆರೋಪ: ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...