Homeಮುಖಪುಟಹಣ ಪತ್ತೆ ಪ್ರಕರಣ: ಆಂತರಿಕ ಸಮಿತಿ ವರದಿ ಪ್ರಶ್ನಿಸಿದ್ದ ನ್ಯಾ.ವರ್ಮಾ ಅರ್ಜಿ ವಜಾ

ಹಣ ಪತ್ತೆ ಪ್ರಕರಣ: ಆಂತರಿಕ ಸಮಿತಿ ವರದಿ ಪ್ರಶ್ನಿಸಿದ್ದ ನ್ಯಾ.ವರ್ಮಾ ಅರ್ಜಿ ವಜಾ

- Advertisement -
- Advertisement -

ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ತಪ್ಪಿತಸ್ಥ ಎಂದು ಘೋಷಿಸಿ ಆಂತರಿಕ ಸಮಿತಿ ಸಲ್ಲಿಸಿದ್ದ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (7) ವಜಾಗೊಳಿಸಿದೆ.

ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸವನ್ನು ತುಂಬುವಲ್ಲಿ ವಿಫಲವಾಗಿದೆ ಎಂದು ಹೇಳಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ನಿರ್ಧರಿಸಿದೆ.

ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಚಿಸಿದ್ದ ನ್ಯಾಯಾಧೀಶರ ಆಂತರಿಕ ತನಿಖಾ ಸಮಿತಿಯು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸಲು ಶಿಫಾರಸು ಮಾಡಿದ ಸಮಿತಿಯ ವರದಿಯನ್ನು ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ರವಾನಿಸುವುದು ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ತಿಳಿಸಿದೆ.

“ಸಿಜೆಐ ಮತ್ತು ಆಂತರಿಕ ಸಮಿತಿ ಫೋಟೋಗಳು ಮತ್ತು ವೀಡಿಯೊ ಅಪ್‌ಲೋಡ್ ಮಾಡುವುದನ್ನು ಹೊರತುಪಡಿಸಿ, ಉಳಿದ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಅನುಸರಿಸಿದೆ. ಫೋಟೋ, ವಿಡಿಯೋ ಅಪ್ಲೋಡ್ ಅಗತ್ಯವಿಲ್ಲ ಎಂದು ನಾವು ಹೇಳಿದ್ದೇವೆ. ನೀವು ಈ ಹಿಂದೆ ಈ ಬಗ್ಗೆ ಪ್ರಶ್ನಿಸಿದ ಕಾರಣ ನಾವು ಮಾಡಿಲ್ಲ” ಎಂದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿರುವ ಹಿನ್ನೆಲೆ, ಅದೇ ಪೀಠದ ಮುಂದೆ ಪುನರ್‌ ಪರಿಶೀಲನೆ ಮತ್ತು ಕ್ಯುರೇಟಿವ್ ಅರ್ಜಿ ಸಲ್ಲಿಸುವುದು ನ್ಯಾಯಮೂರ್ತಿ ವರ್ಮಾ ಮುಂದಿರುವ ಪರ್ಯಾಯ ಕಾನೂನು ಆಯ್ಕೆ ಎಂದು ವರದಿಗಳು ಹೇಳಿವೆ.

ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಮುಕುಲ್ ರೋಹಟಗಿ ಮೂಲಕ ಮಾಡಿದ ಎಲ್ಲಾ ಮನವಿ ಮತ್ತು ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ವರ್ಮಾ ಅವರ ಎಲ್ಲಾ ರೀತಿಯ ವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿಗಳಾದ ದತ್ತ ಮತ್ತು ಮಸಿಹ್ ಅವರಿದ್ದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಜುಲೈ 30ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈ ವೇಳೆ “ಈ ಪ್ರಕರಣದಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಪ್ರಕರಣದ ಹಿನ್ನೆಲೆ: ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025ರ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದರು.

ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿತ್ತು. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿತ್ತು.

ಆಂತರಿಕ ಸಮಿತಿಯ ವರದಿಯನ್ನು ಪ್ರಶ್ನಿಸಿ ನ್ಯಾ. ವರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಅತ್ತ ಸಂಸತ್ತಿನಲ್ಲಿ ನ್ಯಾ.ವರ್ಮಾ ಪದಚ್ಯುತಿಗೆ ಸಿದ್ದತೆ ನಡೆದಿದೆ. ಈಗಾಗಲೇ 100ಕ್ಕೂ ಹೆಚ್ಚು ಸಂಸದರು ಪದಚ್ಯುತಿ ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಪದಚ್ಯುತಿ ನಿರ್ಣಯ ಮಂಡಿಸಿ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.

ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...