Homeಚಳವಳಿಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

ಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

- Advertisement -
- Advertisement -

ಅಂಗನವಾಡಿಗಳಲ್ಲೆ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ತುಮಕೂರಿನಿಂದ ಬೆಂಗಳೂರಿಗೆ ಕೈಗೊಂಡಿದ್ದ ಪಾದಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ತುಮಕೂರು ನಗರಕ್ಕೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದರು. ಆದರೆ ಪೊಲೀಸರು ಪಾದಯಾತ್ರೆಗೆ ಅವಕಾಶ ಮಾಡಿಕೊಡದೇ ಇರುವುದರಿಂದ ತುಮಕೂರಿನ ಗಾಜಿನ ಮನೆಯಲ್ಲಿ ಧರಣಿ ನಡೆಸುತ್ತಿದ್ದಾರೆ.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಮಹಿಳಾ ಹೋರಾಟಗಾರ್ತಿಯರು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ತದನಂತರ ಪ್ರಮುಖ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಲೀಡರ್‌ಗಳ ಮನೆಗೆ ಹೋಗಿ ತಪಾಸಣೆ ನಡೆಸಿದ್ದಾರೆ. ಕೋಲಾರದ ಮಾಲೂರಿನ ಅಂಗನವಾಡಿ ಮುಖಂಡರನ್ನು ರಾತ್ರಿಯೆಲ್ಲ ಮನೆಯಲ್ಲೇ ಗೃಹಬಂಧನದಲ್ಲಿಟ್ಟು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಮುಖಂಡರು ಹೇಳಿದರು.

ಪತ್ರಿಕಾಗೋಷ್ಟಿ ಮುಕ್ತಾಯವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಎಎಸ್‌ಪಿ ಮತ್ತು ತುಮಕೂರು ನಗರ ಡಿವೈಎಸ್‌ಪಿ ಅಂಗನವಾಡಿ ನೌಕರರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಸಿಂಧೂ, ರಾಜ್ಯಾಧ್ಯಕ್ಷ ಎಸ್.ವರಲಕ್ಷ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ, ಸಿಐಟಿಯು ನಾಯಕರಾದ ಮೀನಾಕ್ಷಿ ಸುಂದರಂ, ಕೆ.ಎನ್. ಉಮೇಶ್, ಕೆ. ಮಹಾಂತೇಸ್, ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮೊದಲಾದವರೊಂದಿಗೆ ಅರ್ಧ ಗಂಟೆ ಮಾತುಕತೆ ನಡೆಸಿದರು.

ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅವಕಾಶ ಇಲ್ಲವೆಂಬುದನ್ನು ಪೊಲೀಸ್ ಅಧಿಕಾರಿಗಳು ಹೆಳಿದರು. ಇದಕ್ಕೆ ನೀವು ಲಿಖಿತವಾಗಿ ನಮಗೆ ಮಾಹಿತಿ ನೀಡಿದರೆ ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ದ. ಆದರೆ ಸುಮ್ಮನೆ ಮನವಿ ಕೊಟ್ಟು ಬರಲು ಹೋಗುವುದಾದರೆ ಬೇಡ ಎಂದು ಪಟ್ಟು ಹಿಡಿದರು. ಬಳಿಕ ಅಲ್ಲಿಂದ ಗಾಜಿನಮನೆಗೆ ಸಹಸ್ರಾರು ಕಾರ್ಯಕರ್ತೆಯರು ಮೆರವಣಿಗೆ ಬಂದರು. ಅಲ್ಲಿಗೆ ಆಗಮಿಸಿದ ಎಸ್.ಪಿ. ಡಾ. ಕೋನಂ ವಂಶಿಕೃಷ್ಣ ಸಿಐಟಿಯು ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡುತ್ತೇವೆ. ನಿಮಗೆ ಮುಖ್ಯಮಂತ್ರಿ ಜೊತೆ ಮಾತುಕತೆಗೆ ಅವಕಾಶ ಕಲ್ಪಿಸುತ್ತೇವೆ ಎಂದು ಅಲ್ಲಿಂದ ನಿರ್ಗಮಿಸಿದರು.

ಇದೀಗ ಅಂಗನವಾಡಿ ನೌಕರರ ಸಂಘದ ಪ್ರಮುಖರಾದ ಸಿಂಧೂ, ಎಸ್.ವರಲಕ್ಷ್ಮಿ, ಸುನಂದ, ಗುಲ್ಜಾರ್ ಬಾನು, ಶಾಂತ ಘಂಟಿ, ನಾಗರತ್ನ ಅವರನ್ನು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತುಕತೆಗೆ ಕರೆದೊಯ್ಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ವೈಜ್ಞಾನಿಕ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನ್ನು ಕಾಂಗ್ರೆಸ್ ಬದಲು ತಾಯಂದಿರೇ ಕಿತ್ತೊಗೆಯಲಿದ್ದಾರೆ ಎಂದು ಗ್ರಾಮ ಸೇವಾ ಸಂಘದ ಅಧ್ಯಕ್ಷ ಹೆಗ್ಗೋಡು ಪ್ರಸನ್ನರವರು ಎಚ್ಚರಿಕೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Houdu anganavagi shaleyalli LKG And UKG aarambavagabeku, yakendre:
    6 varsha kinta kadime eru makkalige antene anganavadi shale yannu terayalagide adre aa makkalallli LKG UKG Anta bere school Ali hoguttare adre 6 varsha kinta kadime eru makkaligagi teradiru e anganavadi yalli makkala sankhye kadime agatide anganavadi shale ge koduva facelities West agatide adarinda anganavadi shale alli LKG and UKG prarambhavagabeku.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...