Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...