Homeಕರ್ನಾಟಕಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಸಹಭಾಗಿತ್ವವೂ ಕೂಡ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸುತ್ತಿದೆ. ರಾಜ್ಯ ಸರ್ಕಾರ ಯೋಜನೆಯ ಹಂತ 1,2, 2ಎ, 2ಬಿ ಮತ್ತು ಹಂತ 3ರ ಅನುಷ್ಠಾನಕ್ಕೆ ತನ್ನ ಪಾಲಿನ ರೂಪಾಯಿ 25,387 ಕೋಟಿ ಒದಗಿಸಿದೆ. ಇದರೊಂದಿಗೆ ಹೆಚ್ಚುವರಿ ಹಣಕಾಸು ನೆರವಿನ ರೂಪದಲ್ಲಿ ಸಾಲ ಮರುಪಾವತಿಗಾಗಿ ರೂ.3,987 ಕೋಟಿ ನೀಡಿದೆ. ಮೆಟ್ರೋ ಯೋಜನೆಗಳಿಗಾಗಿ ಇದುವರೆಗೂ 59,139 ಕೋಟಿ ರೂ. ಅನುದಾನವನ್ನು ವಿನಿಯೋಗಿಸಲಾಗಿದೆ. ರಾಜ್ಯ ಸರ್ಕಾರದ ಜವಾಬ್ಧಾರಿ ಶೇ. 87.37ರಷ್ಟಿದೆ. ಕೇಂದ್ರ ಸರ್ಕಾರ ತನ್ನ ಖಜಾನೆಯಿಂದ ಕೊಟ್ಟಿರುವುದು ಶೇ. 12.63 ರಷ್ಟು. ಕೇಂದ್ರ ಸರ್ಕಾರ ಒದಗಿಸಿರುವುದು 7,468.86 ಕೋಟಿ ರೂಗಳು ಮಾತ್ರ ಎಂದು ಸಿಎಂ ವಿವರಿಸಿದರು.

ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು ಶೇ.50;50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ ಶೇ.87.37ರಷ್ಟು ಭಾರವಿದೆ ಎಂಬುವುದನ್ನು ಪ್ರಧಾನಮಂತ್ರಿಗೆ ಮನವರಿಕೆ ಮಾಡ ಬಯಸುತ್ತೇನೆ ಎಂದು ಸಿಎಂ ಹೇಳಿದರು.

ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಯಿಂದ ಬೆಂಗಳೂರು ಮೆಟ್ರೋ ಒಟ್ಟು 96.10 ಕಿ.ಮೀ ಕಾರ್ಯಾಚರಣೆಯೊಂದಿಗೆ ದಕ್ಷಿಣ ಭಾರತದಲ್ಲಿಯೇ ಅತಿ ಉದ್ದದ ಮೆಟ್ರೊ ಜಾಲದ ಗೌರವಕ್ಕೆ ಪಾತ್ರವಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆಯ ಕ್ಷಣವಾಗಿದ್ದು, ಅಭಿವೃದ್ಧಿಯ ಕಡೆಗಿನ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಿಎಂ ತಿಳಿಸಿದರು.

ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಲೇನ್ ಬಳಸುವ ನಿರೀಕ್ಷೆಯಿದೆ. ಇದರಿಂದ ಮುಖ್ಯವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಸುತ್ತಲಿನ ಭಾರೀ ಟ್ರಾಫಿಕ್ ಸಮಸ್ಯೆ ಸುಧಾರಿಸುವ ವಿಶ್ವಾಸ ಹೊಂದಿದ್ದೇವೆ ಎಂದರು.

ಇಂದು ಉದ್ಘಾಟನೆಗೊಂಡಿರುವ ಹಳದಿ ಲೇನ್ ಪ್ರಮುಖ ಬಯೋಟೆಕ್ ಮತ್ತು ಐಟಿ ಹಬ್‌ಗಳನ್ನು ಪರಸ್ಪರ ಜೋಡಿಸುತ್ತದೆ. ಮಾತ್ರವಲ್ಲದೆ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ಕೈಗಾರಿಕಾ ವಲಯಗಳಿಗೂ ಸುಲಭದ ಸಂಪರ್ಕ ಸಾಧ್ಯವಾಗಿಸಿದೆ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈಓವರ್, ಬೆಂಗಳೂರಿನ ಅತ್ಯಂತ ನಿಬಿಡ ಜಂಕ್ಷನ್‌ಗಳಲ್ಲಿನ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂಬುವುದಕ್ಕೆ ಇದು ನಿದರ್ಶನವಾಗಿದೆ ಎಂದು ಸಿಎಂ ಹೇಳಿದರು.

ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಲೇನ್ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ ಇನ್ನೂ ಬಹಳಷ್ಟಿದೆ. ಎರಡನೇ ಹಂತದ ಮಾರ್ಗದ ಕಾರ್ಯಾಚರಣೆಯೊಂದಿಗೆ, ನಾವು 117 ಕಿ.ಮೀ ಮೆಟ್ರೋ ಸಂಪರ್ಕ ಸಾಧಿಸಲಿದ್ದೇವೆ. ಇದರಿಂದ 15 ಲಕ್ಷ ಮಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಾಗಲಿದೆ ಎಂದು ತಿಳಿಸಿದರು.

ಮೆಟ್ರೋ 2ಎ ಮತ್ತು 2ಬಿ ಹಂತದಲ್ಲಿ ಹೊರ ವರ್ತುಲ ರಸ್ತೆ ಮತ್ತು ವಿಮಾನ ನಿಲ್ದಾಣ ಸಂಪರ್ಕಿಸುವ 58 ಕಿ.ಮೀ ಉದ್ದದ ರೂ.15,131 ಕೋಟಿ ವೆಚ್ಚದ ಮಾರ್ಗ 2027ರ ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಈ ಮಾರ್ಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರವನ್ನು ಜೋಡಿಸಲಿದೆ ಎಂದು ಸಿಎಂ ವಿವರಿಸಿದರು.

ಹಂತ-3ರ 44.65 ಕಿ.ಮೀ ಉದ್ದದ ರೂ.15,611 ಕೋಟಿ ಹೂಡಿಕೆಯ ಮಾರ್ಗ ಬೆಂಗಳೂರು ನಗರದ ಸಂಪರ್ಕ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲಿದೆ. ಇದರ ಸಿವಿಲ್ ಕಾಮಗಾರಿಗಳು ಸದ್ಯದಲ್ಲಿಯೇ ಆರಂಭವಾಗಲಿದೆ. ಮೆಟ್ರೋ ಹಂತ 4ರಲ್ಲಿ 53 ಕಿ.ಮೀ ಉದ್ದದ ಡಬಲ್ ಡೆಕ್ಕರ್-ಕಂ-ಮೆಟ್ರೋ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಹೇಳಿದರು.

2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ. 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ. ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ನಂತಹ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಸದೃಢಗೊಳ್ಳುವ ವಿಶ್ವಾಸ ನನಗಿದೆ ಎಂದರು.

ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....