Homeಕರ್ನಾಟಕಇಂದಿನಿಂದ ವಿಧಾನಮಂಡಲದ ಅಧಿವೇಶನ: ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಇಂದಿನಿಂದ ವಿಧಾನಮಂಡಲದ ಅಧಿವೇಶನ: ಉಭಯ ಪಕ್ಷಗಳ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

- Advertisement -
- Advertisement -

ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಇಂದಿನಿಂದ (ಆಗಸ್ಟ್ 11, ಸೋಮವಾರ) ಆರಂಭಗೊಳ್ಳಲಿದೆ. ಈಗಾಗಲೇ ಆಡಳಿತ ಮತ್ತು ಪ್ರತಿಪಕ್ಷಗಳು ತಮ್ಮ ತಮ್ಮ ಅಸ್ತ್ರಗಳನ್ನು ಸಿದ್ದಪಡಿಸಿಕೊಂಡು ಸದನ ಕಣದಲ್ಲಿ ಕದನಕ್ಕೆ ಸಿದ್ದತೆ ಮಾಡಿಕೊಂಡಿವೆ.

ಆಗಸ್ಟ್ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಿದ್ದತೆ ಮಾಡಿಕೊಂಡರೆ, ಅತ್ತ ಆಡಳಿತ ಪಕ್ಷ ಕೂಡ ಕೆಲವೊಂದು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ತಯಾರಿ ನಡೆಸಿದೆ.

ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷಗಳು ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆ, ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ, ಧರ್ಮಸ್ಥಳದ ಎಸ್‌ಐಟಿ ತನಿಖೆ, ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ದುರಂತ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ರಸ್ತೆ ಸಾರಿಗೆ ನೌಕರರ ಮುಷ್ಕರ, ಬೆಂಗಳೂರಿನಲ್ಲಿ ಬಾಲಕನನ್ನು ಅಪಹರಿಸಿ ಹತ್ಯೆ ಮತ್ತು ರಾಜ್ಯದ ವಿವಿದೆಡೆ ನಡೆದ ಕೊಲೆಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದು.

ಅಲ್ಲದೆ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆ, ಹಳೆ ವರದಿ ಅಂಗೀಕರಿಸದೇ ಹೊಸ ಜಾತಿ ಗಣತಿ ನಿರ್ಧಾರ, ಎಸ್‌ಸಿ-ಎಸ್‌ಟಿಗೆ ಮೀಸಲಾದ ಅನುದಾನ ಬೇರೆಡೆ ವರ್ಗಾವಣೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ, ಬಿಜೆಪಿ ಶಾಸಕರನ್ನ ಗುರಿಯಾಗಿಸಿ ಎಫ್‌ಐಆರ್, ಮಹದಾಯಿ ವಿವಾದ ಇತ್ಯಾದಿ ವಿಷಯಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ಏರ್ಪಡುವ ಸಾಧ್ಯತೆ ಇದೆ.

ಆಡಳಿತ ಪಕ್ಷ, ಕಾರು ಚಾಲಕನ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ದ ಎಫ್‌ಐಆರ್ ದಾಖಲಾಗಿರುವುದು, ರೌಡಿ ಶೀಟರ್ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿರುವುದು, ಕೇಂದ್ರ ಸರ್ಕಾರ ಸರಿಯಾಗಿ ರಸಗೊಬ್ಬರ ಪೂರೈಸಿಲ್ಲ ಎಂಬ ಆರೋಪ ಮತ್ತು ವಿಶೇಷವಾಗಿ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷವನ್ನು ಕಟ್ಟಿ ಹಾಕುವ ಸಾಧ್ಯತೆ ಇದೆ.

ಈ ನಡುವೆ, ಒಳಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್‌ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒತ್ತಾಯಿಸುವ ಸಾಧ್ಯತೆ ಇದೆ. ಈ ಬಗ್ಗೆ ಆಗಸ್ಟ್ 16ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದು, ಆ ಬಳಿಕ ಸರ್ಕಾರ ಸದನದಲ್ಲಿ ಹೇಳಿಕೆ ನೀಡುವ ಸಾಧ್ಯತೆ ಇದೆ.

ಕಳೆದ ಅಧಿವೇಶನದ ಕಲಾಪದ ವೇಳೆ ಅಮಾನತ್ತಿಗೆ ಒಳಗಾಗಿದ್ದ 18 ಶಾಸಕರ ಅಮಾನತು ರದ್ದು ಕ್ರಮವನ್ನು ಸಭಾಧ್ಯಕ್ಷರು ಸೋಮವಾರವೇ ಪ್ರಕಟಿಸಲಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸದನದಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಈ ಬಾರಿಯ ಅಧಿವೇಶನದಲ್ಲಿ ‘ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ 2025’, ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ)ಮಸೂದೆ 2025 ಸೇರಿದಂತೆ 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಿದ್ದತೆ ನಡೆಸಿದೆ ಎಂಬ ಮಾಹಿತಿ ದೊರೆತಿದೆ.

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...