Homeಕರ್ನಾಟಕಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ:...

ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವು ಭಾವಿಸುತ್ತೇವೆ. ಆದ್ದರಿಂದ, ಅವರ ಸಮುದಾಯ ಪರವಾದ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಹೇಳಿದರು.

ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಇಂದಿನಿಂದ ಆರಂಭವಾಗಿರುವ ಅಧೀವೇಶನದಲ್ಲಿ ಒಳಮಿಸಲಾತಿ ವಿಚಾರ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕೆ ನಾವು ಈ ಹೋರಾಟ ಆರಂಭಿಸಿದ್ದೇವೆ; ಇದು ಆರಂಭ ಮಾತ್ರ. ಇಲ್ಲಿ ಹಲವು ತಜ್ಞರು ಮತ್ತು ಹೋರಾಟಗಾರರು ಬಂದಿದ್ದಾರೆ. ಇದು ಯಾವುದೋ ಒಂದು ಸಂಘಟನೆಯ ಹೋರಾಟವಲ್ಲ, ಇದು ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟ. ಒಳ ಮೀಸಲಾತಿ ಕುರಿತು ನಾವು ಇಲ್ಲಿ ಮುಕ್ತವಾಗಿ ಚರ್ಚೆ ಮಾಡಬೇಕಿದೆ” ಎಂದರು.

“ಮೊದಲು ಜಸ್ಟೀಸ್ ನಾಗಮೋಹನ್‌ ದಾಸ್‌ ವರದಿ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು, ಸಣ್ಣಪುಟ್ಟ ಬದಲಾವಣೆಗಳಿದ್ದರೆ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಸಂಪುಟ ಉಪ ಸಮಿತಿ ರಚನೆ ಮಾಡುವ ಮೂಲಕ ಇದನ್ನು ಮುಂದೂಡಬಾರದು” ಎಂದರು.

“ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವೆಲ್ಲರೂ ಭಾವಿಸುತ್ತೇವೆ, ಅವರ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಮಾದಿಗ ಸಮುದಾಯ 35 ವರ್ಷಗಳ ಕಾಲ ಮಾಡಿರುವ ಹೋರಾಟ ಯಾವುದೋ ಒಂದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ನಾವು ಒಂದು ಪಕ್ಷದ ಪರವಾಗಿ ನಿಂತಿರಬಹುದು. ಆದ್ದರಿಂದ ಕಾಂಗ್ರೆಸ್ ಪಕ್ಷ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಕೂಡಲೇ ಅಂಗೀಕರಿಸಬೇಕು” ಎಂದು ಆಗ್ರಹಿಸಿದರು.

“ಜ್ಞಾನ ಪ್ರಕಾಶ ಸ್ವಾಮೀಜಿ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಸುಟ್ಟಿದ್ದು ಸರಿಯಲ್ಲ. ಆ ಮೂಲಕ ನೀವು ಒಂದೂವರೆ ಕೋಟಿ ಜನಸಂಖ್ಯೆಯ ಬದುಕನ್ನು ಸುಡಲು ಹೊರಟಿದ್ದೀರಿ. ಜ್ಞಾನಪ್ರಕಾಶ ಸ್ವಾಮೀಜಿ ಮಾಡಿದ್ದು ಸರಿಯಲ್ಲ; ಒಳ ಮೀಸಲಾತಿಯ ಹಿಂದಿನ ಹೋರಾಟದಲ್ಲಿ ಅವರು ನಮ್ಮೊಂದಿಗೆ ಇದ್ದರು. ಈ ಆದಿ ಕರ್ನಾಟಕ-ಆದಿ ದ್ರಾವಿಡ ವಿವಾದವನ್ನು ನಾವು ಮಾತನಾಡುವುದು ಸರಿಯಲ್ಲ. ಯಾವ ಜಾತಿ ಯಾವ ಗುಂಪಿನಲ್ಲಿ ಇರಬೇಕು ಎಂಬುದನ್ನು ಅದೇ ಸಮುದಾಯ ನಿರ್ಧರಿಸಬೇಕು. ಬೇಕಿದ್ದರೆ ನೀವು ಸರ್ಕಾರದೊಂದಿಗೆ ಚರ್ಚೆ ಮಾಡಿ, ಈ ಬಿಡಾರಕ್ಕೆ ಬಂದು ನೀವು ನಮ್ಮೊಂದಿಗೆ ಮುಕ್ತವಾಗಿ ಚರ್ಚೆ ಮಾಡಿ. ನಾವೇ ಕೂತು ಮಾತನಾಡಿ ಸಮಸ್ಯೆ ಬಗೆಹರಿಸಕೊಳ್ಳಬೇಕು” ಎಂದರು.

ಹಕ್ಕೊತ್ತಾಯಗಳು:

• ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯನ್ನು ಅಧಿವೇಶನದಲ್ಲಿ ಅಂಗೀಕರಿಸಿ, ಒಳಮೀಸಲಾತಿ ಜಾರಿಗೊಳಿಸಬೇಕು.
• ಮತ್ತೊಂದು ಉಪ ಸಮಿತಿ ರಚಿಸದೇ, ಸಚಿವ ಸಂಪುಟದಲ್ಲಿ ಜಾರಿಗೆ ಒಮ್ಮತದ ನಿರ್ಧಾರ ಕೈಗೊಳ್ಳಬೇಕು.
• ಮುಖ್ಯಮಂತ್ರಿಗಳು ತಾವೇ ನೀಡಿದ್ದ ಒಳಮೀಸಲಾತಿ ಗ್ಯಾರಂಟಿಯನ್ನು ತಮ್ಮ ಪರಮಾಧಿಕಾರ ಬಳಸಿ ಜಾರಿಮಾಡಬೇಕು.
• ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು.

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...