Homeಕರ್ನಾಟಕಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

- Advertisement -
- Advertisement -

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ.ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, “ಸೆಪ್ಟೆಂಬರ್ 20, 2020ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ಅಕ್ಕೈ ಹೇಳಿದ್ದಾರೆ.

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅಕ್ಕೈ ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಟ್ರಾನ್ಸ್ಜೆಂಡರ್ ಸಮುದಾಯ, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ರಾಜೀನಾಮೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅಕ್ಕೈ, “ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ರಾಜಕಾರಣಿಗಳ ಟ್ರಾನ್ಸ್ಜೆಂಡರ್ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ ಅಕ್ಕೈ, ರಾಜಕೀಯ ವಾತಾವರಣವನ್ನು ಟೀಕಿಸಿದ್ದಾರೆ. ಚಳುವಳಿಯು ಇತರ ಎಲ್ಲಾ ವ್ಯವಸ್ಥೆಗಳಿಗಿಂತ ಹೆಚ್ಚು ಪ್ರಬಲವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ನಿರ್ಧಾರ ಮಾಡಿದ್ದೇನೆ” ಎಂದಿದ್ದಾರೆ.

ಲಿಂಗತ್ವ ಮತ್ತು ಲೈಂಗಿಕತೆಯ ವಿಷಯಗಳ ಬಗ್ಗೆ ರಾಜಕೀಯ ಪ್ರಬುದ್ಧತೆಗೆ ಕರೆ ನೀಡಿದ ಅವರು, “ಲಿಂಗತ್ವ ಮತ್ತು ಲೈಂಗಿಕತೆಯ ಬಗ್ಗೆ ಮಾತನಾಡುವವರು ಬಹಳ ಕಡಿಮೆ. ಪ್ರತಿಯೊಂದು ರಾಜಕೀಯ ಪಕ್ಷವು ಸಾಂಕೇತಿಕವಾಗಿ ಮಾತ್ರ ಅಲ್ಲದೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವ ಆಂತರಿಕ ದೃಢಸಂಕಲ್ಪದ ಬಗ್ಗೆ ಮಾತನಾಡಬೇಕು” ಎಂದು ಆಗ್ರಹಿಸಿದ್ದಾರೆ.

“ನನಗೆ ರಾಜಕೀಯ ಬೇಕಾ..ಚಳುವಳಿ ಬೇಕಾ? ಎಂದು ಯೋಚಿಸಿದಾಗ ಚಳುವಳಿಯೇ ಸೂಕ್ತ ಆಯ್ಕೆ ಎಂದನಿಸಿತು. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಸಮುದಾಯದ ಹಕ್ಕುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯತೆ ಇದೆ. ಅದು ಈಗಿನ ರಾಜಕೀಯ ವ್ಯವಸ್ಥೆಯೊಳಗೆಯಿದ್ದು ಸಾಧ್ಯವಿಲ್ಲ. ಹಾಗಾಗಿ, ಅದರಿಂದ ಹೊರಬಂದೆ” ಎಂದು ಅಕ್ಕೈ ತಿಳಿಸಿದ್ದಾರೆ.

ಸಚಿವ ಕೆ.ಎನ್. ರಾಜಣ್ಣ ವಜಾ: ಕಾಂಗ್ರೆಸ್‌ನ ‘ದಲಿತ ವಿರೋಧಿ’ ಮುಖವಾಡ ಬಯಲು- ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...