Homeಕರ್ನಾಟಕ'ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ': ಕರ್ನಾಟಕದಲ್ಲಿ ಎನ್‌ಇಪಿ ಸ್ಥಗಿತ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

‘ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ’: ಕರ್ನಾಟಕದಲ್ಲಿ ಎನ್‌ಇಪಿ ಸ್ಥಗಿತ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನುಷ್ಠಾನ ಸ್ಥಗಿತಗೊಳಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 2023ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ಮಂಗಳವಾರ (ಆಗಸ್ಟ್ 12) ವಜಾಗೊಳಿಸಿದೆ.

ಅರ್ಜಿದಾರರು ಯಾವುದೇ ಮೂಲಭೂತ/ಶಾಸನಬದ್ಧ ಹಕ್ಕುಗಳ ಉಲ್ಲಂಘನೆಯನ್ನು ಉಲ್ಲೇಖಿಸಿದ ಅಥವಾ ಸಾಬೀತಪಡಿಸದ ಹೊರತು, ನೀತಿ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಎನ್‌ಇಪಿ ಜಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ ವಕೀಲ ಗಿರೀಶ್‌ ಭಾರದ್ವಾಜ್‌ ಹಾಗೂ ಆರ್‌.ಆನಂದ ಮೂರ್ತಿ ಪಿಐಎಲ್ ಸಲ್ಲಿಸಿದ್ದರು.

“ನಾವು ಸರ್ಕಾರಕ್ಕೆ ನಿರ್ದಿಷ್ಟ ನೀತಿಯನ್ನು ಅನುಸರಿಸಲು ಅಥವಾ ಅನುಸರಿಸದಂತೆ ನಿರ್ದೇಶಿಸಲು ಹೇಗೆ ಸಾಧ್ಯ? ಯಾವ ಕಾನೂನಿನ ಅಡಿಯಲ್ಲಿ ನಾವು ಅವರನ್ನು (ರಾಜ್ಯ ಸರ್ಕಾರ) ನೀತಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸಲು ಒತ್ತಾಯಿಸಬಹುದು?” ಎಂದು ನ್ಯಾಯಾಧೀಶರು ವಿಚಾರಣೆಯ ಸಮಯದಲ್ಲಿ ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಅಕ್ಟೋಬರ್ 11, 2023ರಂದು ಎನ್‌ಇಪಿ ಅನುಷ್ಠಾನವನ್ನು ಹಿಂತೆಗೆದುಕೊಂಡಿತ್ತು ಮತ್ತು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ತಜ್ಞರ ಸಮಿತಿಯನ್ನು ರಚಿಸಿತ್ತು.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಅರುಣಾ ಶ್ಯಾಮ್, “ಒಂದು ರಾಷ್ಟ್ರ, ಒಂದು ಶಿಕ್ಷಣ’ ಇರಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಹಿಂದಿನ ಉದ್ದೇಶವಾಗಿದೆ” ಎಂದು ಒತ್ತಿ ಹೇಳಿದ್ದರು.

“ಎನ್‌ಇಪಿಯಿಂದ ದೇಶದಾದ್ಯಂತ ಒಂದೇ ರೀತಿಯ ಶಿಕ್ಷಣ ವ್ಯವಸ್ಥೆ ಇರುತ್ತದೆ. ಪ್ರದೇಶವಾರು ಭಿನ್ನತೆ ಇರುವುದಿಲ್ಲ. ಈ ಹಿಂದೆ ಜಾರಿಗೆ ತಂದಿದ್ದ ಮತ್ತು ಈಗ ಜಾರಿಗೆ ತರಲು ಮುಂದಾಗಿರುವ ಶಿಕ್ಷಣ ನೀತಿಯಿಂದ ಸಮಸ್ಯೆಗಳಿವೆ” ಎಂದಿದ್ದರು.

“ಕೇಂದ್ರ ಸರ್ಕಾರವು ಎನ್ಇಪಿ ಜಾರಿಗೊಳಿಸಲು ಹೆಚ್ಚಿನ ಹಣವನ್ನು ಒದಗಿಸಿದೆ. ಈಗ ಅದನ್ನು ಸ್ಥಗಿತಗೊಳಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತದೆ” ಎಂದು ಅರುಣ್ ಶ್ಯಾಮ್ ಹೇಳಿದ್ದರು.

Courtesy : livelaw.in

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್:  ಒಳಮೀಸಲಾತಿ ಹೋರಾಟಗಾರರ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...