Homeಮುಖಪುಟದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

ದೆಹಲಿ ಬೀದಿ ನಾಯಿ ಸಮಸ್ಯೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್; ಅಧಿಕಾರಿಗಳಿಗೆ ತರಾಟೆ

- Advertisement -
- Advertisement -

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ಮನೆಗಳಿಗೆ ಸ್ಥಳಾಂತರಿಸುವಂತೆ ಆಗಸ್ಟ್ 11ರಂದು ಇಬ್ಬರು ನ್ಯಾಯಾಧೀಶರ ಪೀಠ ಹೊರಡಿಸಿದ ನಿರ್ದೇಶನಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ (ಆ.14) ಕಾಯ್ದಿರಿಸಿದೆ.

ಒಂದೆಡೆ ಜನರು ಬೀದಿ ನಾಯಿಗಳಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಪ್ರಾಣಿ ಪ್ರಿಯರು ಬೀದಿ ನಾಯಿಗಳ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿಗಿಳಿದಿದ್ದಾರೆ. ಈ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು, ಬೀದಿ ನಾಯಿಗಳ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದವರು, ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಇತರರಿಂದ ವಿವರವಾದ ವಾದ-ಪ್ರತಿವಾದಿಗಳನ್ನು ಆಲಿಸಿ, ಅವರಿಂದ ದಾಖಲೆಗಳನ್ನು ಸ್ವೀಕರಿಸಿ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

“ಬೀದಿ ನಾಯಿಗಳ ವಿಚಾರದಲ್ಲಿ ಸರ್ಕಾರ ಏನೂ ಮಾಡುತ್ತಿಲ್ಲ. ಅಧಿಕಾರಿಗಳೂ ಕೂಡ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಈ ವಿಚಾರದಲ್ಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಇಲ್ಲಿ ಮಧ್ಯ ಪ್ರವೇಶ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರೂ ಈ ವಿಚಾರದಲ್ಲಿ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೆಹಲಿ-ಎನ್‌ಸಿಆರ್ ಪ್ರದೇಶದ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು 8 ವಾರಗಳ ಒಳಗೆ ಆಶ್ರಯ ಮನೆಗಳಿಗೆ ಸ್ಥಳಾಂತರಿಸಬೇಕು. ಹಂತ ಹಂತವಾಗಿ ಆಶ್ರಯ ಮನೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಆಗಸ್ಟ್ 11ರಂದು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠ ದೆಹಲಿ ಸರ್ಕಾರದ ಅಧಿಕಾರಿಗಳಿಗೆ ಆದೇಶಿಸಿತ್ತು. ಈ ಆದೇಶಕ್ಕೆ ಗುರುವಾರ ಸುಪ್ರೀಂ ಕೋರ್ಟ್ ತಡೆ ನೀಡಿಲ್ಲ.

ದೆಹಲಿ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರತಿ ವರ್ಷ ಸುಮಾರು 37 ಲಕ್ಷ ನಾಯಿ ಕಡಿತದ ಘಟನೆಗಳು ಸಂಭವಿಸುತ್ತವೆ ಎಂದು ನ್ಯಾಯಾಲಯಕ್ಕೆ ದತ್ತಾಂಶವನ್ನು ಮಂಡಿಸಿದರು. ಪ್ರತಿದಿನ ಸರಾಸರಿ 10,000 ನಾಯಿ ಕಡಿತದ ಘಟನೆಗಳು ನಡೆಯುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್ಒ) ಅಂಕಿ ಅಂಶಗಳ ಪ್ರಕಾರ, ವಾರ್ಷಿಕವಾಗಿ 20,000 ರೇಬೀಸ್ ಸಾವುಗಳು ಸಂಭವಿಸುತ್ತವೆ ಎಂದು ಮಾಹಿತಿ ನೀಡಿದರು.

ಬೀದಿ ನಾಯಿಗಳ ಕಾಟದಿಂದಾಗಿ ಮಕ್ಕಳು ಹೊರಗೆ ಆಟವಾಡಲು ಸಾಧ್ಯವಾಗುತ್ತಿಲ್ಲ ಎಂದು ಮೆಹ್ತಾ ಒತ್ತಿ ಹೇಳಿದರು. ರೋಗ ನಿರೋಧಕತೆಗೆ ಸಂಬಂಧಿಸಿದಂತೆ ನಾಯಿಗಳಿಗೆ ಲಸಿಕೆ ಹಾಕಿದರೂ, ಅದು ಮಕ್ಕಳನ್ನು ಅಂಗವಿಕಲಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ. ಯಾರೂ ನಾಯಿಗಳನ್ನು ಕೊಲ್ಲಬೇಕೆಂದು ಹೇಳುತ್ತಿಲ್ಲ. ಜನರ ಸುರಕ್ಷತೆಗಾಗಿ ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ವಾದಿಸಿದರು.

ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ)ಯನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ಅದರ ನಿಷ್ಕ್ರಿಯತೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ ಎಂದು ಕಿಡಿಕಾರಿತು.

“ಸಂಸತ್ತು ನಿಯಮಗಳು ಮತ್ತು ಕಾನೂನುಗಳನ್ನು ರೂಪಿಸುತ್ತದೆ. ಆದರೆ, ಅವುಗಳನ್ನು ಜಾರಿಗೆ ತರುವುದಿಲ್ಲ. ಒಂದೆಡೆ, ಜನರು ಬೀದಿ ನಾಯಿಗಳಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ, ಪ್ರಾಣಿ ಪ್ರಿಯರು ಅವುಗಳ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ, ಎಲ್ಲರೂ ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ. ಈ ಪ್ರಕರಣದಲ್ಲಿ ಮಧ್ಯಪ್ರವೇಶ ಅರ್ಜಿಗಳನ್ನು ಹಾಕಿರುವ ಎಲ್ಲರೂ ಅಫಿಡವಿಟ್‌ಗಳನ್ನು ಸಲ್ಲಿಸಬೇಕು ಮತ್ತು ಪುರಾವೆಗಳನ್ನು ಒದಗಿಸಬೇಕು” ಎಂದು ಪೀಠ ಹೇಳಿದೆ.

ಆಗಸ್ಟ್ 11ರ ಆದೇಶವನ್ನು ಪ್ರಶ್ನಿಸಿದ ಎಲ್ಲರೂ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತು.

ನ್ಯಾಯಾಲಯವು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡಾಗ, ಅರ್ಜಿದಾರರಾದ ಎನ್‌ಜಿಒಗಳು ಮತ್ತು ಇತರರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಆಗಸ್ಟ್ 11ರ ಆದೇಶಕ್ಕೆ ತಡೆ ನೀಡುವಂತೆ ಕೋರಿದರು. ಬೀದಿ ನಾಯಿಗಳನ್ನು ಸಾಕಲು ಸಾಕಷ್ಟು ಆಶ್ರಯ ಮನೆಗಳಿಲ್ಲ ಎಂದು ಹೇಳಿದರು.

ಪರ್ಯಾಯವಾಗಿ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ನಿಯಮಗಳು ಈಗಾಗಲೇ ಜಾರಿಯಲ್ಲಿವೆ ಮತ್ತು ಈ ವಿಷಯದ ಬಗ್ಗೆ ಸಂಸತ್ತಿನ ಶಾಸನವಿದೆ ಎಂದು ಸಿಬಲ್ ವಾದಿಸಿದರು.

ಆಗಸ್ಟ್ 11ರ ಆದೇಶವನ್ನು ಪ್ರಶ್ನಿಸಿದ ಅವರು, “ಎಂಸಿಡಿ ಇಲ್ಲಿಯವರೆಗೆ ಏನು ಮಾಡಿದೆ? ಅವರು ವರ್ಷಗಳಿಂದ ಏನು ಮಾಡುತ್ತಿದ್ದಾರೆ? ಅವರು ಆಶ್ರಯ ಮನೆಗಳನ್ನು ನಿರ್ಮಿಸಿದ್ದಾರೆಯೇ? ಅವರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡದ ಕಾರಣ, ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಅವುಗಳಿಗೆ ಮಾಲೀಕರಿಲ್ಲದ ಕಾರಣ, ಸಮುದಾಯವು ಅವುಗಳನ್ನು ನೋಡಿಕೊಳ್ಳುತ್ತಿದೆ” ಎಂದು ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...