Homeಮುಖಪುಟಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಆವರಣದಲ್ಲೇ ನಡೆದ ಮರು ಮತಎಣಿಕೆ

- Advertisement -
- Advertisement -

ಅಪರೂಪದ ವಿದ್ಯಮಾನವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ಇವಿಎಂ ಯಂತ್ರಗಳನ್ನು ತರಿಸಿಕೊಂಡ ಸುಪ್ರೀಂ ಕೋರ್ಟ್, ತನ್ನ ಆವರಣದೊಳಗೇ ರಿಜಿಸ್ಟ್ರಾರ್ ಮೂಲಕ ಮರು ಮತಎಣಿಕೆ ನಡೆಸಿ, ಹರಿಯಾಣದ ಗ್ರಾಮ ಪಂಚಾಯತ್ ಒಂದರ ‘ಸರ್ಪಂಚ್’ ಚುನಾವಣೆಯ ಫಲಿತಾಂಶವನ್ನೇ ರದ್ದುಗೊಳಿಸಿದೆ.

ಮರು ಮತ ಎಣಿಕೆಯಲ್ಲಿ ಚುನಾವಣೆಯಲ್ಲಿ ಸೋತಿದ್ದರು ಎನ್ನಲಾಗಿದ್ದ ಅಭ್ಯರ್ಥಿ 51 ಹೆಚ್ಚು ಮತಗಳನ್ನು ಪಡೆದಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಚುನಾವಣಾ ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಒಳಪಟ್ಟು, ಪಾಣಿಪತ್‌ನ ಉಪ ಆಯುಕ್ತ ಹಾಗೂ ಚುನಾವಣಾ ಅಧಿಕಾರಿಗೆ ಸೋತ ಅಭ್ಯರ್ಥಿ (ಅರ್ಜಿದಾರ) ಯನ್ನು ಗ್ರಾಮ ಪಂಚಾಯತ್‌ನ ಚುನಾಯಿತ ‘ಸರ್ಪಂಚ್’ ಎಂದು ಘೋಷಿಸುವ ಅಧಿಸೂಚನೆಯನ್ನು 2 ದಿನಗಳಲ್ಲಿ ಹೊರಡಿಸುವಂತೆ ನಿರ್ದೇಶಿಸಿದೆ.

ಅರ್ಜಿದಾರರು ಸದರಿ ಹುದ್ದೆಯನ್ನು ತಕ್ಷಣವೇ ವಹಿಸಿಕೊಳ್ಳಲು ಮತ್ತು ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

“ಈ ನ್ಯಾಯಾಲಯದ ರಿಜಿಸ್ಟ್ರಾರ್ (ಒಎಸ್‌ಡಿ) ಸಲ್ಲಿಸಿದ ವರದಿಯನ್ನು ಪ್ರಾಥಮಿಕವಾಗಿ ಅನುಮಾನಿಸಲು ಯಾವುದೇ ಕಾರಣಗಳಿಲ್ಲ. ವಿಶೇಷವಾಗಿ ಸಂಪೂರ್ಣ ಮರುಎಣಿಕೆಯನ್ನು ಸರಿಯಾಗಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಮತ್ತು ಅದರ ಫಲಿತಾಂಶಕ್ಕೆ ಪಕ್ಷಗಳ ಪ್ರತಿನಿಧಿಗಳು ಸಹಿ ಮಾಡಿದ್ದಾರೆ. ಮೇಲ್ಮನವಿದಾರರು 22.11.2022ರಂದು ನಡೆದ ಚುನಾವಣೆಯಲ್ಲಿ ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲಖು ಗ್ರಾಮ ಪಂಚಾಯತ್‌ನ ಚುನಾಯಿತ ಸರ್ಪಂಚ್ ಎಂದು ಘೋಷಿಸಲು ಅರ್ಹರು ಎಂದು ನಾವು ತೃಪ್ತರಾಗಿದ್ದೇವೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಆದೇಶಿಸಿದೆ.

ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಕಾಂತ್ ಅವರು, ಪ್ರತಿವಾದಿ ನಂ.1 (ಈ ಹಿಂದೆ ಆಯ್ಕೆಯಾಗಿದ್ದ ಅಭ್ಯರ್ಥಿ) ಅನ್ನು ದೂಷಿಸುವಂತಿಲ್ಲ. “ಈ ಎಲ್ಲಾ ಪ್ರಮಾದಗಳು ಕೇವಲ ಒಂದು ಮತಗಟ್ಟೆಯಲ್ಲಿ ಮಾತ್ರ ಸಂಭವಿಸಿವೆ. ಚುನಾವಣಾಧಿಕಾರಿ/ಎಣಿಕೆ ಅಧಿಕಾರಿ ಸಂಪೂರ್ಣ ಅವ್ಯವಸ್ಥೆ ಸೃಷ್ಟಿಸಿದ್ದಾರೆ. ಅವರೇ ಪ್ರಮಾದ ಎಸಗಿದ್ದಾರೆ. ಈ ರೀತಿಯ ವಿಷಯಗಳಲ್ಲಿ, ಒಂದೇ ಪರಿಹಾರವೆಂದರೆ, ಮರು ಎಣಿಕೆ ನಡೆಸುವುದು. ಹೈಕೋರ್ಟ್ ಮರುಎಣಿಕೆ ನಿರಾಕರಿಸಲು 15 ಪುಟಗಳ ವಿವರಣೆ ನೀಡುತ್ತದೆ ಎಂದು ನಾವು ಎಂದಿಗೂ ಭಾವಿಸಿರಲಿಲ್ಲ” ಎಂದು ಹೇಳಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಈ ಪ್ರಕರಣವು 2022ರಲ್ಲಿ ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರ್ಪಂಚ್ ಚುನಾವಣೆಗೆ ಸಂಬಂಧಿಸಿದೆ. ಆರಂಭದಲ್ಲಿ, ಪ್ರತಿವಾದಿ ನಂ.1-ಕುಲದೀಪ್ ಸಿಂಗ್ ಅವರನ್ನು ಚುನಾಯಿತರೆಂದು ಘೋಷಿಸಲಾಗಿತ್ತು. ಆದಾಗ್ಯೂ, ಅದೇ ದಿನ, ಚುನಾವಣಾಧಿಕಾರಿಯು ಒಂದು ಬೂತ್‌ನಲ್ಲಿ ಫಲಿತಾಂಶವನ್ನು ಸಿದ್ಧಪಡಿಸುವಲ್ಲಿನ ದೋಷದಿಂದಾಗಿ, ಸ್ವಯಂಪ್ರೇರಿತವಾಗಿ ಮತಗಳ ಮರುಎಣಿಕೆಗೆ ಆದೇಶಿಸಿದರು. ಫಲಿತಾಂಶವನ್ನು ಮರು ಎಣಿಕೆ ನಡೆಸಿದ ನಂತರ, ಅರ್ಜಿದಾರರಾದ ಮೋಹಿತ್ ಕುಮಾರ್ ಅವರನ್ನು ಚುನಾಯಿತರೆಂದು ಘೋಷಿಸಲಾಗಿತ್ತು.

ಇದರಿಂದ ಬೇಸತ್ತ ಕುಲದೀಪ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಕುಲದೀಪ್ ಸಿಂಗ್ ಪರವಾಗಿ ತೀರ್ಪು ನೀಡಿತ್ತು. ಅಭ್ಯರ್ಥಿಯೊಬ್ಬರು ಆಯ್ಕೆಯಾದ ನಂತರ, ಮತಗಳ ಮರು ಎಣಿಕೆಯ ಮೂಲಕ ಫಲಿತಾಂಶವನ್ನು ಸ್ವಯಂಪ್ರೇರಿತವಾಗಿ ಬದಲಾಯಿಸಲು ಸಾಧ್ಯವಿಲ್ಲ. ನೊಂದ ಪಕ್ಷಕ್ಕೆ ಲಭ್ಯವಿರುವ ಸೂಕ್ತ ಪರಿಹಾರವೆಂದರೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸುವುದು ಎಂದು ಹೈಕೋರ್ಟ್ ಹೇಳಿತ್ತು. ಈ ದೃಷ್ಟಿಕೋನದಿಂದ, ಹೈಕೋರ್ಟ್ ಮೋಹಿತ್ ಕುಮಾರ್ ಅವರ ಆಯ್ಕೆಯನ್ನು ರದ್ದುಗೊಳಿಸಿ, ಕುಲದೀಪ್ ಸಿಂಗ್ ಅವರನ್ನು ಚುನಾಯಿತ ‘ಸರ್ಪಂಚ್’ ಎಂದು ಘೋಷಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ತರುವಾಯ, ಮೋಹಿತ್ ಕುಮಾರ್ ಚುನಾವಣಾ ತರಕಾರು ಅರ್ಜಿಯನ್ನು ಸಲ್ಲಿಸಿದ್ದರು. ಅದಕ್ಕೆ, ಕುಲದೀಪ್ ಸಿಂಗ್ ಮಿತಿಯ ಆಧಾರದ ಮೇಲೆ ಪ್ರಾಥಮಿಕ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದರು. ಬಳಿಕ ಈ ವಿಷಯವು ಸುಪ್ರೀಂ ಕೋರ್ಟ್‌ ತಲುಪಿತ್ತು. ಸುಪ್ರೀಂ ಕೋರ್ಟ್ ಕುಲದೀಪ್ ಸಿಂಗ್ ಅವರ ಆಕ್ಷೇಪಣೆಯನ್ನು ತಿರಸ್ಕರಿಸಿತ್ತು ಮತ್ತು ನಾಲ್ಕು ತಿಂಗಳೊಳಗೆ ಪ್ರಕರಣವನ್ನು ನಿರ್ಧರಿಸುವಂತೆ ಚುನಾವಣಾ ನ್ಯಾಯಮಂಡಳಿಗೆ ನಿರ್ದೇಶಿಸಿತ್ತು.

ಈ ವರ್ಷದ ಏಪ್ರಿಲ್‌ನಲ್ಲಿ, ಚುನಾವಣಾ ನ್ಯಾಯಮಂಡಳಿಯು ಒಂದು ಮತಗಟ್ಟೆಯ (ಬೂತ್ ಸಂಖ್ಯೆ 69) ಮತಗಳ ಮರು ಎಣಿಕೆ ಅಗತ್ಯವೆಂದು ತೀರ್ಪು ನೀಡಿತ್ತು. ಉಪ ಆಯುಕ್ತ ಹಾಗೂ ಚುನಾವಣಾ ಅಧಿಕಾರಿಗೆ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶಿಸಲಾಗಿತ್ತು. ಆದಾಗ್ಯೂ, ಕುಲದೀಪ್ ಸಿಂಗ್ ಅವರ ಮೇಲ್ಮನವಿಯ ಮೇರೆಗೆ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದರಿಂದ ಬೇಸತ್ತ ಮೋಹಿತ್ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಜುಲೈನಲ್ಲಿ, ಸುಪ್ರೀಂ ಕೋರ್ಟ್ ಸಂಬಂಧಪಟ್ಟ ಇವಿಎಂಗಳನ್ನು ನಾಮನಿರ್ದೇಶಿತ ರಿಜಿಸ್ಟ್ರಾರ್ ಮುಂದೆ ಹಾಜರುಪಡಿಸಲು ಆದೇಶಿಸಿತ್ತು. ಅವರು ಬೂತ್ ಸಂಖ್ಯೆ 69 ಕ್ಕೆ ಮಾತ್ರವಲ್ಲದೆ ಎಲ್ಲಾ ಬೂತ್‌ಗಳಿಗೂ ಮತಗಳ ಮರುಎಣಿಕೆ ಮಾಡಬೇಕಾಗಿತ್ತು. ಮರುಎಣಿಕೆಯನ್ನು ವೀಡಿಯೊ ರೆಕಾರ್ಡ್ ಮಾಡಲು ಮತ್ತು ಪಕ್ಷಗಳ ಏಜೆಂಟರು ಹಾಜರಿರಲು ಅನುಮತಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರನ್ನು ನಾಮನಿರ್ದೇಶನ ಮಾಡಲಾಗಿತ್ತು. ಅವರು 5 ಬೂತ್‌ಗಳ ಮತಗಳ ಮರುಎಣಿಕೆಯನ್ನು ನಡೆಸಿದ್ದರು. ಪರಿಷ್ಕೃತ ಫಲಿತಾಂಶದಲ್ಲಿ ಮೋಹಿತ್ ಕುಮಾರ್, ಕುಲದೀಪ್ ಸಿಂಗ್ ಗಿಂತ 51 ಮತಗಳನ್ನು ಹೆಚ್ಚು ಪಡೆದಿದ್ದಾರೆ ಎಂದು ರಿಜಿಸ್ಟ್ರಾರ್ ವರದಿ ಕೊಟ್ಟಿದ್ದರು.

ಆಗಸ್ಟ್ 11ರಂದು, ನ್ಯಾಯಾಲಯವು ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಲು ಮತ್ತು ಅರ್ಜಿದಾರರನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ವಿಚಾರಣೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಿತ್ತು. ಈ ನಡುವೆ, ಪ್ರತಿವಾದಿ ನಂ.1 ನ್ಯಾಯಮಂಡಳಿಯ ಮುಂದೆ ಕೆಲವು ಇತರ ವಿಷಯಗಳು ಇನ್ನೂ ಇತ್ಯರ್ಥವಾಗಬೇಕಿದೆ ಎಂದು ವಾದಿಸಿದ್ದರಿಂದ, ಪಕ್ಷಗಳು ತಮ್ಮ ಸಮಸ್ಯೆಗಳು, ಯಾವುದಾದರೂ ಇದ್ದರೆ, ನ್ಯಾಯಮಂಡಳಿಯ ಮುಂದೆ ವಿವರಿಸಲು ಸ್ವಾತಂತ್ರ್ಯ ಹೊಂದಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅದೇ ಸಮಯದಲ್ಲಿ, ಮತಗಳ ಮರುಎಣಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ನ್ಯಾಯಮಂಡಳಿಯು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್‌ರ ವರದಿಯನ್ನು ಅಂತಿಮ ಮತ್ತು ನಿರ್ಣಾಯಕವೆಂದು ಸ್ವೀಕರಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶವನ್ನು ಬದಿಗಿಟ್ಟು, ಅರ್ಜಿದಾರರು ಸರ್ಪಂಚ್ ಆಗಿ ಘೋಷಿಸುವುದು ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದಿದೆ.

ಗುಜರಾತ್‌| ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ತಲೆಮರೆಸಿಕೊಂಡ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...