Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....