HomeಮುಖಪುಟBihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣವನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಗುರುವಾರ (ಆ.14) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಬದಲು ಚುನಾವಣಾ ಆಯೋಗ ಸಮಜಾಯಿಷಿ ನೀಡುವುದನ್ನು ಮುಂದುವರಿಸಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ವೋಟ್ ಅಧಿಕಾರ್ ಯಾತ್ರಾ’ ಭಾನುವಾರ (ಆ.17) ಬಿಹಾರದಲ್ಲಿ ಪ್ರಾರಂಭಗೊಳ್ಳಲಿದೆ.

ಇದಕ್ಕೂ ಮುನ್ನ ಶನಿವಾರ (ಆ.16) ಹೇಳಿಕೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, “ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಅತ್ಯಂತ ಪಾರದರ್ಶಕತೆಯು ಮತದಾರರ ಪಟ್ಟಿ ಪರಿಷ್ಕರಣೆಯ ‘ಹಾಲ್ ಮಾರ್ಕ್’ ಎಂದು ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತ ಕಾಂಗ್ರೆಸ್‌ನ ಆರೋಪಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಚುನಾವಣಾ ಆಯೋಗ,”ಕೆಲ ರಾಜಕೀಯ ಪಕ್ಷಗಳು ಮತ್ತು ಅವುಗಳ ಬೂತ್-ಮಟ್ಟದ ಏಜೆಂಟ್‌ಗಳು (ಬಿಎಲ್‌ಎಗಳು) ಸೂಕ್ತ ಸಮಯದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಲಿಲ್ಲ ಮತ್ತು ದೋಷಗಳಿದ್ದರೆ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು /ಚುನಾವಣಾ ನೋಂದಣಿ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಅಥವಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿಲ್ಲ ಎಂದು ತೋರುತ್ತದೆ” ಎಂದಿದೆ.

ಈ ಮೂಲಕ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿದೆ. ಆದರೆ, ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿಲ್ಲ.

ಚುನಾವಣಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,”ಮತ ಕಳ್ಳತನ ಮತ್ತು ಸಾಮೂಹಿಕ ಅಕ್ರಮಗಳ ಗಂಭೀರ ಆರೋಪಗಳ ನಡುವೆಯೂ, ಚುನಾವಣಾ ಆಯೋಗವು ತನ್ನ ಎಲ್ಲಾ ಜವಾಬ್ದಾರಿಗಳನ್ನು ನಿರ್ಲಕ್ಷಿಸುವ ಮೂಲಕ ನಾಚಿಕೆಯಿಲ್ಲದೆ ಮಿತಿಗಳನ್ನು ಮೀರಿದೆ. ಸಾಂವಿಧಾನಿಕ ಅಧಿಕಾರಿಗಳು ಪ್ರಾಮಾಣಿಕತೆಯ ಸಂಕೇತವಾಗಿರಬೇಕು. ತಮ್ಮ ತಪ್ಪನ್ನು ಮರೆಮಾಚಲು ಪ್ರಜಾಪ್ರಭುತ್ವವನ್ನು ನಾಶಮಾಡುವ ಅಸ್ಪಷ್ಟ ಪತ್ರಿಕಾ ಹೇಳಿಕೆಗಳ ಹಿಂದೆ ಅಡಗಿಕೊಳ್ಳಬಾರದು” ಎಂದಿದ್ದಾರೆ.

“ಪತ್ರಿಕಾ ಹೇಳಿಕೆಯ ಸ್ವರ ಮತ್ತು ಸ್ವರೂಪವು, ಬಿಜೆಪಿ ನಿಯಂತ್ರಿತ ಚುನಾವಣಾ ಸಂಸ್ಥೆಯಿಂದ ನಡೆದಿದೆ ಎನ್ನಲಾದ ಸಾಮೂಹಿಕ ಮತದಾನ ವಂಚನೆಯ ಬಗ್ಗೆ ಸಾರ್ವಜನಿಕರ ಗಂಭೀರ ಕಳವಳಗಳನ್ನು ಪರಿಹರಿಸಲು ಚುನಾವಣಾ ಆಯೋಗ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂಬ ಹೆಚ್ಚಿನ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನೆಯನ್ನು ಸ್ವಾಗತಿಸುತ್ತದೆ ಎಂದಾದರೆ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಅಧಿಕಾರಿಗಳು ಪಕ್ಷಗಳಿಗೆ ಮೆಶಿನ್ ರೀಡೇಬಲ್ ಮತದಾರರ ಪಟ್ಟಿಯನ್ನು ನೀಡಲು ಏಕೆ ನಿರಾಕರಿಸುತ್ತಿದ್ದಾರೆ? ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಅಳಿಸಲಾಗುತ್ತಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಶುದ್ಧ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ.ರಾಜಕೀಯ ಪಕ್ಷಗಳು ಅವುಗಳ ತಯಾರಿಕೆಯ ಪ್ರತಿಯೊಂದು ಹಂತದಲ್ಲೂ ತೊಡಗಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

“ಯಾವುದಾದರೂ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಸೂಕ್ತ ಸಮಯ ಮತ್ತು ಅವಕಾಶವನ್ನು ನೀಡಲಾಗುತ್ತದೆ. ಭಾರತದಲ್ಲಿ ಸಂಸತ್ತು ಮತ್ತು ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ವ್ಯವಸ್ಥೆಯು ಕಾನೂನು ಹೇಳಿದಂತೆ ಬಹು-ಹಂತದ ವಿಕೇಂದ್ರೀಕೃತ ರಚನೆಯಾಗಿದೆ” ಎಂದಿದೆ.

ಭಾರತ ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ಎಸ್‌ಡಿಎಂ ಮಟ್ಟದ ಅಧಿಕಾರಿಗಳಾಗಿರುವ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಹಾಯದಿಂದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ ಮತ್ತು ಅಂತಿಮಗೊಳಿಸುತ್ತಾರೆ. ಮತದಾರರ ಪಟ್ಟಿಯ ನಿಖರತೆಯ ಜವಾಬ್ದಾರಿಯನ್ನು ಇಆರ್‌ಒ ಮತ್ತು ಬಿಎಲ್‌ಒ ವಹಿಸಿಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಹೇಳಿಕೆಯಲ್ಲಿ ಸೇರಿಸಲಾಗಿದೆ.

“ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, ಅದರ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಯಾರು ಬೇಕಾದರು ನೋಡುವಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತದೆ. ಕರಡು ಪಟ್ಟಿಯನ್ನು ಪ್ರಕಟಿಸಿದ ನಂತರ, ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ವಾದ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಪೂರ್ಣ ಒಂದು ತಿಂಗಳ ಅವಧಿ ಸಮಯವಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

“ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಗಳ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಹಂಚಿಕೊಳ್ಳಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯ ನಂತರ, ಎರಡು ಹಂತದ ಮೇಲ್ಮನವಿ ಪ್ರಕ್ರಿಯೆ ಲಭ್ಯವಿದೆ. ಇದರಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಎರಡನೇ ಮೇಲ್ಮನವಿಯನ್ನು ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸಿಇಒ ಅವರಿಗೆ ಸಲ್ಲಿಸಬಹುದು. ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಮತದಾರರ ಪಟ್ಟಿಯ ತಯಾರಿಕೆಯ ವಿಶಿಷ್ಟ ಲಕ್ಷಣವೆಂದರೆ ಅತ್ಯಂತ ಪಾರದರ್ಶಕತೆ” ಎಂದು ಹೇಳಿದೆ.

“ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎತ್ತಲು ಸೂಕ್ತ ಸಮಯವೆಂದರೆ ಅದು ವಾದಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ. ಇದು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳುವುದರ ಹಿಂದಿನ ಉದ್ದೇಶವಾಗಿದೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗಳನ್ನು ಸರಿಯಾದ ಮಾರ್ಗಗಳ ಮೂಲಕ ಎತ್ತಿದ್ದರೆ, ಸಂಬಂಧಪಟ್ಟ ಎಸ್‌ಡಿಎಂ/ಇಆರ್‌ಒಗಳು ಆ ಚುನಾವಣೆಗಳಿಗೆ ಮೊದಲು ತಪ್ಪುಗಳನ್ನು ಸರಿಪಡಿಸಲು ಅನುವು ಮಾಡಿಕೊಡುತ್ತಿತ್ತು. ರಾಜಕೀಯ ಪಕ್ಷಗಳು ಮತ್ತು ಯಾವುದೇ ಮತದಾರರಿಂದ ಮತದಾರರ ಪಟ್ಟಿಯ ಪರಿಶೀಲನೆಯನ್ನು ಇಸಿಐ ಸ್ವಾಗತಿಸುತ್ತಲೇ ಇದೆ. ಇದು ಎಸ್‌ಡಿಎಂ/ಇಆರ್‌ಒಗಳು ದೋಷಗಳನ್ನು ಸರಿಪಡಿಸಲು ಮತ್ತು ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ, ಇದು ನಮ್ಮ ಉದ್ದೇಶವಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ವಿವರಿಸಿದೆ.

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...