Homeಮುಖಪುಟಜಮ್ಮು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಜಮ್ಮು ಕಾಶ್ಮೀರದ ಕಥುವಾ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮವಾದ ಜೋಡ್ ಘಾಟಿಯಲ್ಲಿ ಭಾನುವಾರ (ಆ.17) ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದುರಂತದಿಂದ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ರೈತರ ಜಮೀನು ಸೇರಿದಂತೆ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮನೆಗಳು ಸೇರಿದಂತೆ ಕೆಲ ಕಟ್ಟಡಗಳು ನೀರಿನೊಂದಿಗೆ ಕೊಚ್ಚಿ ಬಂದ ಮಣ್ಣಿನಿಂದ ಸಂಪೂರ್ಣ ಆವೃತ್ತವಾಗಿವೆ. ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ಹೇಳಿವೆ.

ಸ್ಥಳೀಯ ಸ್ವಯಂ ಸೇವಕರ ಸಹಾಯ ಪಡೆದು ಘಟನಾ ಸ್ಥಳಕ್ಕೆ ತಲುಪಿರುವ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಜಂಟಿ ತಂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.

ದುರಂತ ಸ್ಥಳದಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳಲ್ಲಿ ಹಾಗೂ ಲಖನ್‌ಪುರದ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಕೂಡ ಭೂಕುಸಿತ ಸಂಭವಿಸಿದ ಬಗ್ಗೆ ವರದಿಯಾಗಿವೆ. ಆದರೆ, ಈ ಪ್ರದೇಶಗಳಲ್ಲಿ ದೊಡ್ಡ ಮಟ್ಟದ ಹಾನಿ ಸಂಭವಿಸಿಲ್ಲ ಎಂದು ವರದಿಗಳು ಹೇಳಿವೆ.

ಕಥುವಾ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಉಜ್ ನದಿ ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಜನರು ಜಾಗರೂಕರಾಗಿರುವಂತೆ ಮತ್ತು ಜಲಮೂಲಗಳ ಬಳಿ ಹೋಗದಂತೆ ಮುನ್ನೆಚ್ಚರಿಕೆ ನೀಡಿದೆ.

ಆಗಸ್ಟ್ 14ರಂದು ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಸಂಭವಿಸಿದ ಮೇಘ ಸ್ಪೋಟದಲ್ಲಿ ಸುಮಾರು 60 ಜನರು ಸಾವನ್ನಪ್ಪಿದ್ದು, ಅನೇಕರು ಇನ್ನೂ ನಾಪತ್ತೆಯಾಗಿದ್ದಾರೆ. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆ ದುರಂತದ ರಕ್ಷಣಾ ಮುಂದುವರೆಯುತ್ತಿರುವ ನಡುವೆಯೇ, ಮತ್ತೊಂದು ಅದೇ ರೀತಿಯ ದುರಂತ ಸಂಭವಿಸಿದೆ.

ಆಗಸ್ಟ್ 5ರಂದು ಉತ್ತರಾಖಂಡದ ಉತ್ತರಕಾಶಿಯ ಧರಲಿ ಮತ್ತು ಹರ್ಸಿಲ್ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಪೋಟ ದುರಂತದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ.

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...