Homeಅಂತರಾಷ್ಟ್ರೀಯಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

ಗಾಝಾ ನಗರ ವಶಕ್ಕೆ ಪಡೆಯಲು ಮುಂದಾದ ಇಸ್ರೇಲ್ ಸೇನೆ: ಬಲವಂತವಾಗಿ ಜನರ ಸ್ಥಳಾಂತರಕ್ಕೆ ಸಿದ್ಧತೆ

- Advertisement -
- Advertisement -

ಗಾಝಾ ನಗರವನ್ನು ತನ್ನ ವಶಕ್ಕೆ ಪಡೆಯಲು ಇಸ್ರೇಲ್ ಮುಂದಾಗಿದ್ದು, ಇದರ ಆರಂಭಿಕ ಹಂತವಾಗಿ ಪ್ಯಾಲೆಸ್ತೀನಿಯರನ್ನು ಯುದ್ದ ವಲಯಗಳಿಂದ (ತಮ್ಮ ಸ್ವಂತ ಊರುಗಳಿಂದ) ದಕ್ಷಿಣ ಗಾಝಾಗೆ ಬಲವಂತವಾಗಿ ಸ್ಥಳಾಂತರಿಸುವ ಸಿದ್ದತೆಯನ್ನು ಭಾನುವಾರ (ಆ.17) ಪ್ರಾರಂಭಿಸಿದೆ.

ಇಸ್ರೇಲ್ ಸೇನೆಯ ಅರೇಬಿಕ್ ಭಾಷೆಯ ವಕ್ತಾರ ಅವಿಚಾಯ್ ಅಡ್ರೇ ಶನಿವಾರ, ಗಾಝಾ ನಿವಾಸಿಗಳಿಗೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಿಹಾರ ಸಂಸ್ಥೆಗಳು ಕರೀಂ ಅಬೂ ಸಲೀಂ ಅಥವಾ ಕೆರೆಮ್ ಶಾಲೋಮ್ ಮೂಲಕ ಸಾಗಿಸುವ ಟೆಂಟ್‌ಗಳು ಮತ್ತು ಇತರ ಆಶ್ರಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಜನರ ಸ್ಥಳಾಂತರ ಯೋಜನೆಯ ಬಗ್ಗೆ ಅಥವಾ ಮಾನವೀಯ ನೆರವು ನೀಡುವಲ್ಲಿ ಅದರ ಪಾತ್ರದ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಉಳಿದಿರುವ ಎರಡು ಹಮಾಸ್ ಭದ್ರಕೋಟೆಗಳಾದ ಉತ್ತರದಲ್ಲಿ ಗಾಝಾ ನಗರ ಮತ್ತು ದಕ್ಷಿಣಕ್ಕೆ ಅಲ್-ಮವಾಸಿಯನ್ನು ‘ಕೆಡವಲು’ ಸೇನೆಗೆ ಹಸಿರು ನಿಶಾನೆ ತೋರಲಾಗಿದೆ ಎಂದು ಘೋಷಿಸಿದ ಕೆಲ ದಿನಗಳಲ್ಲೇ ಜನರ ಬಲವಂತದ ಸ್ಥಳಾಂತರಕ್ಕೆ ಇಸ್ರೇಲ್ ಸೇನೆ ಮುಂದಾಗಿದೆ.

ಗಾಝಾ ನಗರದ ಜನಸಂಖ್ಯೆ ಪ್ರಸ್ತುತ ಸುಮಾರು ಒಂದು ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಷ್ಟೂ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆಯೇ?..ದಕ್ಷಿಣ ಗಾಝಾದಲ್ಲಿ ಅವರನ್ನು ಸ್ಥಳಾಂತರಿಸುವ ಪ್ರದೇಶ ಯಾವುದು? ಈಜಿಪ್ಟ್‌ ಗಡಿಯ ಸಮೀಪವಿರುವ ರಫಾ ಪ್ರದೇಶವೇ? ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿಲ್ಲ.

ಜನರನ್ನು ಬಲವಂತವಾಗಿ ಸ್ಥಳಾಂತರಿಸಲು ಮುಂದಾಗಿರುವ ಇಸ್ರೇಲ್‌ನ ಯೋಜನೆಯ ಬಗ್ಗೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಕಳೆದ ಗುರುವಾರ ಈ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ್ದ ವಿಶ್ವಸಂಸ್ಥೆ, ಇಸ್ರೇಲ್ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಿದರೆ, ದಕ್ಷಿಣ ಗಾಝಾದಲ್ಲಿ ಪರಿಸ್ಥಿತಿ ಇನ್ನಷ್ಟು ಶೋಚಣೀಯವಾಗಲಿದೆ ಎಂದು ಎಚ್ಚರಿಸಿದೆ.

ಹಮಾಸ್‌ನ ಮಿತ್ರ ಸಂಘಟನೆಯಾದ ‘ಇಸ್ಲಾಮಿಕ್ ಜಿಹಾದ್’ ಇಸ್ರೇಲ್ ಸೇನೆಯ ಘೋಷಣೆಯನ್ನು “ಗಾಝಾ ನಗರವನ್ನು ಆಕ್ರಮಿಸಿಕೊಳ್ಳುವ ಕ್ರೂರ ದಾಳಿಯ ಭಾಗ ಮತ್ತು ಅಂತಾರಾಷ್ಟ್ರೀಯ ಸಂಪ್ರದಾಯಗಳ ಸ್ಪಷ್ಟ ಮತ್ತು ನಿರ್ಲಜ್ಜ ಅಪಹಾಸ್ಯ” ಎಂದು ಬಣ್ಣಿಸಿದೆ.

“ಹಸಿವು, ಹತ್ಯಾಕಾಂಡ ನಡುವೆ ಜನರು ಪಲಾಯನ ಮಾಡುವಂತೆ ಒತ್ತಾಯಿಸುವುದು ಮಾನವೀಯತೆಯ ವಿರುದ್ಧ ನಡೆಯುತ್ತಿರುವ ಅಪರಾಧವಾಗಿದೆ. ಗಾಝಾದಲ್ಲಿ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದೈನಂದಿನ ನಡೆಯುತ್ತಿರುವ ಆಕ್ರಮಣ ಒಂದೇ ರೀತಿಯದ್ದು ಎಂದು ಇಸ್ಲಾಮಿಕ್ ಜಿಹಾದ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಿಂದ ಸಾವಿಗೀಡಾದವರ ಅಂದಾಜು ಸಂಖ್ಯೆ 61,827ಕ್ಕೆ ಏರಿಕೆಯಾಗಿದ್ದು, ಗಾಝಾದ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಸಿವು, ಅಪೌಷ್ಟಿಕತೆಯಿಂದ ಇದುವರೆಗೆ 251 ಜನರು ಸಾವನ್ನಪ್ಪಿದ್ದಾರೆ.

ಮೇ ಅಂತ್ಯದಿಂದ ಗಾಝಾದ ನೆರವು ಕೇಂದ್ರಗಳಲ್ಲಿ ಕನಿಷ್ಠ 1,760 ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...