Homeಮುಖಪುಟಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ

- Advertisement -
- Advertisement -

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಆ.17) ಘೋಷಿಸಿದೆ.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

“ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ, ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ” ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

“ಸಿ.ಪಿ ರಾಧಾಕೃಷ್ಣನ್ ಅವರು ಒಬ್ಬ ಹಿರಿಯ, ಗೌರವಾನ್ವಿತ ವ್ಯಕ್ತಿ. ತಮಿಳುನಾಡಿನಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರ ಗೌರವವನ್ನು ಅವರು ಗಳಿಸಿದ್ದಾರೆ” ಎಂದಿದ್ದಾರೆ.

ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಎನ್‌ಡಿಎ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಧಿಕಾರ ನೀಡಿತ್ತು.

ಅವರು ಸ್ಪೂರ್ತಿದಾಯಕ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ : ಮೋದಿ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ, ಪ್ರಧಾನಿ ಮೋದಿ ಅವರು ರಾಧಾಕೃಷ್ಣನ್ ಅವರನ್ನು ಶ್ಲಾಘಿಸಿದ್ದು, ಅವರು “ಸ್ಪೂರ್ತಿದಾಯಕ ಉಪರಾಷ್ಟ್ರಪತಿ” ಆಗುತ್ತಾರೆ ಎಂದು ಹೇಳಿದ್ದಾರೆ.

“ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ಸಮರ್ಪಣೆ, ನಮ್ರತೆ ಮತ್ತು ಬುದ್ಧಿಶಕ್ತಿಯಿಂದ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಅವರು ನಿರ್ವಹಿಸಿದ ವಿವಿಧ ಹುದ್ದೆಗಳಲ್ಲಿ, ಯಾವಾಗಲೂ ಸಮುದಾಯ ಸೇವೆ ಮತ್ತು ಅಂಚಿನಲ್ಲಿರುವವರ ಸಬಲೀಕರಣದತ್ತ ಗಮನಹರಿಸಿದ್ದಾರೆ” ಎಂದಿದ್ದಾರೆ.

“ಅವರು ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಎನ್‌ಡಿಎ ಕುಟುಂಬವು ಅವರನ್ನು ನಮ್ಮ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಸಿ.ಪಿ ರಾಧಾಕೃಷ್ಣನ್ ಅವರು ವಿವಿಧ ರಾಜ್ಯಗಳ ಸಂಸದರಾಗಿ ಮತ್ತು ರಾಜ್ಯಪಾಲರಾಗಿ ಶ್ರೀಮಂತ ಅನುಭವ ಹೊಂದಿದ್ದಾರೆ. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಚುರುಕಾಗಿದ್ದವು. ರಾಜ್ಯಪಾಲರಾಗಿದ್ದ ಅವಧಿಯಲ್ಲಿ, ಅವರು ಸಾಮಾನ್ಯ ನಾಗರಿಕರು ಎದುರಿಸುವ ಸವಾಲುಗಳನ್ನು ಪರಿಹರಿಸುವತ್ತ ಗಮನಹರಿಸಿದ್ದರು. ಈ ಅನುಭವಗಳು ಅವರಿಗೆ ಶಾಸಕಾಂಗ ಮತ್ತು ಸಾಂವಿಧಾನಿಕ ವಿಷಯಗಳ ಬಗ್ಗೆ ಅಪಾರ ಜ್ಞಾನವಿದೆ ಎಂಬುವುದನ್ನು ಖಚಿತಪಡಿಸಿದೆ. ‘ಅವರು ಸ್ಪೂರ್ತಿದಾಯಕ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಮೋದಿ ಹೇಳಿದ್ದಾರೆ.

ಇಂದು (ಸೋಮವಾರ) ಇಂಡಿಯಾ ಮೈತ್ರಿಕೂಟದ ಸಭೆ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಎನ್‌ಡಿಎ ಒಕ್ಕೂಟ ಸಿ.ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದರೆ, ಇತ್ತ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ತಮ್ಮ ಅಭ್ಯರ್ಥಿ ಆಯ್ಕೆಗೆ ಇಂದು (ಆ.18 ಸೋಮವಾರ ) ಸಭೆ ನಡೆಸಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ಮನೆಯಲ್ಲಿ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳ ನಾಯಕರು ಸಭೆ ಸೇರಿ ಚರ್ಚೆ ನಡೆಸಲಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಇದರ ಜೊತೆಗೆ, ಸ್ವಾತಂತ್ರ್ಯ ದಿನಾಚರಣೆ ವಿರಾಮದ ಬಳಿಕ ಮುಂದುವರಿಯುವ ಸಂಸತ್ ಅಧಿವೇಶದಲ್ಲಿ ವಿರೋಧ ಪಕ್ಷಗಳ ಕಾರ್ಯತಂತ್ರ, ಬಿಹಾರದಲ್ಲಿ ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್ ಯಾತ್ರೆ’ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.

ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರನ್ನು ಒಳಗೊಂಡ ಉಪರಾಷ್ಟ್ರಪತಿ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಬಹುಮತ ಹೊಂದಿರುವ ಎನ್‌ಡಿಎ, ಸುಲಭ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ವಿಶೇಷವಾಗಿ, ಎನ್‌ಡಿಎ ತನ್ನ ಒಕ್ಕೂಟದ ಎಲ್ಲಾ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳನ್ನು ಆಗಸ್ಟ್ 21 ರಂದು ನಡೆಯಲಿರುವ ಸಿಪಿ ರಾಧಾಕೃಷ್ಣನ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ದೆಹಲಿಗೆ ಆಹ್ವಾನಿಸಿದೆ.

ಸಿಪಿ ರಾಧಾಕೃಷ್ಣನ್ ಯಾರು?

ಚಂದ್ರಾಪುರಂ ಪೊನ್ನುಸ್ವಾಮಿ (ಸಿಪಿ) ರಾಧಾಕೃಷ್ಣನ್ ಅವರು ಪ್ರಸ್ತುತ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಜುಲೈ 31, 2024 ರಂದು ಈ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.

ರಾಧಾಕೃಷ್ಣನ್ ಈ ಹಿಂದೆ ಫೆಬ್ರವರಿ 2023ರಿಂದ ಜುಲೈ 2024ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024ರ ನಡುವೆ ತೆಲಂಗಾಣದ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.

ಬಿಜೆಪಿಯ ಹಿರಿಯ ನಾಯಕರಾದ ರಾಧಾಕೃಷ್ಣನ್, ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಗಸ್ಟ್ 25 ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು.

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....