Homeಕರ್ನಾಟಕಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ

ಒಳಮೀಸಲಾತಿಗೆ ನಮ್ಮ ಬೆಂಬಲವಿದೆ, ವರದಿ ಪರಿಷ್ಕರಿಸಿ ಕೂಡಲೇ ಜಾರಿಗೊಳಿಸಿ: ಜ್ಞಾನಪ್ರಕಾಶ ಸ್ವಾಮೀಜಿ

- Advertisement -
- Advertisement -

“ನಾವು ಯಾರ ವಿರುದ್ಧವೂ ಇಲ್ಲ. ಒಳಮೀಸಲಾತಿ ವಿಚಾರದಲ್ಲಿ ಹೊಲೆಯ ಸಮುದಾಯ ತಕರಾರು ತೆಗೆಯುತ್ತಿದೆ ಎಂದು ಹೊರರಾಜ್ಯಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಒಳಮೀಸಲಾತಿಗೆ ನಮ್ಮ ಬೆಂಬಲವಿದ್ದು,  ವರದಿ ಪರಿಷ್ಕರಣೆ ಮಾಡಿ ಜಾರಿ ಮಾಡಬೇಕು” ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಳಮೀಸಲಾತಿ ಏಕಸದಸ್ಯ ಆಯೋಗದ ವರದಿ ತಿರಸ್ಕಾರಕ್ಕೆ ಆಗ್ರಹಿಸಿ ಸೋಮವಾರ (ಆ.18) ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್‌ಸಿ, ಎಸ್‌ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ ಸಮಾವೇಶದ ಆಗ್ರಹಗಳನ್ನು ಹಂಚಿಕೊಂಡರು.

“ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯಲ್ಲಿ ತಮ್ಮ ಜೀವಮಾನದ ಕನಸು ನನಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಹೊಲೆಯ ಸಮುದಾಯವನ್ನು ತುಳಿಯಬೇಕು ಎನ್ನುವ ಅವರ ಕನಸನ್ನು ನುಚ್ಚುನೂರು ಮಾಡುತ್ತಿದ್ದೇವೆ. ಏಕರೂಪಿ ಲಕ್ಷಣಗಳನ್ನು ಹೊಂದಿರುವ ಸಮುದಾಯಗಳನ್ನು ಒಂದುಗೂಡಿಸಬೇಕು. ಶೇ.7ಕ್ಕಿಂತ ಕಡಿಮೆ ಮೀಸಲಾತಿಯನ್ನು ಬಲಗೈ ಸಮುದಾಯ ಒಪ್ಪುವುದಿಲ್ಲ. ಯಾರಿಗೆ ಎಷ್ಟಾದರೂ ಕೊಡಿ, ನಮಗೆ 7 ಪರ್ಸೆಂಟ್ ಮೀಸಲಿಡಿ. ಬಲಗೈ ಸಮುದಾಯದ ಕಾಂಗ್ರೆಸ್ ನಾಯಕರು ಇದನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಪರಿಣಾಮಗಳನ್ನು ಎದುರಿಸಲಿದ್ದಾರೆ” ಎಂದರು.

ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, “ನಾವು ತಿಂಗಳುಗಟ್ಟಲೇ, ವರ್ಷಗಟ್ಟಲೇ ಹೋರಾಟ ಮಾಡುವುದಿಲ್ಲ. ಒಂದೇ ಬಾರಿಗೆ ಬೀದಿಗಿಳಿದು ಗೆಲ್ಲುತ್ತೇವೆ. ನಮ್ಮ ಹೋರಾಟದ ಫಲವನ್ನು ಎಲ್ಲರೂ ಉಂಡಿದ್ದಾರೆ. ನಮ್ಮ ಸಾಹಿತಿಗಳು, ಚಿಂತಕರು ನಮ್ಮನ್ನು ಹೀಯಾಳಿಸಿ ಮಾತನಾಡುತ್ತಿದ್ದಾರೆ. ನಮ್ಮ ಸಾಹಿತಿಗಳ ಮಾತು ಕೇಳಲು ಹಿಂಸೆಯಾಗುತ್ತಿದೆ” ಎಂದು ಹೇಳಿದರು.

ಒಕ್ಕೂಟದ ಮೈಸೂರು ವಿಭಾಗೀಯ ಸಂಚಾಲಕ ವೆಂಕಟರಮಣ ಸ್ವಾಮಿ ಮಾತನಾಡಿ, “ನಾಗಮೋಹನ್ ದಾಸ್ ಅವರ ಭಾವಚಿತ್ರ ಮೊದಲು ಸುಟ್ಟವನು ನಾನು. ನಾಳೆಯೂ ಪಟ ಸುಡಲು ಸಿದ್ಧವಾಗಿದ್ದೇನೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರ ಮೇಲೆ ಸಿದ್ದರಾಮಯ್ಯನವರ ಭವಿಷ್ಯ ನಿರ್ಧಾರವಾಗುತ್ತದೆ” ಎಂದರು.

ಹಿರಿಯ ಹೋರಾಟಗಾರ ಎಂ. ವೆಂಕಟಸ್ವಾಮಿ ಮಾತನಾಡಿ, ‘ನ್ಯಾಯಮೂರ್ತಿ  ನಾಗಮೋಹನ್ ದಾಸ್ ಅವರು ಮೊದಲಿನಿಂದಲೂ ದಲಿತ ಚಳವಳಿಯ ಭಾಗವಾಗಿದ್ದವರು. ಅವರು ತಮ್ಮ ವರದಿಯಲ್ಲಿ ಸರ್ಕಾರ ಇದನ್ನು ತಿರಸ್ಕರಿಸಬಹುದು, ಪುರಸ್ಕರಿಸಬಹುದು ಅಥವಾ ಪರಿಷ್ಕರಿಸಬಹುದು ಎಂದು ಹೇಳಿದ್ದಾರೆ. ವರದಿ ಪರಿಷ್ಕಾರ ಮಾಡಲೇಬೇಕು” ಎಂದರು.

ಚಿತ್ರದುರ್ಗ ಛಲವಾದಿ ಮಹಾಸಂಸ್ಥಾನ ಮಠದ ಬಸವಲಿಂಗನಾಗಿ ಸ್ವಾಮೀಜಿ, ಬೆಂಗಳೂರು ಸಂತ ರವಿದಾಸ ಪೀಠದ ಬುದ್ಧಾನಂದ ಸ್ವಾಮೀಜಿ, ಪ್ರೊ. ಜ್ಞಾನಸ್ವರೂಪಾನಂದ ಸ್ವಾಮೀಜಿ ವೇದಿಕೆಯಲ್ಲಿ ಹಾಜರಿದ್ದರು.

Courtesy : eedina.com

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...