Homeಮುಖಪುಟಉಪರಾಷ್ಟ್ರಪತಿ ಚುನಾವಣೆ | 'ಇಂಡಿಯಾ' ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

- Advertisement -
- Advertisement -

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಂಗಳವಾರ ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ನಡೆದ ಇಂಡಿಯಾ ಒಕ್ಕೂಟದ ನಾಯಕರ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ.

“ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಸಾಮಾನ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿವೆ. ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲಾ ವಿರೋಧ ಪಕ್ಷಗಳು ಒಂದೇ ಹೆಸರಿಗೆ ಒಪ್ಪಿಗೆ ನೀಡಿರುವುದು ನನಗೆ ಸಂತೋಷ ತಂದಿದೆ. ಇದು ಪ್ರಜಾಪ್ರಭುತ್ವದ ಗೆಲುವು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಆರ್‌ಎಸ್‌ಎಸ್‌, ಬಿಜೆಪಿಯ ಹಿರಿಯ ನಾಯಕ, ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರ ಹೆಸರನ್ನು ಘೋಷಣೆ ಮಾಡಿದೆ. ಭಾನುವಾರ ಎನ್‌ಡಿಎ ಕೂಟದ ಪಕ್ಷಗಳ ನಾಯಕರ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಭ್ಯರ್ಥಿ ಹೆಸರು ಪ್ರಕಟಿಸಿದ್ದಾರೆ.

ಕಳೆದ ತಿಂಗಳು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆ, ಚುನಾವಣೆಯ ಅನಿವಾರ್ಯತೆ ಎದುರಾಗಿದೆ. ಸೆಪ್ಟೆಂಬರ್ 9ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಬಿ. ಸುದರ್ಶನ್ ರೆಡ್ಡಿ ಅವರನ್ನು ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಘೋಷಿಸುತ್ತಾ ಮಲ್ಲಿಕಾರ್ಜುನ ಖರ್ಗೆ ಅವರು, “ಸುದರ್ಶನ್ ರೆಡ್ಡಿ ಭಾರತದ ಅತ್ಯಂತ ವಿಶಿಷ್ಟ ಮತ್ತು ಪ್ರಗತಿಪರ ನ್ಯಾಯಶಾಸ್ತ್ರಜ್ಞರಲ್ಲಿ ಒಬ್ಬರು ಎಂದಿದ್ದಾರೆ.

ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರಾಗಿ, ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿರುವ ಅವರು, ದೀರ್ಘ ಮತ್ತು ಶ್ರೇಷ್ಠ ಕಾನೂನು ವೃತ್ತಿ ಜೀವನವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ನಿರಂತರ ಮತ್ತು ಧೈರ್ಯಶಾಲಿ ಪ್ರತಿಪಾದಕರಾಗಿರುವ ಸುದರ್ಶನ್ ರೆಡ್ಡಿ, ಬಡ ಹಿನ್ನೆಲೆಯಿಂದ ಬಂದವರು. ನೀವು ಅವರ ಅನೇಕ ತೀರ್ಪುಗಳನ್ನು ಓದಿದರೆ, ಅವರು ಬಡವರ ಪರವಾಗಿ ಹೇಗೆ ನಿಂತರು, ಸಂವಿಧಾನವನ್ನು ಹೇಗೆ ಎತ್ತಿಹಿಡಿದರು ಮತ್ತು ಮೂಲಭೂತ ಹಕ್ಕುಗಳನ್ನು ಹೇಗೆ ರಕ್ಷಿಸಿದರು ಎಂಬುದನ್ನು ನೀವು ನೋಡಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಗುವಾಹಟಿ ಪೊಲೀಸರಿಂದ ಸಮನ್ಸ್: ದೇಶದ್ರೋಹ ಪ್ರಕರಣದ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...