- Advertisement -
- Advertisement -
ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಠ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ಸಂಜೆ ಐದು ಗಂಟೆಗೆ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಎರಡು ಗಂಟೆಗಳ ಕಾಲ ಮುಂದೂಡಲಾಗಿದೆ.
ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಂಜೆ 5 ಗಂಟೆಗೆ ನಡೆಯಬೇಕಿದ್ದ ಸಭೆಯನ್ನು ಕಾರಣಣಾಂತರಗಳಿಂದ ಸಂಜೆ 07.30 ಕ್ಕೆ ಮರುನಿಗದಿ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಹೋರಾಟ ನಡೆಯುತ್ತಿದ್ದು, ಕಳೆದ ಮೂವತ್ತೈದು ವರ್ಷಗಳಿಂದ ಹೋರಾಟದ ನೇತೃತ್ವ ವಹಿಸಿರುವ ಹೋರಾಟಗಾರರ ಸಾಮೂಹಿಕ ನಾಯಕತ್ವದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಡೆಯತ್ತಿರುವ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ.
ಒಳ ಮೀಸಲಾತಿ ವಿವಾದ ಇತ್ಯರ್ಥಗೊಳ್ಳಲೇಬೇಕು; ಏಕೆ ಮತ್ತು ಹೇಗೆ?: ಕರ್ನಾಟಕ ಜನಶಕ್ತಿಯಿಂದ ಹೇಳಿಕೆ


