Homeಮುಖಪುಟ'ದಿ ವೈರ್‌'ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

- Advertisement -
- Advertisement -

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ
ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ.

ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ.

ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಭಾರತೀಯ ನ್ಯಾಯ ಸಂಹಿತೆಯ (ಬಿಎಎನ್‌ಸ್‌) ಸೆಕ್ಷನ್ 152 ಅನ್ನು ರದ್ದುಪಡಿಸುವಂತೆ ಆಗ್ರಹಿಸಿವೆ.

ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಕರೆಯುವ ಈ ವಸಾಹತುಶಾಹಿ ಸೆಕ್ಷನ್, ಹಳೆಯ ಕ್ರಿಮಿನಲ್ ಕಾನೂನು ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ಸೆಕ್ಷನ್ 124ಎ ಎಂದು ಗುರುತಿಸಲಾಗಿತ್ತು.

ಒಂದು ಪ್ರಕರಣದಲ್ಲಿ ಸಿದ್ದಾರ್ಥ್ ವರದರಾಜನ್ ಮತ್ತು ದಿ ವೈರ್ ನಡೆಸುತ್ತಿರುವ ಪ್ರತಿಷ್ಠಾನದ ಸದಸ್ಯರಿಗೆ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ್ದರೂ, ಯಾವುದೇ ಕಾರಣವಿಲ್ಲದೆ ಇನ್ನೊಂದು ಎಫ್‌ಐಆರ್ ದಾಖಲಿಸಿರುವ ಪೋಲಿಸರು ಆ.22ರಂದು ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೋಲಿಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಅವರ ಬಂಧನವಾಗುವ ಭೀತಿಯಿದೆ ಎಂದು ಪತ್ರಕರ್ತರ ಸಂಘಟನೆಗಳು ಹೇಳಿಕೆಯಲ್ಲಿ ತಿಳಿಸಿವೆ.

ಸುಪ್ರೀಂ ಕೋರ್ಟ್ ಮೇ 2022ರಲ್ಲಿ ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಪತ್ರಕರ್ತರ ಸಂಘಗಳು ಹೇಳಿವೆ.

ಬಿಎನ್‌ಎಸ್‌ನ ಸೆಕ್ಷನ್ 152 ಐಪಿಸಿಯ ಸೆಕ್ಷನ್ 124ಎನ ಹೊಸ ಆವೃತ್ತಿ ಎಂದಿರುವ ಸಂಘಗಳು, ದಿ ವೈರ್ ಬಿಎನ್‌ಎಸ್‌ನ ಸೆಕ್ಷನ್ 152 ಅನ್ನು ಪ್ರಶ್ನಿಸಿದೆ ಮತ್ತು ಸುಪ್ರೀಂ ಕೋರ್ಟ್ ಆಗಸ್ಟ್ 12 ರಂದು ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದಿವೆ.

ವರದರಾಜನ್ ಮತ್ತು ಥಾಪರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಮಾಧ್ಯಮವನ್ನು ಗುರಿಯಾಗಿಸಲು ‘ಸೆಕ್ಷನ್ 152 ಒಂದು ಸಾಧನವಾಗಿದೆ’ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಪತ್ರಕರ್ತರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಅಸ್ಸಾಂನ ಮೋರಿಗಾಂವ್‌ನಲ್ಲಿ ಸಿದ್ಧಾರ್ಥ್ ವರದರಾಜನ್ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವು ಜೂನ್ 28,2025 ರಂದು ದಿ ವೈರ್‌ನಲ್ಲಿ ಪ್ರಕಟವಾದ ‘IAF Lost Fighter Jets to Pak Because of Political Leadership’s Constraints’: Indian Defence Attache’ಎಂಬ ಶೀರ್ಷಿಕೆಯ ವರದಿಗೆ ಸಂಬಂಧಿಸಿದೆ.

ವರದಿಯ ವಿರುದ್ದ ಅಸ್ಸಾಂ ಬಿಜೆಪಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ 12, 2025 ರಂದು ಸುಪ್ರೀಂ ಕೋರ್ಟ್ ವರದರಾಜನ್ ಮತ್ತು ದಿ ವೈರ್ ಪತ್ರಕರ್ತರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಿದೆ.

ಗುವಾಹಟಿ ಅಪರಾಧ ವಿಭಾಗವು ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಿಸಿದೆ. ಇದರಲ್ಲಿ, ಬಿಎನ್‌ಎಸ್‌ನ ಸೆಕ್ಷನ್ 152 ಜೊತೆಗೆ ಸೆಕ್ಷನ್ 196, 197(1)(D)/3(6), 353, 45, ಮತ್ತು 61 ರ ಅಡಿಯಲ್ಲಿ ದೇಶದ್ರೋಹದ ಆರೋಪಗಳನ್ನು ಹೊರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12, 2025 ರಂದು ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರೂ ಪತ್ರಕರ್ತರು ಆಗಸ್ಟ್ 22, 2025 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಪಾದಿತ ಅಪರಾಧ ಅಥವಾ ಎಫ್‌ಐಆರ್ ದಿನಾಂಕದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಪೊಲೀಸರು ಒದಗಿಸಿಲ್ಲ.

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...