Homeಮುಖಪುಟದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ಆರೋಪ: ಓರ್ವ ವ್ಯಕ್ತಿ ವಶಕ್ಕೆ

ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ಆರೋಪ: ಓರ್ವ ವ್ಯಕ್ತಿ ವಶಕ್ಕೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಬುಧವಾರ (ಆ.20) ಬೆಳಿಗ್ಗೆ ಸಿವಿಲ್ ಲೈನ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಜನರ ಅಹವಾಲು ಆಲಿಸಲು ಆಯೋಜಿಸಿದ್ದ ‘ಜನ್ ಸುನ್ವೈ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ, ಅವರ ಮೇಲೆ ಹಲ್ಲೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಅಂದಾಜು 30 ವರ್ಷ ವಯಸ್ಸಿನ ವ್ಯಕ್ತಿ ಮನವಿ ಸಲ್ಲಿಸುವ ನೆಪದಲ್ಲಿ ಮುಖ್ಯಮಂತ್ರಿ ಬಳಿಗೆ ಬಂದಿದ್ದರು. ಮನವಿ ಕೊಟ್ಟ ಬಳಿಕ, ಅವರು ಸಿಎಂಗೆ ಕಪಾಳಮೋಕ್ಷ ಮಾಡಿದ್ದಾರೆ. ತಕ್ಷಣ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 

ಘಟನೆ ನಡೆದ ಬಳಿಕ ದೆಹಲಿ ನಗರ ಪೊಲೀಸ್ ಆಯುಕ್ತ, ಉತ್ತರ ವಿಭಾಗದ ಡಿಸಿಪಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ನಿವಾಸಕ್ಕೆ ಧಾವಿಸಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ ರಾಜೇಶ್ ಭೈಜಿ ಎಂದು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿದ್ದಾಗಿ ವರದಿಯಾಗಿದೆ.

“ಇಂದು ‘ಜನ್ ಸುನ್ವೈ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾರೆ. ದೆಹಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಹಲ್ಲೆ ನಡೆಸಿದ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ದೆಹಲಿ ಪೊಲೀಸರು ಗುಜರಾತ್ ಪೊಲೀಸರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಸಿಎಂ ಸುತ್ತ ಭದ್ರತಾ ಸಿಬ್ಬಂದಿ ಇದ್ದರೂ ಈ ಘಟನೆ ನಡೆದಿದೆ ವರದಿಯಾಗಿದೆ.

ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಮುಖ್ಯಮಂತ್ರಿ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿಯನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚ್‌ದೇವ, ಘಟನೆಯಿಂದ ಸಿಎಂ ಗುಪ್ತಾ ಬೆಚ್ಚಿ ಬಿದ್ದಿದ್ದಾರೆ. ಪ್ರಸ್ತುತ ಅವರು ಆರೋಗ್ಯವಾಗಿದ್ಧಾರೆ ಎಂದು ಹೇಳಿದ್ದಾರೆ.

ಘಟನೆಯ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ಧಾರೆ.

ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ಸಿಎಂ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಅವರು, “ಪ್ರಜಾಪ್ರಭುತ್ವದಲ್ಲಿ, ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ, ಹಿಂಸಾಚಾರಕ್ಕೆ ಅವಕಾಶವಿಲ್ಲ” ಎಂದಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...