Homeಮುಖಪುಟಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

- Advertisement -
- Advertisement -

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ ಕುರಿತು ಏಳು ದಿನಗಳಲ್ಲಿ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ನಾಟಕವು ‘ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸಿದೆ’ ಎಂದು ಆರೋಪಿಸಿ ಮತ್ತು ನಾಟಕದ ಹಿಂದಿನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಂಧನ್ ಬಚಾವ್ ಸಮಿತಿ ಭಾವನಗರ ಎಂಬ ಸಾಮಾಜಿಕ ಸಂಘಟನೆಯು ನೀಡಿದ ದೂರಿನ ಆಧಾರದ ಮೇಲೆ ಈ ನೋಟಿಸ್ ನೀಡಲಾಗಿದೆ.

ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಡಿಇಒ ಅವರು, ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಕೇಳಿದ್ದು, ವಿವಾದಾತ್ಮಕ ನಾಟಕದ ಪಾತ್ರವನ್ನು ಉದ್ದೇಶಪೂರ್ವಕವಾಗಿ ಮಾಡಿಸಲಾಗಿದೆಯೇ ಅಥವಾ ಉದ್ದೇಶಪೂರ್ವಕವಲ್ಲದ ಕೃತ್ಯವೇ? ಎಂದು ಮತ್ತು ಶಾಲಾ ಆವರಣದಲ್ಲಿ ನಡೆದ ಸಮಾರಂಭದ ವಿವರಗಳನ್ನು ಕೇಳಿದ್ದಾರೆ.

600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಭಾವನಗರದ ಬಾಲಕಿಯರ ಶಾಲೆಯು ವಿವಾದಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಗಮನ ಸೆಳೆದಿದೆ.

ಬಂಧನ್ ಬಚಾವ್ ಸಮಿತಿ ಭಾವನಗರ ತನ್ನ ದೂರಿನಲ್ಲಿ “ವಿವಾದಾತ್ಮಕ ನಾಟಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಮತ್ತು ಸಾರ್ವಜನಿಕರಲ್ಲಿ ಅಶಾಂತಿಯನ್ನು ಹರಡಲು ಶಾಲಾ ಸಿಬ್ಬಂದಿ ಮಾಡಿದ ಪ್ರಯತ್ನ” ಎಂದು ಆರೋಪಿಸಿದೆ.

“ಭಾವನಗರದ ಕುಂಭರ್ವಾಡಾ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 50-51 ರಲ್ಲಿ, ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಲಾಗಿದೆ. ಈ ನಾಟಕದಲ್ಲಿ, ಕಾಶ್ಮೀರಿ ಯಾತ್ರಿಕರು ಹಾಗೂ ಸೇನೆ ಮತ್ತು ಭಯೋತ್ಪಾದಕರನ್ನು ಚಿತ್ರಿಸಲಾಗಿದೆ. ನಾಟಕದಲ್ಲಿ, ಮುಸ್ಲಿಂ ಉಡುಪು (ಬುರ್ಖಾ) ಧರಿಸಿದ ಹುಡುಗಿಯರನ್ನು ಭಯೋತ್ಪಾದಕರಂತೆ ತೋರಿಸಲಾಗಿದೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಸ್ಪಷ್ಟವಾಗಿ ಚಿತ್ರಿಸಲಾಗಿದೆ” ಎಂದು ಬಂಧನ್ ಬಚಾವ್ ಸಮಿತಿ ದೂರಿನಲ್ಲಿ ಹೇಳಿದೆ.

ಶಾಲೆಯಲ್ಲಿ ಇಂತಹ ನಾಟಕ ಪ್ರದರ್ಶಿಸುವ ಮೂಲಕ ತಮ್ಮ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸಿದ ಶಿಕ್ಷಕರ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ ಎಂದು ಸಮಿತಿ ಹೇಳಿದೆ.

ಭಾವನಗರ ನಗರದ 68 ಪುರಸಭೆ ಶಾಲೆಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ವರ್ಷ ಆಪರೇಷನ್ ಸಿಂಧೂರ್ ಆಚರಣೆಯ ಭಾಗವಾಗಿ, ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ರಾಖಿಗಳು ಮತ್ತು ಪತ್ರಗಳನ್ನು ಕಳುಹಿಸಿದ್ದಾರೆ. ಭಾವನಗರ ಜಿಲ್ಲೆಯಿಂದ ಮಾತ್ರ, 2 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ಪತ್ರ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಮುಸ್ಲಿಂ ಲಾರಿ ಚಾಲಕನ ಮೇಲೆ ಗುಂಪು ಹಲ್ಲೆ: ಸಂತ್ರಸ್ತನಿಂದ ನ್ಯಾಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...