Homeಮುಖಪುಟಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪಾಲಕ್ಕಾಡ್ ಶಾಸಕ ರಾಹುಲ್ ಮಾಮ್‌ಕೂಟತ್ತಿಲ್ ಅವರು ಗುರುವಾರ (ಆ.21) ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ರಾಹುಲ್ ಕಾಂಗ್ರೆಸ್ ಪಕ್ಷದ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರೂ, ಪಕ್ಷವು ಅವರನ್ನು ಅಮಾನತುಗೊಳಿಸಲು ಅಥವಾ ಹೊರಹಾಕಲು ನಿರ್ಧರಿಸದ ಹೊರತು, ಅವರು ಪಾಲಕ್ಕಾಡ್‌ನಿಂದ ಸ್ವತಂತ್ರ ಶಾಸಕರಾಗಿ ಮುಂದುವರಿಯಬಹುದು ಎಂದು ಹಿರಿಯ ಕಾಂಗ್ರೆಸ್ ಮೂಲವೊಂದು ತಿಳಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಮ್‌ಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ  ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ಗಂಭೀರ ಆರೋಪಗಳ ನಡುವೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಹುಲ್, “ನಾನು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ನನ್ನ ವಿರುದ್ದ ಕೇಳಿ ಬಂದಿರುವ ಆರೋಪಗಳೆಲ್ಲ ಸುಳ್ಳು” ಎಂದಿದ್ದಾರೆ.

ಈ ನಡುವೆ, “ಯುವ ನಟ ತನ್ನ ವಿರುದ್ಧ ಮಾತನಾಡಿದ್ದಾರೆಂದು ತಾನು ಭಾವಿಸುವುದಿಲ್ಲ. ಅವರು ನನ್ನ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ನಾನು ಕಾನೂನುಬಾಹಿರ ಅಥವಾ ಸಂವಿಧಾನಬಾಹಿರವಾದ ಏನನ್ನೂ ಮಾಡಿಲ್ಲ” ಎಂದು ರಾಹುಲ್ ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಅವರ ರಾಜೀನಾಮೆಯಿಂದ ತೆರವಾದ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬಿನ್ ವರ್ಗೀಸ್ ಮತ್ತು ಕೆ.ಎಂ ಅಭಿಜಿತ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟನ್ ವರದಿ ಮಾಡಿದೆ.

ರಾಹುಲ್ ವಿರುದ್ದ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ, ಪಕ್ಷವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ಹಾಗೂ ಕಾಂಗ್ರೆಸ್‌ನ ನಾಯಕ ವಿ.ಡಿ. ಸತೀಶನ್ ಗುರುವಾರ ಭರವಸೆ ನೀಡಿದ್ದಾರೆ.

2024ರಲ್ಲಿ ನಡೆದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 18,840 ಮತಗಳ ಅಂತರದಿಂದ ರಾಹುಲ್ ದಾಖಲೆಯ ಗೆಲುವು ಸಾಧಿಸಿದ್ದರು. ಕೇರಳ ವಿದ್ಯಾರ್ಥಿ ಸಂಘದ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸಿದ ರಾಹುಲ್, ನಂತರ ಯುವ ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆಗೇರುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಯುವ ನಾಯಕ ಎನಿಸಿಕೊಂಡರು.

ನವೆಂಬರ್ 2023ರಲ್ಲಿ ಕೇರಳದಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯಲ್ಲಿ 2,21,986 ಮತಗಳನ್ನು ಪಡೆದು ರಾಹುಲ್ ಜಯಗಳಿಸಿದ್ದರು. ಅವರ ಹತ್ತಿರದ ಪ್ರತಿಸ್ಪರ್ಧಿ ಅಬಿನ್ ವರ್ಕಿ ಕೊಡಿಯಾಟ್ಟು ಅವರು 53,398 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...