Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನನ್ನು ಬಂಧಿಸಿದ ಎಸ್‌ಐಟಿ

- Advertisement -
- Advertisement -

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಪ್ರಕರಣದ ದೂರುದಾರನ ಬಂಧನವಾಗಿರುವುದು ನಿಜ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

ಉಡುಪಿ ಜಿಲ್ಲೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಕಿರಿಯರ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ ಅವರು, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದೂರುದಾರನ ಮೇಲೆ ಸಂಶಯ ಮೂಡಿ ಬಂಧಿಸಿದ್ದಾರಾ..ಯಾವ ಉದ್ದೇಶಕ್ಕೆ, ಯಾವ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ ಎಂಬುವುದು ಎಸ್‌ಐಟಿಗೆ ಗೊತ್ತು ಎಂದು ಗೃಹ ಸಚಿವರು ಹೇಳಿದ್ದಾರೆ.

ಎಸ್‌ಐಟಿಯವರು ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸುತ್ತಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, “ಎಸ್ಐಟಿ ಹೇಗೆ ತನಿಖೆ ಮಾಡಬೇಕು ಎಂದು ಸರ್ಕಾರ ನಿರ್ದೇಶಿಸಲು ಸಾಧ್ಯವಿಲ್ಲ. ಅದು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು, ಎಸ್ಐಟಿ ಅಂತಿಮ ವರದಿ ಸಲ್ಲಿಸಿದ ಬಳಿಕ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಸುಜಾತಾ ಭಟ್ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ಮಧ್ಯದಲ್ಲಿ ನಾನು ಹೇಳಿಕೆ ಕೊಡಲು ಸಾಧ್ಯವಿಲ್ಲ. ಇದರಿಂದ ತನಿಖೆಯ ಮೇಲೆ ಪರಿಣಾಮ ಬೀರಲಿದೆ. ಅನನ್ಯಾ ಭಟ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿದೆ. ಹಾಗಾಗಿ, ಎಸ್‌ಐಟಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ದೂರುದಾರನನ್ನು ಬಂಧಿಸಿದ ಎಸ್‌ಐಟಿ ಅಧಿಕಾರಿಗಳು ಬೆಳ್ತಂಡಿಯ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. ನ್ಯಾಯಾಲಯ ಯಾವ ಆದೇಶ ನೀಡಲಿದೆ ಎಂದು ಕಾದು ನೋಡಬೇಕಾಗಿದೆ.

ದೂರುದಾರನ ಬಂಧನ ಬೆನ್ನಲ್ಲೇ ಆತನ ಹೆಸರು ಮತ್ತು ಫೋಟೋ ಬಹಿರಂಗಗೊಂಡಿದೆ. ಎಸ್‌ಐಟಿ ಅಧಿಕಾರಿಗಳೇ ಹೆಸರು, ಫೋಟೋ ರಿವೀಲ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ನಡುವೆ, ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, “ಯಾರಾದರೂ ಸುಳ್ಳು ದೂರು ಕೊಟ್ಟಿದ್ದರೆ ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುತ್ತದೆ. ಈ ವಿಷಯದಲ್ಲಿ ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಪ್ರಕರಣದ ಹಿಂದೆ ಯಾವುದೋ ಗುಂಪಿನ ಕೈವಾಡ ಇದೆ ಎಂಬುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಒಟ್ಟಿನಲ್ಲಿ ಸತ್ಯ ಹೊರಗೆ ಬರಲಿದೆ” ಎಂದು ಹೇಳಿದ್ದಾರೆ.

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...