Homeಮುಖಪುಟ36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

- Advertisement -
- Advertisement -

ಬರೋಬ್ಬರಿ 36 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಒತ್ತಾಯಿಸಿ 26 ವರ್ಷದ ಮಹಿಳೆಯೊಬ್ಬರಿಗೆ, ಆಕೆಯ ಗಂಡ ಮತ್ತು ಅತ್ತೆ-ಮಾವ ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿರುವ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಸಿರ್ಸಾ ಗ್ರಾಮದಲ್ಲಿ ನಡೆದಿದೆ.

ದೌರ್ಜನ್ಯಕ್ಕೊಳಗಾದ ಮಹಿಳೆ ನಿಕ್ಕಿ ಶುಕ್ರವಾರ (ಆ.22) ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸಣ್ಣ ಮಗ ಮತ್ತು ಅಕ್ಕನ ಮುಂದೆಯೇ ನಿಕ್ಕಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಗಳು ಹೇಳಿವೆ.

ಪಿಟಿಐ ವರದಿಯ ಪ್ರಕಾರ, ದೌರ್ಜನ್ಯವನ್ನು ಕಣ್ಣಾರೆ ಕಂಡ ನಿಕ್ಕಿ ಅವರ ಆರು ವರ್ಷದ ಮಗ “ಮೇರಿ ಮಮ್ಮ ಕೆ ಊಪರ್ ಕುಚ್ ದಾಲಾ, ಫಿರ್ ಉನ್ಕೋ ಚಾಂತ ಮಾರಾ ಫಿರ್ ಲೈಟರ್ ಸೆ ಆಗ್ ಲಗಾ ದಿ” (ಅವರು ನನ್ನ ತಾಯಿಯ ಮೇಲೆ ಏನೋ ಸುರಿದ್ರು, ಅವರಿಗೆ ಕಪಾಳಮೋಕ್ಷ ಮಾಡಿ, ಲೈಟರ್‌ನಿಂದ ಬೆಂಕಿ ಹಚ್ಚಿದರು) ಎಂದು ವರದಿಗಾರರಿಗೆ ತಿಳಿಸಿದ್ದಾನೆ.

ನಿಕ್ಕಿಯ ಮೈದುನನ್ನು ಮದುವೆಯಾದ ನಂತರ ಅದೇ ಕುಟುಂಬದ ಭಾಗವಾಗಿರುವ ಆಕೆಯ ಅಕ್ಕ ಕಾಂಚನ್ ಕೂಡ ಘಟನೆಯನ್ನು ವಿವರಿಸಿದ್ದು, 36 ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ನಿಕ್ಕಿಯನ್ನು ಕೊಲ್ಲಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗುರುವಾರ ರಾತ್ರಿ, ನಿಕ್ಕಿಯ ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಿದರು. ವರದಕ್ಷಿಣೆಗಾಗಿ ಹಲವು ದಿನಗಳ ಕಾಲ ಅವರು ನಮ್ಮನ್ನು ಹಿಂಸಿಸಿದ್ದಾರೆ. ಅವರು ಆಕೆಯ ತಲೆ ಮತ್ತು ಕುತ್ತಿಗೆಗೆ ಹೊಡೆದು ಆಸಿಡ್ ಎರಚಿದ್ದಾರೆ. ಇತರ ಹಲವು ರೀತಿಯಲ್ಲಿ ನನ್ನ ಸಹೋದರಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ನನಗೂ ಕೂಡ ಥಳಿಸಿ ಪ್ರಜ್ಞಾಹೀನಳಾಗಿ ಮಾಡಿದ್ದರು” ಎಂದು ಕಾಂಚನ್ ಹೇಳಿದ್ದಾರೆ.

ವಿಪಿನ್ ಮರುಮದುವೆಯಾಗಲು ಬಯಸಿದ್ದ. ಅದಕ್ಕಾಗಿ ಅತ್ತೆ-ಮಾವಂದಿರು ನಿಕ್ಕಿಯನ್ನು ದೂರವಿಡಲು ಬಯಸಿದ್ದರು ಎಂದು ಕಾಂಚನ್ ಹೇಳಿಕೊಂಡಿದ್ದಾರೆ.

“ಆಗಸ್ಟ್ 21 ರಂದು, ಫೋರ್ಟಿಸ್ ಆಸ್ಪತ್ರೆಯಿಂದ ನಮಗೆ ಸುಟ್ಟ ಗಾಯಗಳೊಂದಿಗೆ ದಾಖಲಾಗಿರುವ ಮಹಿಳೆಯ ಬಗ್ಗೆ ಕರೆ ಬಂದಿತು. ನಂತರ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ನಾವು ತಲುಪುವ ಮೊದಲೇ ಅವರು ನಿಧನರಾದರು” ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ಸುಧೀರ್ ಕುಮಾರ್ ಹೇಳಿದ್ದಾರೆ.

ಕಾಂಚನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ನಿಕ್ಕಿಯ ಪತಿ ವಿಪಿನ್ ಅವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.

ಕೇರಳ| ಬುಡಕಟ್ಟು ವ್ಯಕ್ತಿಯನ್ನು ಐದು ದಿನಗಳ ಕಾಲ ಅಕ್ರಮವಾಗಿ ಬಂಧಿಸಿಟ್ಟ ಉದ್ಯೋಗದಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...