Homeಕರ್ನಾಟಕತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

ತಿಮರೋಡಿ ಮನೆಗೆ ಎಸ್‌ಐಟಿ ಭೇಟಿ: ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

“ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಎಸ್‌ಐಟಿ ತಂಡ ಭೇಟಿ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಎಸ್‌ಐಟಿ ಏನು ಮಾಡುತ್ತಿದೆ, ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಸರ್ಕಾರ ಪ್ರತಿನಿತ್ಯ ಗಮನಿಸುವುದಿಲ್ಲ. ಅದು ತನ್ನ ಪರಿಮಿತಿಯಲ್ಲಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತದೆ” ಎಂದರು.

ಧರ್ಮಸ್ಥಳ ಪ್ರಕರಣದ ತನಿಖೆ ಬಹಳ ಗಂಭೀರವಾಗಿ ನಡೆಯುತ್ತಿದೆ. ಕೋಟ್ಯಾಂತರ ಭಕ್ತಾದಿಗಳು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಹೊರಗಡೆ ಬರಲಿ ಎಂದು ಕಾಯುತ್ತಿದ್ದಾರೆ. ಹಾಗಾಗಿ, ಎಸ್‌ಐಟಿಗೆ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

“ದೂರುದಾರ ಚಿನ್ನಯ್ಯ ಅವರ ಬಂಧನ ಆಗಿರುವುದರಿಂದ ಅವರ ಹೇಳಿಕೆಯಿಂದ ಉಂಟಾಗುವ ಪರಿಣಾಮಗಳನ್ನು ಎಸ್‌ಐಟಿ ಗಂಭೀರವಾಗಿ ಪರಿಗಣಿಸಿದೆ. ನಾವೂ ಪರಿಗಣಿಸಿದ್ದೇವೆ. ಈ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾದರೆ ಒಳ್ಳೆಯದು ಎನ್ನುವುದು ಸರ್ಕಾರದ ಭಾವನೆ. ಹಾಗಾಗಿ, ಪ್ರಕರಣದ ತನಿಖೆಯನ್ನು ತ್ವರಿತವಾಗಿ ಮುಗಿಸಲು ಎಸ್‌ಐಟಿ ಕೂಡ ಪ್ರಯತ್ನ ಮಾಡುತ್ತಿದೆ” ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣದ ಸಂಬಂಧ ಸರ್ಕಾರ ಕ್ಷಮೆಯಾಚಿಸಬೇಕು, ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಬೇಕು ಎಂದು ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಈ ಪ್ರಕರಣವನ್ನು ಎನ್‌ಐಎಗೆ ಕೊಡುವ ಅಗತ್ಯ ಇಲ್ಲ ಎಂದು ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಎಸ್‌ಐಟಿಯವರು ಸಮರ್ಪಕವಾಗಿ ತನಿಖೆ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ಏನಾದರು ಲೋಪ ಕಂಡು ಬಂದರೆ ಅದು ಬೇರೆ ವಿಚಾರ. ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ವರದಿ ಕೊಡುವವರೆಗೆ ನಾನು ಏನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು.

“ಎಸ್‌ಐಟಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎನ್ನಲು ನಮಗೆ ಏನಾದರು ಆಧಾರ ಬೇಕು. ಸದ್ಯಕ್ಕೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ. ಎಸ್‌ಐಟಿ ಅಂತಿಮ ವರದಿ ಕೊಡಲಿ. ಆ ಬಳಿಕ ಸಾಮಾನ್ಯವಾಗಿ ಪರ-ವಿರೋಧ ಚರ್ಚೆಯಾಗುತ್ತದೆ. ಆನಂತರ ಸರ್ಕಾರದ ಮಟ್ಟದಲ್ಲಿ ಏನು ತೀರ್ಮಾನ ಮಾಡಬೇಕೋ ನಾವು ಮಾಡುತ್ತೇವೆ” ಎಂದರು.

“ಆರೋಪಗಳನ್ನು ಮಾಡುವುದು ಸುಲಭ. ಅದನ್ನು ರುಜುವಾತು ಮಾಡೋದು ಕಷ್ಟ. ಯಾವ ಆಧಾರದ ಮೇಲೆ ಸರ್ಕಾರ ಈ ಪ್ರಕರಣದಲ್ಲಿ ತಪ್ಪಿತಸ್ಥ ಎನ್ನಲು ಸಾಧ್ಯ. ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಎಸ್‌ಐಟಿ ರಚಿಸಿರುವುದೇ ತಪ್ಪು ಎಂದರೆ ಅದು ವಿರ್ಪಯಾಸ ಎನ್ನಬೇಕಷ್ಟೆ” ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಆಯೋಜನೆ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅದು ಅವರಿಗೆ ಬಿಟ್ಟ ವಿಚಾರ, ಅವರು ಏನು ಬೇಕಾದರು ಮಾಡಲಿ” ಎಂದರು.

“ತನಿಖೆ ತ್ವರಿತವಾಗಿ ಆಗಬೇಕು. ಹಾಗಂತ, ಮಾಡಬೇಕಾದ ಕಾರ್ಯವನ್ನು ಮಾಡದಿರಲು ಸಾಧ್ಯವಿಲ್ಲ. ತನಿಖೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಒಂದು ಕೆಮಿಕಲ್ ಅನಾಲಿಸಿಸ್ ಮಾಡಲು ಒಂದು ಕ್ರಮ ಇದೆ. ಅದನ್ನು ಬೇಗ ಮಾಡಿ ಅಂದರೆ ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳು ಅನುಸರಿಸಬೇಕಿದೆ. ಹಾಗಾಗಿ, ಎಸ್‌ಐಟಿ ಅಗತ್ಯ ಎಲ್ಲಾ ಪ್ರಕ್ರಿಯೆಗಳನ್ನು ಮಾಡಿ, ಆದಷ್ಟು ಬೇಗ ವರದಿ ಕೊಡಲಿ ಎನ್ನುವುದು ನಮ್ಮ ಆಶಯ” ಎಂದು ಹೇಳಿದರು.

“ನಮ್ಮ ಉದ್ದೇಶ ಸತ್ಯವನ್ನು ಹೊರಗಡೆ ತರುವುದು. ನಾವು ಆ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೇ ಎಸ್‌ಐಟಿ ಮಾಡಿರುವುದು. ಅದನ್ನೇ ಸರಿ ಇಲ್ಲ ಎನ್ನುವುದು ಸರಿಯಲ್ಲ” ಎಂದು ಗೃಹ ಸಚಿವರು ತಿಳಿಸಿದರು.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...