Homeಮುಖಪುಟಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

- Advertisement -
- Advertisement -

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ (ಆ.25) ಶಿಫಾರಸು ಮಾಡಿರುವುದು ‘ಸರ್ವಾನುಮತ ತೀರ್ಮಾನವಲ್ಲ’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊಲಿಜಿಯಂನ ಐವರು ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ನ್ಯಾಯಮೂರ್ತಿ ಪಾಂಚೋಲಿ ಅವರನ್ನು ಶಿಫಾರಸು ಮಾಡುವುದಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾಗರತ್ನ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿ ವಿವರಿಸಿದೆ.

ಸಿಜೆಐ ಬಿಆರ್ ಗವಾಯಿ ಅವರ ಜೊತೆಗೆ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯರಾಗಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ಸಂಯೋಜಿತ ಹಿರಿತನ, ಪ್ರಾತಿನಿಧ್ಯದ ತತ್ವ, ಅರ್ಹತೆ ಮತ್ತು ಸಮಗ್ರತೆ’ ಎಂಬ ಮೂರು ಅಂಶಗಳನ್ನು ಸುಪ್ರೀಂ ಕೋರ್ಟ್ ತನ್ನ ಆಯ್ಕೆಯ ಮಾನದಂಡವಾಗಿ ಅನುಸರಿಸುತ್ತದೆ.

ಈ ಹಿಂದೆ, ಈ ಅಂಶಗಳನ್ನು ‘ಸಮತೋಲನ’ಪಡಿಸಿ ಹೈಕೋರ್ಟ್ ನ್ಯಾಯಮೂರ್ತಿಯ ನೇಮಕಕ್ಕೆ ಶಿಫಾರಸು ಮಾಡಲಾಗುತ್ತಿತ್ತು. ವಿಶೇಷವಾಗಿ, ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇರುವ ಅಭ್ಯರ್ಥಿಗಳ ನೇಮಕದಲ್ಲಿ, ಉತ್ತರಾಧಿಕಾರವನ್ನು (line of succession) ಖಚಿತಪಡಿಸಲು ಹಿರಿತನವನ್ನು (seniority) ಕಡೆಗಣಿಸಲಾಗುತ್ತಿತ್ತು.

ಪ್ರಾದೇಶಿಕ ಸಮತೋಲನ

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಅದೇ ಹೈಕೋರ್ಟ್‌ನಿಂದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಉದಾಹರಣೆಗೆ : 52 ನ್ಯಾಯಾಧೀಶರ ಅನುಮೋದಿತ ಬಲವಿರುವ ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೂವರು ನ್ಯಾಯಾಧೀಶರಿದ್ದಾರೆ. ಆದರೆ, 160 ಅನುಮೋದಿತ ನ್ಯಾಯಾಧೀಶರ ಬಲ ಇರುವ ಅಲಹಾಬಾದ್‌ ಹೈಕೋರ್ಟ್‌, 94 ಬಲ ಇರುವ ಬಾಂಬೆ ಹೈಕೋರ್ಟ್‌ ಹಾಗೂ 85 ಬಲ ಇರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದಲೂ ಮೂವರೇ ಇದ್ದಾರೆ. ಇನ್ನು 75 ಬಲ ಇರುವ ಮದ್ರಾಸ್ ಹೈಕೋರ್ಟ್ ಮತ್ತು 72 ಬಲ ಇರುವ ಕಲ್ಕತ್ತಾ ಹೈಕೋರ್ಟ್‌ನಿಂದ ತಲಾ ಇಬ್ಬರು ನ್ಯಾಯಾಧೀಶರು ಇದ್ದಾರೆ.

ನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...