Homeಮುಖಪುಟವೈಷ್ಣೋದೇವಿ ಭೂಕುಸಿತ ದುರಂತ: ಮೃತರ ಸಂಖ್ಯೆ 30ಕ್ಕೆ ಏರಿಕೆ

ವೈಷ್ಣೋದೇವಿ ಭೂಕುಸಿತ ದುರಂತ: ಮೃತರ ಸಂಖ್ಯೆ 30ಕ್ಕೆ ಏರಿಕೆ

- Advertisement -
- Advertisement -

ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಎಸ್‌ಎಸ್‌ಪಿ ರಿಯಾಸಿ ಪರಮವೀರ್ ಸಿಂಗ್ ದೃಢಪಡಿಸಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಂಗಳವಾರ (ಆ.26) ಮಧ್ಯಾಹ್ನ 3 ಗಂಟೆ ಸುಮಾರಿಗೆ ವೈಷ್ಣೋದೇವಿ ತೀರ್ಥಯಾತ್ರೆ ಮಾರ್ಗದ  ಅಧ್ಕುವರಿಯಲ್ಲಿ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಹಲವಾರು ಜನರು ಇನ್ನೂ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸತತ ನಾಲ್ಕನೇ ದಿನವೂ ಬುಧವಾರ (ಆ.27) ನಿರಂತರ ಮಳೆಯಾಗುತ್ತಿದ್ದು, ದಿಢೀರ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ವ್ಯಾಪಕ ನಾಶನಷ್ಟ ಸಂಭವಿಸಿದೆ. ತಾವಿ, ಚೆನಾಬ್ ಮತ್ತು ಝೀಲಂ ಸೇರಿದಂತೆ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಂದ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ಸಾರಿಗೆ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಚಕ್ಕಿ ನದಿಯಿಂದ ಉಂಟಾದ ಪ್ರವಾಹ ಪರಿಣಾಮ ಕನಿಷ್ಠ 18 ರೈಲುಗಳ ಸಂಚಾರ ರದ್ದುಗೊಂಡಿದೆ.

ಕೇಂದ್ರಾಡಳಿತ ಪ್ರದೇಶದ ಹೆಚ್ಚಿನ ಭಾಗಗಳಲ್ಲಿ ದೂರಸಂಪರ್ಕ ಸೇವೆಗಳು ವ್ಯತ್ಯಯಗೊಂಡಿದೆ. ಲಕ್ಷಾಂತರ ಜನರು ನಡುವೆ ಸಂಪರ್ಕ ಕಡಿತಗೊಂಡಿದೆ. ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶ್ತ್ವಾರ್‌ ಪಟ್ಟಣ ಕೇಂದ್ರದಿಂದ ಬಹು ದೂರದಲ್ಲಿರುವ ಮಾರ್ಗಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ 10 ಮನೆಗಳು ಮತ್ತು ಒಂದು ಸೇತುವೆ ಕೊಚ್ಚಿಕೊಂಡು ಹೋಗಿವೆ. ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಕಥುವಾದ ಲಖನ್‌ಪುರ ಗ್ರಾಮದಲ್ಲಿ ಹಲವಾರು ಮಂದಿ ಅರೆಸೈನಿಕ ಸಿಬ್ಬಂದಿ ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಸ್ಥಳಾಂತರಿಸುವ ಪ್ರಯತ್ನಗಳು ಮುಂದುವರೆದಿವೆ.

ಜಮ್ಮು ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ತಾವಿ, ಚೆನಾಬ್, ಉಜ್, ರಾವಿ ಮತ್ತು ಬಸಂತೇರ್‌ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾಶ್ಮೀರ ಕಣಿವೆಯಲ್ಲಿ, ಝೀಲಂ ನದಿಯು ಸಂಗಮ್ (ಅನಂತ್‌ನಾಗ್)ನಲ್ಲಿ 21 ಅಡಿ ಪ್ರವಾಹ ಎಚ್ಚರಿಕೆ ಮಟ್ಟವನ್ನು ಮೀರಿ ಹರಿಯುತ್ತಿದೆ. ಶ್ರೀನಗರದ ರಾಮ್ ಮುನ್ಶಿ ಬಾಗ್‌ನಲ್ಲಿ ಎಚ್ಚರಿಕೆಯ ಮಟ್ಟ ಸಮೀಪಿಸಿದೆ.

ಜಲಮೂಲಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಹಠಾತ್ ಪ್ರವಾಹಗಳು ಹೆಚ್ಚಾಗುತ್ತಿರುವುದರಿಂದ ಸೇತುವೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿ ಹೆಸರು ಬದಲಿಸಲು ಮುಸ್ಲಿಂ ವ್ಯಾಪಾರಿಗೆ ಬೆದರಿಕೆ: ದೆಹಲಿಯಲ್ಲಿ ದ್ವೇಷದ ರಾಜಕಾರಣ ತಾರಕಕ್ಕೇರಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...