Homeಅಂತರಾಷ್ಟ್ರೀಯಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ;...

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

- Advertisement -
- Advertisement -

ಭಾರತ ರಫ್ತು ಮಾಡುವ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರ (ಆ.27) ಜಾರಿಯಾಗಲಿದೆ. ಇದರಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ತೀವ್ರವಾದ ಹೊಡೆತ ಬೀಳುವ ಸಾಧ್ಯತೆಯಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಘೋಷಿಸಿದ್ದರು. ಆದರೆ, ಈ ತಿಂಗಳ ಆರಂಭದಲ್ಲಿ ಅವರು ಭಾರತವು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರಿಂದಾಗಿ ಅಮೆರಿಕವು ತನ್ನ ಮಿತ್ರ ರಾಷ್ಟ್ರದ ಮೇಲೆ ವಿಧಿಸಿದ ಒಟ್ಟು ಸುಂಕ ಶೇ.50ಕ್ಕೆ ತಲುಪಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತ-ಅಮೆರಿಕ ನಡುವಿನ ವ್ಯಾಪಾರ ಸಂಬಂಧಗಳು ವಿಸ್ತರಿಸಿವೆ. ಆದರೆ, ಮಾರುಕಟ್ಟೆ ಪ್ರವೇಶ ಮತ್ತು ದೇಶೀಯ ರಾಜಕೀಯ ಒತ್ತಡಗಳ ಮೇಲಿನ ವಿವಾದಗಳಿಗೆ ಅದು ಗುರಿಯಾಗುತ್ತಿವೆ. ಭಾರತವು ಪ್ರಮುಖ ಜಾಗತಿಕ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದಾಗಿದೆ. ಹೆಚ್ಚುವರಿ ಸುಂಕ ಇದನ್ನು ನಿಧಾನಗೊಳಿಸಬಹುದು.

ಅಮೆರಿಕದ ಸುಂಕ ಪರಿಣಾಮ ಬೀರುವ ವಲಯಗಳು

ನವದೆಹಲಿ ಮೂಲದ ಚಿಂತಕರ ಚಾವಡಿ ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಶಿಯೇಟಿವ್‌ನ ಅಂದಾಜಿನ ಪ್ರಕಾರ, ಜವಳಿ, ರತ್ನಗಳು ಮತ್ತು ಆಭರಣಗಳು, ಚರ್ಮದ ಸರಕುಗಳು, ಆಹಾರ ಮತ್ತು ವಾಹನಗಳಂತಹ ಕಾರ್ಮಿಕ-ತೀವ್ರ ವಲಯಗಳ ಮೇಲೆ ಅಮೆರಿಕದ ಸುಂಕ ಹೇರಿಕೆ ಹೆಚ್ಚು ಪರಿಣಾಮ ಬೀರಲಿದೆ.

“ಹೊಸ ಸುಂಕ ಪದ್ಧತಿಯು ಒಂದು ಕಾರ್ಯತಂತ್ರದ ಆಘಾತವಾಗಿದ್ದು, ಅಮೆರಿಕದಲ್ಲಿ ದೀರ್ಘಕಾಲದಿಂದ ಸ್ಥಾಪಿತವಾಗಿರುವ ಭಾರತದ ಉಪಸ್ಥಿತಿಯನ್ನು ಅಳಿಸಿಹಾಕುವ ಬೆದರಿಕೆ ಒಡ್ಡಿದೆ. ರಫ್ತು ಆಧಾರಿತ ಕೇಂದ್ರಗಳಲ್ಲಿ ನಿರುದ್ಯೋಗವನ್ನು ಉಂಟುಮಾಡಲಿದೆ ಮತ್ತು ಕೈಗಾರಿಕಾ ಮೌಲ್ಯ ಸರಪಳಿಯಲ್ಲಿ ಭಾರತದ ಪಾತ್ರವನ್ನು ದುರ್ಬಲಗೊಳಿಸುತ್ತದೆ” ಎಂದು ಚಿಂತಕರ ಚಾವಡಿಯ ಸಂಸ್ಥಾಪಕ ಮತ್ತು ಮಾಜಿ ಭಾರತೀಯ ವ್ಯಾಪಾರ ಅಧಿಕಾರಿ ಅಜಯ್ ಶ್ರೀವಾಸ್ತವ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಅಮೆರಿಕವು ಔಷಧಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳಂತಹ ಕೆಲವು ವಲಯಗಳಿಗೆ ಹೆಚ್ಚುವರಿ ಸುಂಕದಿಂದ ವಿನಾಯಿತಿ ನೀಡಿದೆ. ಈ ವಲಯಗಳಲ್ಲಿ ಭಾರತಕ್ಕೆ ಅದರ ಮಾನ್ಯತೆ ಗಮನಾರ್ಹವಾಗಿರುವುದರಿಂದ ಸ್ವಲ್ಪ ಪರಿಹಾರ ಸಿಕ್ಕಿದೆ ಎಂದು ವರದಿ ತಿಳಿಸಿದೆ.

ನಷ್ಟದ ಭೀತಿಯಲ್ಲಿ ರಫ್ತುದಾರರು

“ದೇಶೀಯ ಬೇಡಿಕೆ ಬಲಗೊಂಡು ಇತರ ವಿದೇಶಿ ಮಾರುಕಟ್ಟೆಗಳು ಹೆಚ್ಚಿನ ಭಾರತೀಯ ವಸ್ತುಗಳನ್ನು ಖರೀದಿಸದಿದ್ದೆ ನಮ್ಮ ಉದ್ಯಮವು ಸದ್ಯದಲ್ಲಿಯೇ ಗಣನೀಯ ಹೊಡೆತವನ್ನು ಅನುಭವಿಸಲಿದೆ ಎಂದು ಉತ್ತರ ಭಾರತದ ಆಗ್ರಾ ನಗರದ ಚರ್ಮದ ಪಾದರಕ್ಷೆ ರಫ್ತುದಾರ ಪೂರಣ್ ದಾವರ್ ಹೇಳುತ್ತಾರೆ.

“ಇದು ಸಂಪೂರ್ಣ ಆಘಾತ” ಎಂಬುವುದಾಗಿ ಇತ್ತೀಚಿನ ವರ್ಷಗಳಲ್ಲಿ ಅಮೆರಿಕದೊಂದಿಗೆ ವ್ಯವಹಾರ ವೃದ್ದಿಸಿಕೊಂಡಿರುವ ದಾವರ್ ಹೇಳಿದ್ದಾರೆ. ದಾವರ್ ಅವರ ಗ್ರಾಹಕರಲ್ಲಿ ಪ್ರಮುಖ ಫ್ಯಾಷನ್ ಚಿಲ್ಲರೆ ವ್ಯಾಪಾರ ಸಂಸ್ಥೆ ‘ಝಾರಾ’ ಕೂಡ ಒಂದು.

ರಫ್ತು ಉತ್ತೇಜನಾ ಸಂಸ್ಥೆಯಾದ ಚರ್ಮ ರಫ್ತು ಮಂಡಳಿಯ ಪ್ರಾದೇಶಿಕ ಅಧ್ಯಕ್ಷರೂ ಆಗಿರುವ ದಾವರ್, ಹೆಚ್ಚಿನ ಸುಂಕಗಳು ತನ್ನದೇ ಆದ ಗ್ರಾಹಕರಿಗೆ ಹಾನಿ ಮಾಡುತ್ತದೆ ಎಂಬುದನ್ನು ಅಮೆರಿಕ ಅರ್ಥಮಾಡಿಕೊಳ್ಳಬೇಕು ಎಂಬುವುದಾಗಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ರಫ್ತುದಾರರನ್ನು ಪ್ರತಿನಿಧಿಸುವ ಗುಂಪುಗಳು ಹೊಸ ಆಮದು ಸುಂಕಗಳು ಅಮೆರಿಕದ ಮಾರುಕಟ್ಟೆಯ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹಾನಿ ಮಾಡಬಹುದು ಎಂದು ಎಚ್ಚರಿಸಿದ್ದಾರೆ.

“ಇದು ಒಂದು ಕ್ಲಿಷ್ಟಕರ ಪರಿಸ್ಥಿತಿ. ಕೆಲವು ಉತ್ಪನ್ನ ಮಾರ್ಗಗಳು ರಾತ್ರೋರಾತ್ರಿ ಕಾರ್ಯಸಾಧ್ಯವಾಗುವುದಿಲ್ಲ” ಎಂದು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟದ ಮಹಾನಿರ್ದೇಶಕ ಅಜಯ್ ಸಹಾಯ್ ಹೇಳಿದ್ದಾರೆ.

ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದ ಮೋದಿ

ಭಾರತದ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೆ ಹೆಚ್ಚಿನ ಪ್ರವೇಶಕ್ಕಾಗಿ ಅಮೆರಿಕ ಆಡಳಿತವು ಒತ್ತಾಯಿಸುತ್ತಿರುವುದರಿಂದ ಹೆಚ್ಚಿನ ಸುಂಕಗಳು ಹೇರಿವೆ.

ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕಾಗಿ ಐದು ಸುತ್ತಿನ ಮಾತುಕತೆಗಳನ್ನು ನಡೆಸಿವೆ, ಆದರೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ.

ಇದಕ್ಕೆ ಮುಖ್ಯ ಕಾರಣ, ಈ ವಲಯಗಳನ್ನು ಅಗ್ಗದ ಅಮೆರಿಕನ್ ಆಮದುಗಳಿಗೆ ತೆರೆಯುವುದನ್ನು ಭಾರತ ವಿರೋಧಿಸಿದ್ದು, ಜೀವನೋಪಾಯಕ್ಕಾಗಿ ಇವುಗಳನ್ನು ಅವಲಂಬಿಸಿರುವ ಲಕ್ಷಾಂತರ ಭಾರತೀಯರ ಉದ್ಯೋಗಗಳಿಗೆ ಅಪಾಯವಿದೆ ಎಂಬ ಕಳವಳವನ್ನು ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ನನಗೆ ರೈತರು, ಸಣ್ಣ ವ್ಯವಹಾರಗಳು ಮತ್ತು ಹೈನುಗಾರಿಕೆಯ ಹಿತಾಸಕ್ತಿಗಳು ಅತ್ಯಂತ ಮುಖ್ಯ. ನನ್ನ ಸರ್ಕಾರವು ಅವರಿಗೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳುತ್ತದೆ” ಎಂದು ಮೋದಿ ಈ ವಾರ ತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೇಳಿದ್ದಾರೆ. “ಜಗತ್ತು ‘ಆರ್ಥಿಕ ಸ್ವಾರ್ಥದ ರಾಜಕೀಯ’ಕ್ಕೆ ಸಾಕ್ಷಿಯಾಗುತ್ತಿದೆ” ಎಂದಿದ್ದಾರೆ.

ಈ ವಾರ ಆರನೇ ಸುತ್ತಿನ ವ್ಯಾಪಾರ ಮಾತುಕತೆಗಾಗಿ ನವದೆಹಲಿಗೆ ಭೇಟಿ ನೀಡುವ ಯೋಜನೆಯನ್ನು ಅಮೆರಿಕದ ನಿಯೋಗ ರದ್ದುಗೊಳಿಸಿದೆ.

ಸುಂಕಗಳಿಂದಾಗುವ ಹೊಡೆತವನ್ನು ತಗ್ಗಿಸಲು ಭಾರತ ಸ್ಥಳೀಯ ಸುಧಾರಣೆಗಳನ್ನು ಯೋಜಿಸುತ್ತಿದೆ.

ಸ್ಥಳೀಯ ಬಳಕೆಯನ್ನು ಹೆಚ್ಚಿಸಲು ಮತ್ತು ಆರ್ಥಿಕತೆಯನ್ನು ನಿರೋಧಿಸಲು ಸರ್ಕಾರ ಸುಧಾರಣೆಗಳ ಮೇಲೆ ಕೆಲಸ ಮಾಡಲು ಪ್ರಾರಂಭಿಸಿದೆ.

ಅಕ್ಟೋಬರ್‌ನಲ್ಲಿ ಬರುವ ಪ್ರಮುಖ ಹಿಂದೂ ಹಬ್ಬ ದೀಪಾವಳಿಗೂ ಮುನ್ನ ವಿಮೆ, ಕಾರುಗಳು ಮತ್ತು ಉಪಕರಣಗಳ ವೆಚ್ಚವನ್ನು ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ ಅಥವಾ ಬಳಕೆ ತೆರಿಗೆಯನ್ನು ಬದಲಾಯಿಸಲು ಅದು ಮುಂದಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ತೆರಿಗೆ ಕಡಿತಗೊಳಿಸುವ ಬಗ್ಗೆ ನಿರ್ಧರಿಸಲು ಸರ್ಕಾರಿ ಮಂಡಳಿ ಮುಂದಿನ ತಿಂಗಳ ಆರಂಭದಲ್ಲಿ ಸಭೆ ಸೇರಲಿದೆ. ರಫ್ತುದಾರರಿಗೆ ಅನುಕೂಲಕರ ಬ್ಯಾಂಕ್ ಸಾಲ ದರಗಳನ್ನು ಒಳಗೊಂಡಿರುವ ಆರ್ಥಿಕ ಪ್ರೋತ್ಸಾಹಕಗಳ ಕುರಿತು ವ್ಯಾಪಾರ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಚರ್ಚಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವ್ಯಾಪಾರ ಸಚಿವಾಲಯವು ಇತರ ಪ್ರದೇಶಗಳಿಗೆ, ವಿಶೇಷವಾಗಿ ಲ್ಯಾಟಿನ್ ಅಮೆರಿಕ, ಆಫ್ರಿಕಾ ಮತ್ತು ಆಗ್ನೇಯ ಏಷ್ಯಾಕ್ಕೆ ರಫ್ತುಗಳನ್ನು ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾರತವು ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಶ್ರಮಿಸುತ್ತಿರುವುದರಿಂದ ಯುರೋಪಿಯನ್ ಒಕ್ಕೂಟದೊಂದಿಗೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳು ಹೊಸ ಆಯಾಮವನ್ನು ಪಡೆಯಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

Courtesy : newindianexpress.com

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...