Homeಅಂತರಾಷ್ಟ್ರೀಯಉಕ್ರೇನ್‌ನಲ್ಲಿ ನಡೆಯುತ್ತಿರುವುದು 'ಮೋದಿ ಯುದ್ಧ': ಅಮೆರಿಕ ವಾಗ್ದಾಳಿ

ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

- Advertisement -
- Advertisement -

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ ಮೇಲಿನ ದಾಳಿಗೆ ಭಾರತ ಸಹಕಾರ ನೀಡುತ್ತಿದೆ ಎಂದು ಆರೋಪಿಸಿರುವ ಅಮೆರಿಕ, ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಮತ್ತು ರಷ್ಯಾದಿಂದ ತೈಲ ಖರೀದಿಸಿದ್ದಕ್ಕೆ ಶೇ.25 ದಂಡ ಸೇರಿ ಶೇ.50ರಷ್ಟು ಸುಂಕ ವಿಧಿಸಿದೆ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಮೋದಿಯವರ ಗೆಳೆಯ ಟ್ರಂಪ್ ಭಾರತದ ಮೇಲೆ ವಿಶ್ವದಲ್ಲೇ ಅತೀ ಹೆಚ್ಚು ಸುಂಕ ವಿಧಿಸಿದ್ದಾರೆ.

ಅತೀ ಹೆಚ್ಚು ಸುಂಕ ಹೇರಿರುವುದನ್ನು ಅನ್ಯಾಯ ಎಂದು ಕರೆದಿರುವ ಭಾರತ, ರಷ್ಯಾದಿಂದ ತೈಲ ಖರೀದಿಸುವುದನ್ನು ಕಡಿಮೆ ಮಾಡುವುದಿಲ್ಲ ಎಂದಿದೆ. ತನ್ನ 1.4 ಶತಕೋಟಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ತೈಲ ಸಂಬಂಧ ‘ಉತ್ತಮ ಒಪ್ಪಂದ’ ಮಾಡಿಕೊಳ್ಳಲು ಬಯಸುವುದಾಗಿ ಹೇಳಿದೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸುವ ಮೊದಲು ಭಾರತದ ಒಟ್ಟು ಕಚ್ಚಾ ತೈಲದ ಶೇ. 2ಕ್ಕಿಂತ ಕಡಿಮೆ ಪ್ರಮಾಣವನ್ನು ರಷ್ಯಾ ಪೂರೈಸುತ್ತಿತ್ತು. ಈಗ ರಷ್ಯಾದಿಂದ ತೈಲ ಆಮದಿನ ಪ್ರಮಾಣ ಶೇ. 35 ರಿಂದ40ರಷ್ಟು ಏರಿಕೆಯಾಗಿದೆ. ಈ ಮೂಲಕ ರಷ್ಯಾ ಭಾರತದ ಕಚ್ಚಾ ತೈಲು ಅತಿದೊಡ್ಡ ಮೂಲ ಎನಿಸಿಕೊಂಡಿದೆ ಎಂದು ಬಿಬಿಸಿ ವರದಿ ವಿವರಿಸಿದೆ.

ರಷ್ಯಾ ತೈಲದ ಅತಿದೊಡ್ಡ ಆಮದುದಾರ ರಾಷ್ಟ್ರವಾದ ಚೀನಾ ಅಥವಾ ರಷ್ಯಾದೊಂದಿಗೆ ಇನ್ನೂ ದೊಡ್ಡ ಪ್ರಮಾಣದ ವ್ಯಾಪಾರವನ್ನು ನಡೆಸುತ್ತಿರುವ ಯುರೋಪಿಯನ್ ಒಕ್ಕೂಟದ ಮೇಲೆ ಅಮೆರಿಕ ನಮ್ಮ ಮೇಲೆ ವಿಧಿಸಿದಂತೆ ಹೆಚ್ಚುವರಿ ಸುಂಕಗಳನ್ನು ವಿಧಿಸಿಲ್ಲ ಎಂದು ಭಾರತ ಗಮನಸೆಳೆದಿದೆ.

ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ನವರೊ ಅವರು ಅಮೆರಿಕದ ಸುಂಕ ನಿಲುವನ್ನು ಪುನರುಚ್ಚರಿಸಿದ್ದಾರೆ.

“ಭಾರತ ಮಾಡುತ್ತಿರುವ ಕೆಲಸಗಳಿಂದ ಅಮೆರಿಕದಲ್ಲಿ ಎಲ್ಲರೂ ನಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು, ವ್ಯವಹಾರಗಳು ಮತ್ತು ಎಲ್ಲವೂ ನಷ್ಟ ಅನುಭವಿಸುತ್ತಿವೆ. ಭಾರತದ ಹೆಚ್ಚಿನ ಸುಂಕದಿಂದ ನಮ್ಮ ಉದ್ಯೋಗ, ಕಾರ್ಖಾನೆಗಳು, ಆದಾಯ ಮತ್ತು ಹೆಚ್ಚಿನ ವೇತನದ ಮೇಲೆ ಪರಿಣಾಮ ಬೀರುವುದರಿಂದ ಕಾರ್ಮಿಕರು ನಷ್ಟ ಅನುಭವಿಸುತ್ತಾರೆ. ನಮ್ಮ ತೆರಿಗೆದಾರರೂ ನಷ್ಟ ಅನುಭವಿಸುತ್ತಿದ್ದಾರೆ. ‘ನಾವು ಮೋದಿಯವರ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದ್ದೇವೆ’ ಎಂದು ನವರೊ ಕಿಡಿಕಾರಿದ್ದಾರೆ.

ಉಕ್ರೇನ್‌ ಜೊತೆ ನಡೆಯುತ್ತಿರುವುದು ‘ಪುಟಿನ್ ಯುದ್ಧ’ ಎಂದು ನೀವು ಹೇಳುತ್ತೀರಾ ಎಂದು ಕೇಳಿದಾಗ, “ನಾನು ಮೋದಿ ಯುದ್ಧ’ ಎಂದು ಹೇಳಲು ಬಯಸುತ್ತೇನೆ. ಏಕೆಂದರೆ, ಉಕ್ರೇನ್‌ನ ಶಾಂತಿಯ ಹಾದಿ ಭಾಗಶಃ ನವದೆಹಲಿಯ ಮೂಲಕವೇ ಹಾದು ಹೋಗುತ್ತದೆ” ಎಂದು ನವರೋ ಹೇಳಿದ್ದಾರೆ.

“ನನಗೆ ಬೇಸರ ತರಿಸುವ ಸಂಗತಿಯೆಂದರೆ, ಭಾರತೀಯರು ಈ ವಿಷಯದಲ್ಲಿ ತುಂಬಾ ದುರಹಂಕಾರಿಗಳು. ನಮಗೆ ಹೆಚ್ಚಿನ ಸುಂಕ ಇಲ್ಲ, ನಮ್ಮದು ಸಾರ್ವಭೌಮತ್ವ, ನಾವು ಯಾರಿಂದ ಬೇಕಾದರು ತೈಲ ಖರೀದಿಸಿಬಹುದು, ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂಬ ಭಾವನೆ ಅವರಲ್ಲಿ ಇದೆ. ಹಾಗೆಯೇ ವರ್ತಿಸುತ್ತಿರಲಿ” ಎಂದು ನವರೋ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಶೇ.50ರಷ್ಟು ಸುಂಕ ಹೇರಿಕೆ ಭಾರತದಲ್ಲಿ ಬಟ್ಟೆಯಿಂದ ಹಿಡಿದು ವಜ್ರದವರೆಗೆ ರಫ್ತು ವಲಯದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಜನರ ಜೀವನೋಪಾಯದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಗಳು ಹೇಳಿವೆ.

ಸುಂಕದ ವಿಚಾರದಲ್ಲಿ ಅಮೆರಿಕ-ಭಾರತ ನಡುವಿನ ವ್ಯಾಪಾರ ಸಂಬಂಧ ಹಳಸಿದೆ. ಪರಿಣಾಮ ಈ ವಾರದ ಆರಂಭದಲ್ಲಿ ಪ್ರಾರಂಭವಾಗಬೇಕಿದ್ದ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗಳು ರದ್ದುಗೊಂಡಿವೆ. ಆದರೆ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರನಾಗಿ ಉಳಿದಿರುವ ಭಾರತಕ್ಕೆ ಇನ್ನೂ ಒಂದು ಮಾರ್ಗದ ನಿರೀಕ್ಷೆಯಿದೆ ಎಂದು ವರದಿಗಳು ಹೇಳಿವೆ.

ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅಮೆರಿಕದ ಮತ್ತೊಬ್ಬ ಅಧಿಕಾರಿಯಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರ ಹೇಳಿಕೆಗಳು ಆ ದಿಕ್ಕಿನತ್ತ ಬೆರಳು ತೋರಿಸುತ್ತವೆ ಎಂದು ವಿಶ್ಲೇಷಕರು ಹೇಳುತ್ತಾರೆ.

“ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ನಾವು ಒಟ್ಟಿಗೆ ಸೇರಲಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬೆಸೆಂಟ್ ಅವರು ಬುಧವಾರ ಫಾಕ್ಸ್ ಬಿಸಿನೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಸುಂಕಗಳ ಪರಿಣಾಮವನ್ನು ತಗ್ಗಿಸಲು ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಬುಧವಾರ ಬಿಡುಗಡೆಯಾದ ಜುಲೈ ತಿಂಗಳ ಮಾಸಿಕ ಪರಿಶೀಲನಾ ವರದಿಯಲ್ಲಿ, ಭಾರತದ ಹಣಕಾಸು ಸಚಿವಾಲಯವು ಪ್ರಸ್ತುತ ನಡೆಯುತ್ತಿರುವ ಭಾರತ-ಯುಎಸ್ ವ್ಯಾಪಾರ ಮಾತುಕತೆಗಳು ಈ ನಿಟ್ಟಿನಲ್ಲಿ ‘ನಿರ್ಣಾಯಕ’ ಎಂದು ಬಿಬಿಸಿ ವರದಿ ಹೇಳಿದೆ.

ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ.

ಭಾರತ ಸರ್ಕಾರವು ಅಮೆರಿಕದ ಸುಂಕ ಹೇರಿಕೆ 48.2 ಬಿಲಿಯನ್ ಡಾಲರ್ ಮೌಲ್ಯದ ರಫ್ತಿನ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಿದೆ. ಹೊಸ ಸುಂಕ ಹೇರಿಕೆ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳಿಂದ ಭಾರತಕ್ಕೆ ಯಾವುದೇ ವಾಣಿಜ್ಯಿಕ ಲಾಭ ಸಿಗದಂತೆ ಮಾಡಲಿದೆ. ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾಗಿ ವರದಿ ವಿವರಿಸಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...