Homeಮುಖಪುಟಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

- Advertisement -
- Advertisement -

ತಿರುವನಂತಪುರಂ: ಪಾಲಕ್ಕಾಡ್ ಜಿಲ್ಲೆಯಲ್ಲಿ ಧೀರ್ಘ ಕಾಲದ ಹಿಂದುತ್ವದ ಮುಖವಾಣಿ ಮತ್ತು ಕೇರಳದ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿರುವ ಕೃಷ್ಣ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ಗಂಭೀರ ಲೈಂಗಿಕ ದೌರ್ಜನ್ಯ ಆರೋಪವನ್ನು ಹೊರಿಸಿದ್ದಾರೆ. ಸಂತ್ರಸ್ತ ಮಹಿಳೆಯು ಕೇರಳ ರಾಜ್ಯ ಬಿಜೆಪಿಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ನೀಡಿದ ದೂರಿನಲ್ಲಿ ಹಲವು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪವನ್ನು ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೆ ಎಲಮಕ್ಕರ್‌ನಲ್ಲಿರುವ ಆರೆಸ್ಸೆಸ್‌ ರಾಜ್ಯ ಕಚೇರಿಯನ್ನು ಪ್ರತಿನಿಧಿಸುವ ಗೋಪಾಲನ್‌ ಕುಟ್ಟಿಯವರನ್ನು ಸಂಪರ್ಕಿಸಿದ್ದೇನೆ ಎಂದು ಸಂತ್ರಸ್ತೆಯು ಹೇಳಿದ್ದಾರೆ. ಆಗಿನ ಸಂಘಟನಾ ಪ್ರಧಾನ ಕಾರ್ಯದರ್ಶಿ ಸುಭಾಷ್‌, ಎಂ.ಟಿ.ರಮೇಶ್‌ ಮತ್ತು ವಿ.ಮುರಳೀಧರನ್ ಅವರಿಗೂ ದೂರನ್ನು ಸಲ್ಲಿಸಿದ್ದೇನೆ ಎಂದಿದ್ದಾರೆ.

ಈ ಎಲ್ಲ ನಾಯಕರು ಕಠಿಣ ಕ್ರಮ ತಗೆದುಕೊಳ್ಳುವ ಮತ್ತು ತನಗೆ ನ್ಯಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ. ಇಷ್ಟಾಗಿಯೂ ಇಲ್ಲಿಯವರೆಗೆ ಆರೋಪಿಯ ವಿರುದ್ಧ ಯಾವುದೇ ಕ್ರಮವನ್ನು ತಗೆದುಕೊಂಡಿಲ್ಲ ಮತ್ತು ನನ್ನ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಆಕೆ ತಾನು ಅವಮಾನಿತಳಾಗಿ ಮತ್ತು ಕೈಬಿಡಲ್ಪಟ್ಟಂತೆ ಭಾಸವಾಯಿತು ಎಂದು ಹೇಳಿದ್ದಾರೆ. ದೂರಿನಲ್ಲಿ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಮತ್ತು ಕೃಷ್ಣಕುಮಾರ್‌ಗೆ ರಾಹುಲ್ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಲು ನೈತಿಕ ಅಧಿಕಾರವಿಲ್ಲ ಎಂದು ದೃಢಪಡಿಸಲಾಗಿದೆ. ಆಕೆ ಕೃಷ್ಣಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕೃಷ್ಣಕುಮಾರ್ ಆರೋಪಗಳನ್ನು ತಳ್ಳಿಹಾಕಿದರು, “ಇದು ನನ್ನ ಪತ್ನಿಯ ಸಹೋದರಿಯನ್ನು ಒಳಗೊಂಡ ಆಸ್ತಿ ವಿವಾದವಷ್ಟೇ. ಇದು ಅವರ ಹಕ್ಕುಗಳನ್ನು ಬಲಪಡಿಸಲು ಸೃಷ್ಟಿಸಲಾದ ಸುಳ್ಳು ಪ್ರಕರಣವಾಗಿದೆ” ಎಂದು ಹೇಳಿದರು.

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ದ ತಾನು ನಡೆಸುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಈ ದೂರು ಮತ್ತೆ ಸಕ್ರಿಯಗೊಂಡಿದೆ ಎಂದು ಅವರು ದೃಢಪಡಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಭಾಗವಾಗಿರುವ, ಮಾಜಿ ಬಿಜೆಪಿ ನಾಯಕ ಮತ್ತು ಈಗಿನ ಕಾಂಗ್ರೆಸ್ ವಕ್ತಾರರಾದ ಸಂದೀಪ್ ಜಿ. ವಾರಿಯರ್ ಈ ಪಿತೂರಿಯಲ್ಲಿ ಸೇರಿರುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂದೀಪ್ ವಾರಿಯರ್, “ಇದು ಆಸ್ತಿ ವಿವಾದವಲ್ಲ, ಇದು ಸಂಪೂರ್ಣ ಆಸ್ತಿ ಕಿತ್ತುಕೊಳ್ಳುವುದು ಆಗಿದೆ” ಎಂದು ಹೇಳಿದರು. ವಾರಿಯರ್ ಮಾತನಾಡುತ್ತಾ, ಪ್ರಧಾನಮಂತ್ರಿಯ ಕಚೇರಿಯು ಏಪ್ರಿಲ್ 22, 2025 ರಂದು ಕೃಷ್ಣಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿದೆ, ಇದು ಎಸ್‌ಪಿ ಕಚೇರಿಯಲ್ಲಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಮತ್ತು ಕೃಷ್ಣಕುಮಾರ್‌ನ ಹೇಳಿಕೆಗೆ ವಿರುದ್ಧವಾಗಿ, ಲೈಂಗಿಕ ಕಿರುಕುಳ ಪ್ರಕರಣವು ಖುಲಾಸೆಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಆತ ಮುಂದುವರೆದು, “ಸಂತ್ರಸ್ತಳು ಎಲ್ಲರಿಗೂ ಒಂದು ಆಶಾಕಿರಣವಾಗಿದ್ದಾಳೆ. ಆಕೆ ಕಾನೂನು ಓದಿ, ತನ್ನದೇ ಪ್ರಕರಣವನ್ನು ಹೋರಾಡಲು ವಕೀಲೆಯಾದಳು” ಎಂದು ಹೇಳಿದರು. ಆಕೆಯ ಗುರುತನ್ನು ಬಹಿರಂಗಪಡಿಸಿದ್ದಕ್ಕಾಗಿ ಕೃಷ್ಣಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದರು.

ಆಕೆಯ ಧೈರ್ಯದ ಹೊರತಾಗಿಯೂ, ಸಂತ್ರಸ್ತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಮಾನಿಸಲಾಗುತ್ತಿದೆ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆತ ಹೇಳಿದರು. “ಆಕೆ ಹೋರಾಡಲು ಮುಂದೆ ಬಂದಿದ್ದರೆ, ಆಕೆಯೊಂದಿಗೆ ನಿಲ್ಲುವುದು ಕೇರಳ ಸರಕಾರದ ಜವಾಬ್ದಾರಿಯಾಗಿದೆ” ಎಂದು ವಾರಿಯರ್ ಒತ್ತಿಹೇಳಿದರು.

ಬಿಜೆಪಿಯ ಕೋರ್ ಕಮಿಟಿಯ ಸದಸ್ಯರ ವಿರುದ್ಧ ಕಾಂಗ್ರೆಸ್ ಪಕ್ಷವು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಾಡಿದಂತೆ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸುವ ಸಂದೇಶವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಸೂಚ್ಯವಾಗಿ ಪೋಸ್ಟ್ ಮಾಡಿದ್ದಾರೆ.

ಕೇರಳದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಆರೋಪಗಳ ನಂತರ ಬಿಜೆಪಿಯ ವಿರುದ್ಧ ಎಕ್ಸ್‌ನಲ್ಲಿ ತೀವ್ರವಾಗಿ ವಾಗ್ದಾಳಿ ನಡೆಸಿತು.

ಬಿಜೆಪಿ ರಾಜ್ಯಾಧ್ಯಕ್ಷರ ಕಚೇರಿಯು ದೂರನ್ನು ಸ್ವೀಕರಿಸಿದ್ದನ್ನು ದೃಢಪಡಿಸಿತು, ಬೆಂಗಳೂರಿನಲ್ಲಿರುವ ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರು, ತಾನು ವಾಪಸಾದ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದುರಂತವೆಂದರೆ, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಅವರ ಹೇಳಿಕೆಯು “ನಿಷ್ಕ್ರಿಯ ಬಾಂಬ್‌” ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಗರು ಕೃಷ್ಣಕುಮಾರ್‌ಗೆ ಬೆಂಬಲವಾಗಿ ಒಗ್ಗೂಡಿದ್ದು, ಈ ಆರೋಪವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ಕೃಷ್ಣಕುಮಾರ್‌ಗೆ ಬೆಂಬಲ ಸೂಚಿಸುವ ಪೋಸ್ಟರ್‌ಗಳು ಪಾಲಕ್ಕಾಡ್‌ ನಗರದಲ್ಲಿ ರಾರಾಜಿಸುತ್ತಿವೆ. ಈ ಘಟನೆಯು ಈ ಚುನಾವಣಾ ಕಣವನ್ನು ಮತ್ತಷ್ಟು ರಂಗೇರಿಸಿದೆ.

ಕೇರಳದಲ್ಲಿ ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿವೆ. ಈ ಬಿರುಗಾಳಿ ಕಾಂಗ್ರೆಸ್ ಪಕ್ಷದ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಸುತ್ತ ಸುತ್ತಿಕೊಂಡಿದೆ. ಬಿಜೆಪಿ ಈ ವಿಷಯವನ್ನು ತೀವ್ರವಾಗಿ ಖಂಡಿಸಿದೆ. ಹಲವಾರು ಮಹಿಳೆಯರು ಮಾಂಕೂಟತ್ತಿತ್ತಿಲ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಈ ವಿಷಯವು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ತೀವ್ರ ಆಕ್ರೋಶಕ್ಕೆ ಒಳಗಾದ ಕಾಂಗ್ರೆಸ್ ಪಕ್ಷ ಮಾಂಕೂಟತ್ತಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಅಸ್ಸಾಂನಲ್ಲಿ ಬಂಗಾಳಿ ಭಾಷಿಕರ ಪರಿಸ್ಥಿತಿ ಭೀಕರ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...