Homeಕರ್ನಾಟಕಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ 'ಕೊಂದವರು ಯಾರು' ಆಂದೋಲನದಿಂದ...

ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳು: ನ್ಯಾಯಕ್ಕಾಗಿ ಮಹಿಳಾ ಆಯೋಗಕ್ಕೆ ‘ಕೊಂದವರು ಯಾರು’ ಆಂದೋಲನದಿಂದ ಹಕ್ಕೊತ್ತಾಯ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ “ಕೊಂದವರು ಯಾರು” (“Who Killed Women in Dharmasthala”) ಜನಾಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದೆ.

ಪ್ರಮುಖ ಬೇಡಿಕೆಗಳು: ಈ ಪತ್ರದಲ್ಲಿ ಆಂದೋಲನವು ಕೆಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ:

  • ಮಹಿಳೆಯರ ನಾಪತ್ತೆ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ರಚಿಸಲಾದ ವಿಶೇಷ ತನಿಖಾ ತಂಡ (S.I.T) ಈ ಪ್ರಕರಣಗಳನ್ನು ತನಿಖೆಯ ಕೇಂದ್ರವನ್ನಾಗಿ ಇಟ್ಟುಕೊಳ್ಳಬೇಕು.
  • ತನಿಖೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಮುಂದುವರೆಯಬೇಕು. ಈ ಪ್ರಕ್ರಿಯೆಗೆ ಸರ್ಕಾರ ಅಥವಾ ಯಾವುದೇ ಪ್ರಭಾವಿ ಶಕ್ತಿಗಳಿಂದ ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವ ಪ್ರಯತ್ನಗಳು ನಡೆಯಬಾರದು.
  • ತನಿಖೆಗೆ ಅಡ್ಡಿಪಡಿಸುತ್ತಿರುವ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೆಲವು ಮಾಧ್ಯಮಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು.
  • ಮಹಿಳೆಯರ ಘನತೆ ಮತ್ತು ಸುರಕ್ಷತೆಯು ತನಿಖೆಯ ಪ್ರಮುಖ ಅಂಶವಾಗಿರಬೇಕು, ರಾಜಕೀಯ ಅಥವಾ ಧಾರ್ಮಿಕ ವಿಚಾರಗಳಲ್ಲ.

ಘಟನೆಗಳ ಉಲ್ಲೇಖ ಧರ್ಮಸ್ಥಳದಂತಹ ಪವಿತ್ರ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವಾರು ಅತ್ಯಾಚಾರ, ಕೊಲೆ ಮತ್ತು ಅಪಹರಣಗಳ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ ಕೆಲವು ಪ್ರಮುಖ ಪ್ರಕರಣಗಳನ್ನು ಆಂದೋಲನ ಉಲ್ಲೇಖಿಸಿದೆ:

  • 2012: ಸೌಜನ್ಯ ಅಪಹರಣ ಮತ್ತು ಕೊಲೆ.
  • 2012: ಸೌಜನ್ಯ ಪ್ರಕರಣಕ್ಕೆ 20 ದಿನಗಳ ಮೊದಲು ಆನೆ ಮಾವುತ ನಾರಾಯಣರೊಂದಿಗೆ ಅವರ ತಂಗಿ ಯಮುನಾ ಕೊಲೆ.
  • 1986: ಪದ್ಮಲತಾ ಅಪಹರಣ, ಅತ್ಯಾಚಾರ ಮತ್ತು ಹತ್ಯೆ.
  • 1979: ಟೀಚರ್‌ ವೇದವಲ್ಲಿ ಮೇಲಿನ ದಾಳಿ, ಅತ್ಯಾಚಾರ ಮತ್ತು ಸುಟ್ಟು ಕೊಲೆ.

ಈ ಪ್ರಕರಣಗಳ ಜೊತೆಗೆ ಇನ್ನೂ ಹಲವು ಮಹಿಳೆಯರು ನಾಪತ್ತೆಯಾಗಿರುವುದು ಅಥವಾ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆಂದೋಲನ ಹೇಳಿದೆ. ಈ ಘಟನೆಗಳನ್ನು ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸದಿರುವುದು ಆಘಾತಕಾರಿ ಎಂದು ಆಂದೋಲನ ತಿಳಿಸಿದೆ.

ಹಾಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಮೇಲೆ ಪ್ರಭಾವ ಬೀರುವಷ್ಟರ ಮಟ್ಟಿಗೆ ಕೆಲವು ಮಾಧ್ಯಮಗಳಲ್ಲಿ ʼಮೀಡಿಯಾ ಟ್ರಯಲ್‌ʼ ನಡೆಯುತ್ತಿದೆ ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ಆಯೋಜಿಸುತ್ತಿವೆ. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತನಿಖೆ ಮಹಿಳೆಯರ ಘನತೆಸುರಕ್ಷತೆಯನ್ನು ಕೇಂದ್ರೀಕರಿಸಬೇಕು; ರಾಜಕೀಯಧಾರ್ಮಿಕ ವಿಚಾರಗಳನ್ನಲ್ಲಎಂದು ಕೊಂದವರು ಯಾರು ಆಂದೋಲನವು ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ, ಸಾಕ್ಷಿಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಪೂರ್ವ ನಿರ್ಧರಿತ ಹೇಳಿಕೆಗಳನ್ನು ನೀಡುತ್ತಿರುವ ರಾಜಕೀಯ ನಾಯಕರನ್ನು ನಿಯಂತ್ರಿಸಬೇಕು ಎಂದು ಆಂದೋಲನವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.

ಮಹಿಳಾ ಆಯೋಗದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷೆ: ಈ ಗಂಭೀರ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರಚನೆಯಲ್ಲಿ ಮಹಿಳಾ ಆಯೋಗದ ಸಕಾರಾತ್ಮಕ ಪಾತ್ರವನ್ನು ಆಂದೋಲನ ಶ್ಲಾಘಿಸಿದೆ. ಪ್ರಸ್ತುತ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮಿ ಚೌಧರಿಯವರು ಈ ಪ್ರಕರಣದಲ್ಲೂ ನ್ಯಾಯದ ಪರವಾಗಿ ದನಿಯೆತ್ತುತ್ತಾರೆ ಎಂದು ಆಂದೋಲನದ ಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹೋರಾಟವು ಕೇವಲ ಆಯೋಗದ ಜವಾಬ್ದಾರಿಯಲ್ಲ, ಬದಲಾಗಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಚಾರಿತ್ರಿಕ ಜವಾಬ್ದಾರಿಯೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನದಲ್ಲಿ ಭಾಗವಹಿಸಿದವರು: ಈ ಆಂದೋಲನದಲ್ಲಿ “ನಾವೆದ್ದು ನಿಲ್ಲದಿದ್ದರೆ” ಸಂಘಟನೆಯ ಮಮತಾ ಯಜಮಾನ್, ಮಧುಭೂಷಣ್, ಜನವಾದಿ ಮಹಿಳಾ ಸಂಘಟನೆಯ ಲಕ್ಷ್ಮಿ ಕೆ.ಎಸ್, ಮಾನಸ ಬಳಗದ ಚಂಪಾವತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಗೌರಿ, ದಲಿತ ಮಹಿಳಾ ಸಂಘಟನೆಯ ನಾಗಮಣಿ, ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಾಧನಾ ಮಹಿಳಾ ಗುಂಪಿನ ವಿನುತಾ, ಚಂದ್ರಶಿ, ಗೀತಾ, ಆಯೆಷಾ, ಹಸಿರು ದಳದ ಮೀನಾಕ್ಷಿ ಮತ್ತು ಶಶಿಕಲಾ ಸೇರಿದಂತೆ ಅನೇಕ ಮಹಿಳಾ ಹಕ್ಕುಗಳ ಹೋರಾಟಗಾರರು ಭಾಗವಹಿಸಿದ್ದರು.

ಪೊಲೀಸ್ ಮಹಾನಿರ್ದೇಶಕರ ಭೇಟಿ ಈ ಆಂದೋಲನದ ಪ್ರತಿನಿಧಿಗಳಾದ ಮಧುಭೂಷಣ್, ಮನು ಚೌಧರಿ, ವಿನಯ್ ಶ್ರೀನಿವಾಸ್, ಮೀನಾಕ್ಷಿ ಮತ್ತು ಪದ್ಮಾವತಿ ಅವರು ಆಗಸ್ಟ್ 28ರಂದು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ, ಸಾಕ್ಷಿಗಳ ಮೇಲೆ ಮಾಧ್ಯಮ ಟ್ರಯಲ್ ನಡೆಯುತ್ತಿರುವ ಬಗ್ಗೆ ಗಮನ ಸೆಳೆದರು ಮತ್ತು ಅದನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...