Homeಮುಖಪುಟಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

ಉನ್ನತ ನ್ಯಾಯಾಂಗದಲ್ಲಿ ಮಹಿಳಾ ನ್ಯಾಯಾಧೀಶರ ಕೊರತೆ: ಕಳವಳ ವ್ಯಕ್ತಪಡಿಸಿದ ಎಸ್‌ಸಿಬಿಎ

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡರಲ್ಲೂ ಉನ್ನತ ನ್ಯಾಯಾಂಗಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಸಾಕಷ್ಟು ಲಿಂಗ ವೈವಿಧ್ಯತೆಯನ್ನು ಕಾಯ್ದುಕೊಳ್ಳುವಂತೆ ಕೊಲಿಜಿಯಂ ಅನ್ನು ಒತ್ತಾಯಿಸಿದೆ.

ಆಗಸ್ಟ್ 30, 2025ರಂದು ಅಂಗೀಕರಿಸಲಾದ ನಿರ್ಣಯದಲ್ಲಿ, ಉತ್ತರಾಖಂಡ, ತ್ರಿಪುರ, ಮೇಘಾಲಯ ಮತ್ತು ಮಣಿಪುರದಂತಹ ಹಲವಾರು ಹೈಕೋರ್ಟ್‌ಗಳಲ್ಲಿ ಪ್ರಸ್ತುತ ಮಹಿಳಾ ನ್ಯಾಯಾಧೀಶರೇ ಇಲ್ಲ ಎಂದು ಎಸ್‌ಸಿಬಿಎ ಹೇಳಿದೆ. ದೇಶದಾದ್ಯಂತ, ಸುಮಾರು 1,100 ಅನುಮೋದಿತ ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳಲ್ಲಿ, ಸುಮಾರು 670 ಪುರುಷರು ಮತ್ತು ಕೇವಲ 103 ಮಹಿಳೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದೆ.

ಇತ್ತೀಚಿನ ನ್ಯಾಯಾಂಗ ನೇಮಕಾತಿಗಳ ಕುರಿತು ಸಂಘವು ತನ್ನ ‘ತೀವ್ರ ನಿರಾಶೆ’ ದಾಖಲಿಸಿದೆ. 2021ರಿಂದ ಸುಪ್ರೀಂ ಕೋರ್ಟ್‌ಗೆ ಯಾವುದೇ ಮಹಿಳಾ ನ್ಯಾಯಾಧೀಶರನ್ನು ನೇಮಿಸಲಾಗಿಲ್ಲ ಎಂದು ಹೇಳಿದೆ. ಪ್ರಸ್ತುತ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಸುಪ್ರೀಂ ಕೋರ್ಟ್‌ನ ಏಕೈಕ ಮಹಿಳಾ ನ್ಯಾಯಾಧೀಶರಾಗಿದ್ದಾರೆ.

ಉನ್ನತ ನ್ಯಾಯಾಂಗ ನೇಮಕಾತಿಗಳಲ್ಲಿ ಮಹಿಳೆಯರಿಗೆ ಕನಿಷ್ಠ ಅನುಪಾತದ ಪ್ರಾತಿನಿಧ್ಯಕ್ಕೆ ಒತ್ತಾಯಿಸಿ, ತನ್ನ ಅಧ್ಯಕ್ಷ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮೇ 24, 2025 ಮತ್ತು ಜುಲೈ 18, 2025ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು ಎಂದು ಎಸ್‌ಸಿಬಿಎ ನೆನಪಿಸಿಕೊಂಡಿದೆ.

ನ್ಯಾಯಯುತ ಮತ್ತು ಸಮಾನ ಪ್ರಾತಿನಿಧ್ಯಕ್ಕಾಗಿ ಮಾತ್ರವಲ್ಲದೆ, ನ್ಯಾಯಾಂಗದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಬಲಪಡಿಸಲು, ನ್ಯಾಯಾಂಗ ದೃಷ್ಟಿಕೋನಗಳನ್ನು ಶ್ರೀಮಂತಗೊಳಿಸಲು ಮತ್ತು ನ್ಯಾಯ ಸಂಸ್ಥೆಯಲ್ಲಿ ಸಮಾಜದ ವೈವಿಧ್ಯತೆಯನ್ನು ಪ್ರತಿಬಿಂಬಿಸಲು ನ್ಯಾಯಪೀಠದಲ್ಲಿ ಹೆಚ್ಚಿನ ಲಿಂಗ ಸಮತೋಲನ ಅತ್ಯಗತ್ಯ ಎಂದು ಎಸ್‌ಸಿಬಿಎ ನಿರ್ಣಯವು ಒತ್ತಿ ಹೇಳಿದೆ.

ಅದರಂತೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳೆರಡಕ್ಕೂ ಮುಂಬರುವ ನ್ಯಾಯಾಂಗ ನೇಮಕಾತಿಗಳಲ್ಲಿ ಹೆಚ್ಚಿನ ಮಹಿಳಾ ನ್ಯಾಯಾಧೀಶರ ಆಯ್ಕೆ ಮತ್ತು ಬಡ್ತಿಗೆ ‘ತುರ್ತು ಹಾಗೂ ಸರಿಯಾದ ಪರಿಗಣನೆ’ ನೀಡುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಕೊಲಿಜಿಯಂಗೆ ವಿನಂತಿಸಲು ಎಸ್‌ಸಿಬಿಎ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರ ನೇಮಕದ ಸುತ್ತ ಚರ್ಚೆಗಳು ಗರಿಗೆದರರಿರುವ ನಡುವೆ, ಎಸ್‌ಸಿಬಿಎ ಮಹಿಳಾ ನ್ಯಾಯಾಧೀಶರ ಕೊರತೆಯ ಬಗ್ಗೆ ನಿರ್ಣಯ ಕೈಗೊಂಡಿದೆ. ಹಿರಿಯರಾದ ಕನಿಷ್ಠ ಮೂವರು ಮಹಿಳಾ ನ್ಯಾಯಾಧೀಶರಿಗಿಂತ ವಿಪುಲ್ ಪಂಚೋಲಿಗೆ ಏಕೆ ಆದ್ಯತೆ ನೀಡಲಾಯಿತು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಅಂತರ ಧರ್ಮೀಯ ಭೂ ವರ್ಗಾವಣೆಗೆ ಎಸ್‌ಒಪಿ: ಅಸ್ಸಾಂ ಸರ್ಕಾರದ ಕ್ರಮಕ್ಕೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...