Homeದಲಿತ್ ಫೈಲ್ಸ್ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

- Advertisement -
- Advertisement -

ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಥಳಿಸಿ, ತಲೆಕೆಳಗಾಗಿ ಮರಕ್ಕೆ ನೇತುಹಾಕಲಾಗಿದೆ ಎಂಬ ಆರೋಪದ ಮೇಲೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪ್ರಬಲಜಾತಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕೃತ್ಯಕ್ಕೆ ಸಹಕರಿಸಿದ ಇತರ ಇಬ್ಬರನ್ನು ಬಂಧಿಸಲಾಗಿದೆ; ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಬಾಲಕನ ತಾಯಿ ಮತ್ತು ಅಜ್ಜಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಳಕನ ತಾಯಿ ಪುರಿ ದೇವಿ ಪ್ರಕಾರ, ಅವನು ತಮ್ಮ ಭಖರ್‌ಪುರ ಗ್ರಾಮದಲ್ಲಿ ಆಟವಾಡುತ್ತಿದ್ದಾಗ, ನರನಾರಾಮ್ ಪ್ರಜಾಪತ್ ಮತ್ತು ದೇಮಾರಾಮ್ ಪ್ರಜಾಪತ್ ಎಂಬುವವರು ಸ್ನಾನಗೃಹವನ್ನು ಸ್ವಚ್ಛಗೊಳಿಸಲು ಮತ್ತು ಕಸ ಸಂಗ್ರಹಿಸಲು ಸೂಚಿಸಿದ್ದಾರೆ.

ಅಪ್ರಾಪ್ತ ಬಾಲಕ ಕೆಲಸ ಮುಗಿಸಿ ನೀರು ಕೇಳಿದ ನಂತರ ದೈಹಿಕ ಹಲ್ಲೆ ಪ್ರಾರಂಭವಾಯಿತು ಎಂದು ವರದಿಯಾಗಿದೆ. ನೀರಿನ ಪಾತ್ರೆ ಮುಟ್ಟಿದ ನಂತರ ಆರೋಪಿಗಳು ಬಾಲಕನನ್ನು ನರನಾರಾಮ್ ಅವರ ನಿವಾಸಕ್ಕೆ ಕರೆದೊಯ್ದರು, ಅಲ್ಲಿ ಅವರು ಅವನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಹೊಡೆಯುವುದನ್ನು ಮುಂದುವರೆಸಿದರು ಎಂದು ವರದಿಯಾಗಿದೆ.

ಅಪ್ರಾಪ್ತ ವಯಸ್ಕನ ಸಂಬಂಧಿಯೊಬ್ಬರು ಘಟನೆಯನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ ಹಲ್ಲೆ ನಿಲ್ಲಿಸಿದರು ಎಂದು ವರದಿಯಾಗಿದೆ.

“ಪ್ರಾಥಮಿಕ ತನಿಖೆ, ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕನನ್ನು ಕ್ರೂರವಾಗಿ ಥಳಿಸಿ ತಲೆಕೆಳಗಾಗಿ ನೇತುಹಾಕಲಾಗಿದೆ ಎಂದು ದೃಢಪಟ್ಟಿದೆ. ಆದರೂ, ನೀರಿನ ಪಾತ್ರೆಯನ್ನು ಮುಟ್ಟಿದ್ದರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಇನ್ನೂ ತನಿಖೆಯಲ್ಲಿದೆ” ಎಂದು ಪೊಲೀಸ್ ಅಧಿಕಾರಿ ಸುಖ್‌ರಾಮ್ ಬಿಷ್ಣೋಯ್ ಹೇಳಿದರು.

ಆರೋಪಿಗಳು ಪುರಿ ದೇವಿಯ ಮನೆಗೆ ನುಗ್ಗಿ ಅವರ ಮತ್ತು ಅವರ ಅತ್ತೆಯ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 30 ರಂದು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ಬಿಷ್ಣೋಯ್ ಹೇಳಿದರು. “ಶಂಕಿತರನ್ನು ನರ್ನಾರಾಮ್, ದೇಮಾರಾಮ್ ಮತ್ತು ರೂಪರಾಮ್ ಪ್ರಜಾಪತ್ ಎಂದು ಗುರುತಿಸಲಾಗಿದೆ, ಎಲ್ಲರೂ ಭಾಖರ್‌ಪುರ ನಿವಾಸಿಗಳು” ಎಂದರು.

ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), ಸೆಕ್ಷನ್ 127(2) (ಅಕ್ರಮ ಬಂಧನ), ಮತ್ತು ಸೆಕ್ಷನ್ 137(2) (ಅಪಹರಣ) ಮತ್ತು 1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...