Homeಅಂತರಾಷ್ಟ್ರೀಯಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

ಸುಡಾನ್‌ನಲ್ಲಿ ಭಾರೀ ಭೂಕುಸಿತ: ಒಂದು ಹಳ್ಳಿಯೇ ಸಂಪೂರ್ಣ ನಾಶ, 1000ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಸುಡಾನ್‌ನ ಪಶ್ಚಿಮ ಪ್ರದೇಶದ ಡಾರ್ಫರ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದು ಹಳ್ಳಿ ಸಂಪೂರ್ಣ ನಾಶವಾಗಿದ್ದು, ಸುಮಾರು 1,000 ಜನರು ಸಾವನ್ನಪ್ಪಿದ್ದಾರೆ ಎಂದು ಆ ಪ್ರದೇಶವನ್ನು ನಿಯಂತ್ರಿಸುವ ಬಂಡಾಯ ಗುಂಪು ಸೋಮವಾರ (ಸೆ.1) ತಡರಾತ್ರಿ ಮಾಹಿತಿ ನೀಡಿದೆ.

ಆಗಸ್ಟ್ ಅಂತ್ಯದಲ್ಲಿ ಕೆಲವು ದಿನಗಳ ಕಾಲ ಸುರಿದ ಭಾರೀ ಮಳೆಯ ನಂತರ ಸೆಂಟ್ರಲ್ ಡಾರ್ಫರ್‌ನ ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, ಅಂದಾಜು ಒಂದು ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

ಗ್ರಾಮವು ‘ಸಂಪೂರ್ಣವಾಗಿ ನೆಲಸಮವಾಗಿದೆ’ ಎಂದು ಗುಂಪು ಹೇಳಿದೆ, ಅವಶೇಗಳ ಅಡಿಯಿಂದ ಶವಗಳನ್ನು ಮೇಲೆತ್ತಲು ಸಹಾಯ ಮಾಡುವಂತೆ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ನೆರವು ಗುಂಪುಗಳಿಗೆ ಮನವಿ ಮಾಡಿದೆ.

ಮರ್ರಾ ಪರ್ವತಗಳ ಸುದ್ದಿವಾಹಿನಿ ಹಂಚಿಕೊಂಡ ದೃಶ್ಯಗಳಲ್ಲಿ ಪರ್ವತ ಶ್ರೇಣಿಗಳ ನಡುವಿನ ಸಮತಟ್ಟಾದ ಪ್ರದೇಶವೊಂದು ಕಂಡುಬಂದಿದ್ದು, ಆ ಪ್ರದೇಶದಲ್ಲಿ ಜನರ ಗುಂಪೊಂದು ಹುಡುಕಾಟ ನಡೆಸುತ್ತಿರುವುದನ್ನು ನೋಡಬಹುದು.

ಏಪ್ರಿಲ್ 2023ರಲ್ಲಿ ರಾಜಧಾನಿ ಖಾರ್ಟೌಮ್ ಮತ್ತು ದೇಶದ ಇತರೆಡೆಗಳಲ್ಲಿ ದೇಶದ ಮಿಲಿಟರಿ ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ (ಆರ್‌ಎಸ್‌ಎಫ್‌) ನಡುವಿನ ಉದ್ವಿಗ್ನತೆ ಬಹಿರಂಗ ಹೋರಾಟವಾಗಿ ಬದಲಾಗಿದೆ. ಇದರಿಂದ ಸುಡಾನ್ ಅನ್ನು ವಿನಾಶಕಾರಿ ಅಂತರ್ಯುದ್ಧ ಆವರಿಸಿದೆ. ಈ ನಡುವೆಯೇ ಈ ದುರಂತ ಸಂಭವಿಸಿದೆ.

ಸುಡಾನ್ ಸೇನೆ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟ ಮತ್ತು ಕಠಿಣ ನಿರ್ಬಂಧಗಳಿಂದಾಗಿ, ಮರ್ರಾ ಪರ್ವತಗಳು ಸೇರಿದಂತೆ ಡಾರ್ಫರ್ ಪ್ರದೇಶದ ಹೆಚ್ಚಿನ ಭಾಗಳಿಗೆ ವಿಶ್ವಸಂಸ್ಥೆ ಮತ್ತು ನೆರವು ಗುಂಪುಗಳಿಗೆ ಪ್ರವೇಶಿಸಲು ಅಸಾಧ್ಯವಾಗಿದೆ.

ಮರ್ರಾ ಪರ್ವತ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಸುಡಾನ್ ಲಿಬರೇಶನ್ ಮೂವ್‌ಮೆಂಟ್-ಆರ್ಮಿ, ಡಾರ್ಫರ್ ಮತ್ತು ಕೊರ್ಡೊಫಾನ್ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಬಹು ಬಂಡಾಯ ಗುಂಪುಗಳಲ್ಲಿ ಒಂದಾಗಿದೆ.

ಮರ್ರಾ ಪರ್ವತಗಳು ಎಲ್-ಫಶರ್‌ನ ನೈಋತ್ಯಕ್ಕೆ 160 ಕಿಲೋಮೀಟರ್ (100 ಮೈಲುಗಳು) ವಿಸ್ತರಿಸಿರುವ ಒರಟಾದ ಜ್ವಾಲಾಮುಖಿ ಸರಪಳಿಯಾಗಿದ್ದು, ಇದು ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಹೋರಾಟದ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಎಲ್-ಫಶರ್ ಮತ್ತು ಸುತ್ತಮುತ್ತಲಿನ ಹೋರಾಟದಿಂದ ಪಲಾಯನ ಮಾಡುವ ಸ್ಥಳಾಂತರಗೊಂಡ ಕುಟುಂಬಗಳಿಗೆ ಕೇಂದ್ರವಾಗಿ ಮಾರ್ಪಟ್ಟಿದೆ.

ಮಿಲಿಟರಿ ಮತ್ತು ಆರ್‌ಎಸ್‌ಎಫ್ ನಡುವಿನ ಸಂಘರ್ಷವು 40,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, 14 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಬರಗಾಲ ಆವರಿಸಿ ಜನರು ಜೀವ ಉಳಿಸಿಕೊಳ್ಳಲು ಹುಲ್ಲು ತಿನ್ನುವ ಪರಿಸ್ಥಿತಿ ನಿರ್ಮಿಸಿದೆ.

ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ, ಜನಾಂಗೀಯ ಪ್ರೇರಿತ ಹತ್ಯೆ ಮತ್ತು ಅತ್ಯಾಚಾರ ಸೇರಿದಂತೆ ಘೋರ ದೌರ್ಜನ್ಯಗಳಿಂದ ಈ ಸಂಘರ್ಷ ಗುರುತಿಸಲ್ಪಟ್ಟಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆಪಾದಿತ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ತನಿಖೆ ನಡೆಸುತ್ತಿದೆ.

ತಾರಾಸಿನ್ ಗ್ರಾಮವು ಮಧ್ಯ ಮರ್ರಾ ಪರ್ವತಗಳಲ್ಲಿದೆ. ಇದು ಜ್ವಾಲಾಮುಖಿ ಪ್ರದೇಶವಾಗಿದ್ದು, ಅದರ ಶಿಖರ 3,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರವಿದೆ. ವಿಶ್ವ ಪರಂಪರೆಯ ತಾಣವಾಗಿರುವ ಈ ಪರ್ವತ ಸರಪಳಿಯು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಕಡಿಮೆ ತಾಪಮಾನ ಮತ್ತು ಹೆಚ್ಚಿನ ಮಳೆಗೆ ಹೆಸರುವಾಸಿಯಾಗಿದೆ. ಇದು ರಾಜಧಾನಿ ಖಾರ್ಟೌಮ್‌ನಿಂದ ಪಶ್ಚಿಮಕ್ಕೆ 900 ಕಿಲೋಮೀಟರ್‌ಗಳಿಗಿಂತ (560 ಮೈಲುಗಳು) ಹೆಚ್ಚು ದೂರದಲ್ಲಿದೆ.

ಭಾನುವಾರದ ಭೂಕುಸಿತವು ಸುಡಾನ್‌ನ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಜುಲೈನಿಂದ ಅಕ್ಟೋಬರ್‌ವರೆಗೆ ಮಳೆಯಾಗುವುದರಿಂದ ಪ್ರತಿ ವರ್ಷ ನೂರಾರು ಜನರು ಇಲ್ಲಿ ಸಾಯುತ್ತಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...