Homeದಲಿತ್ ಫೈಲ್ಸ್ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

- Advertisement -
- Advertisement -

2020 ರಲ್ಲಿ ಎಂಟು ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಕ್ಕಾಗಿ ಮಥುರಾದ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು ಮಂಗಳವಾರ 50 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ.

ಇದನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಕರೆದಿರುವ ಕೋರ್ಟ್‌, ಶವಪರೀಕ್ಷೆಯ ವರದಿಯು ಬಲಿಪಶುವಿನ ಖಾಸಗಿ ಭಾಗಗಳಲ್ಲಿ ಅನೇಕ ತೀಕ್ಷ್ಣವಾದ ಗಾಯಗಳಾಗಿದ್ದು, ಆಕೆಯ ಗರ್ಭಕೋಶಕ್ಕೆ ತೀವ್ರ ಹಾನಿಯಾಗಿದೆ. ಆಕೆಯ ಮೂತ್ರಪಿಂಡಗಳು ಮತ್ತು ಯಕೃತ್ತಿನಲ್ಲಿ ಆಂತರಿಕ ರಕ್ತಸ್ರಾವವಾಗಿದ್ದು, ಇದು ಆಕೆಯ ಸಾವಿಗೆ ಕಾರಣವಾಯಿತು ಎಂದು ಬಹಿರಂಗಪಡಿಸಿದೆ.

ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಸುಭಾಷ್ ಚತುರ್ವೇದಿ, “ಶವಪರೀಕ್ಷೆ ನಡೆಸಿದ ವೈದ್ಯ ಸೋನು ಚತುರ್ವೇದಿ, ಗುದನಾಳ ಮತ್ತು ಕುತ್ತಿಗೆಯ ಮೇಲೆ ಗಾಯಗಳು, ಆಕೆಯ ಭುಜದ ಮೇಲೆ ಆಳವಾದ ಕಡಿತದ ಗುರುತುಗಳು ಮತ್ತು ಆಕೆಯ ದೇಹದ ಹಲವಾರು ಭಾಗಗಳಲ್ಲಿ ಗೀರುಗಳನ್ನು ಸಹ ಕಂಡುಕೊಂಡರು. ತೀವ್ರ ರಕ್ತದ ನಷ್ಟದಿಂದಾಗಿ ಆಕೆ ಸಾವನ್ನಪ್ಪಿರಬಹುದು. ಏಕೆಂದರೆ, ಅಪರಾಧಿ ಆಕೆಯ ಮೇಲೆ ಹಲ್ಲೆ ಮಾಡಿದ ನಂತರ, ಕತ್ತು ಹಿಸುಕಿ ಕೊಂದು ರಾತ್ರಿ ಕಾಡಿನಲ್ಲಿ ಸಾಯಲು ಬಿಟ್ಟಿದ್ದ” ಎಂದು ವಿವರಿಸಿದ್ದಾರೆ.

ನವೆಂಬರ್ 26, 2020 ರಂದು, ಮಥುರಾ ಜಿಲ್ಲೆಯ ತನ್ನ ಹಳ್ಳಿಯ ಮಹಿಳೆಯೊಂದಿಗೆ ಉರುವಲು ಸಂಗ್ರಹಿಸುತ್ತಿದ್ದಾಗ ಎರಡನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಲಾಯಿತು. ಆ ಸಂಜೆ ಆಕೆ ಮನೆಗೆ ಹಿಂತಿರುಗದಿದ್ದಾಗ ಬಾಲಕಿಯ ತಂದೆ ನಾಪತ್ತೆ ದೂರು ದಾಖಲಿಸಿದರು. ನಂತರ ಪೊಲೀಸರು ವೃಂದಾವನದ ಅರಣ್ಯ ಪ್ರದೇಶದಲ್ಲಿ ಆಕೆಯ ಶವವನ್ನು ಪತ್ತೆಹಚ್ಚಿದ್ದರು. ಅಲ್ಲಿ, ಆಕೆಯದ್ದೇ ಬಟ್ಟೆಗಳಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿತ್ತು.

ಬಾಲಕಿಯ ಗ್ರಾಮಸ್ಥನೇ ಆದ ಆರೋಪಿಯನ್ನು ಎರಡು ದಿನಗಳ ನಂತರ ನವೆಂಬರ್ 28 ರಂದು ಬಂಧಿಸಲಾಯಿತು.

ಐಪಿಸಿ ಸೆಕ್ಷನ್ 363 (ಅಪಹರಣ), 376 (ಅತ್ಯಾಚಾರ), 377 (ಪ್ರಕೃತಿಯ ಆದೇಶದ ವಿರುದ್ಧ ಸಂಭೋಗ), 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶ) ಜೊತೆಗೆ ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜನವರಿ 25, 2021 ರಂದು ಆರೋಪಪಟ್ಟಿ ಸಲ್ಲಿಸಲಾಯಿತು, ಮುಂದಿನ ತಿಂಗಳು ವಿಚಾರಣೆ ಪ್ರಾರಂಭವಾಯಿತು.

ವಿಚಾರಣೆಯ ಸಮಯದಲ್ಲಿ, ಪೊಲೀಸರು ಒಂಬತ್ತು ವ್ಯಕ್ತಿಗಳ ಸಾಕ್ಷ್ಯಗಳು, ವೈಜ್ಞಾನಿಕ ಪುರಾವೆಗಳು ಮತ್ತು ಶವಪರೀಕ್ಷೆಯ ಸಂಶೋಧನೆಗಳನ್ನು ಪ್ರಸ್ತುತಪಡಿಸಿದರು. ತನಿಖಾಧಿಕಾರಿಗಳು ಬಲಿಪಶುವಿನ ಉಗುರುಗಳಲ್ಲಿ ಅಪರಾಧಿಯ ಚರ್ಮದ ಅಂಗಾಂಶಗಳನ್ನು ಕಂಡುಕೊಂಡರು. ಗ್ರಾಮದ ಮಹಿಳೆಯೊಬ್ಬರು ಆ ವ್ಯಕ್ತಿ ಹುಡುಗಿಯರೊಂದಿಗೆ ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಸಾಕ್ಷ್ಯ ನೀಡಿದರು.

ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಅವರು ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು. ಇದು ಅವನ ಮೊದಲ ಅಪರಾಧ ಎಂದು ಚತುರ್ವೇದಿ ಹೇಳಿದರು. ಕೃತ್ಯದ ಅನಾಗರಿಕತೆಯನ್ನು ಪರಿಗಣಿಸಿ, ನ್ಯಾಯಾಲಯವು ಅವನನ್ನು ತಪ್ಪಿತಸ್ಥನೆಂದು ಪರಿಗಣಿಸಿ “ಅಪರಾಧಿಯನ್ನು ಸಾಯುವವರೆಗೂ ನೇತುಹಾಕಬೇಕು” ಎಂದು ತೀರ್ಪು ನೀಡಿತು. ಅಪರಾಧಿಗೆ 3,20,000 ರೂ. ದಂಡವನ್ನೂ ವಿಧಿಸಿದೆ.

ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...