Homeಕರ್ನಾಟಕ'ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?'; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

- Advertisement -
- Advertisement -

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ” ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ ಎಂಬ ಕುಸುಮಾವತಿಯವರ ಮಾತಿಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ.
ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ” ಎಂದು ಅವರು ಹರಿಯಾಯ್ದಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು ‘ಧರ್ಮಸ್ಥಳದಿಂದ ವಾಪಸ್ ಚಲೋ’ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬಿಜೆಪಿ ಕುರಿತು ಬರೆದುಕೊಂಡಿದ್ದಾರೆ.

ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳ ಗ್ರಾಮದಲ್ಲಿ ಹಲವು ದಶಕಳಿಂದ ನಡೆದಿವೆ ಎನ್ನಲಾದ ಸರಣಿ ಕೊಲೆ-ಅತ್ಯಾಚಾರ ಮತ್ತು ಅನಧಿಕೃತ ಶವಸಂಸ್ಕಾರಗಳ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ. ಸೆ.1 ರಂದು “ನಮ್ಮ ನಡಿಗೆ ಧರ್ಮದೆಡೆಗೆ-ಧರ್ಮಸ್ಥಳ ಚಲೋ” ಹೆಸರನಲ್ಲಿ ಬೃಹತ್ ಸಮಾವೇಶ ಏರ್ಪಡಿಸಿತ್ತು. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರು ಕುಮಾರಿ ಸೌಜನ್ಯಾ ಮನೆಗೂ ಭೇಟಿ ನೀಡಿದ್ದರು.

“ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ. ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಯವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...