Homeಕರ್ನಾಟಕಧರ್ಮಸ್ಥಳ ಪ್ರಕರಣ: ಎನ್‌ಐಎ ತನಿಖೆ ಬೇಡಿಕೆ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಧರ್ಮಸ್ಥಳ ಪ್ರಕರಣ: ಎನ್‌ಐಎ ತನಿಖೆ ಬೇಡಿಕೆ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಕೊಲೆಗಳು, ಅತ್ಯಾಚಾರ ಮತ್ತು ಅಕ್ರಮವಾಗಿ ಹೂತಿರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಬೇಕೆಂಬ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿಹಾಕಿದರು.

‘ಈ ಪ್ರಕರಣವನ್ನು ಈಗಾಗಲೇ ರಾಜ್ಯದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ವಹಿಸುತ್ತಿದೆ’ ಎಂದು ಪ್ರತಿಪಾದಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಹಿಂದೂ ಮತ್ತು ಜೈನ ಸನ್ಯಾಸಿಗಳು ಮಾಡಿದ ಬೇಡಿಕೆಗಳ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ನಾವು ಎಸ್‌ಐಟಿ ರಚಿಸಿದ್ದೇವೆ, ಅವರು ಪೊಲೀಸರೇ. ಎನ್‌ಐಎಯಲ್ಲಿ ಯಾರಿದ್ದಾರೆ? ಅವರೂ ಪೊಲೀಸರೇ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕೂಡ ಎನ್‌ಐಎ ತನಿಖೆಗೆ ಒತ್ತಾಯಿಸಿವೆ, ಕಾಂಗ್ರೆಸ್ ಸರ್ಕಾರವು ಈ ವಿಷಯವನ್ನು ತಪ್ಪಾಗಿ ನಿರ್ವಹಿಸಿದೆ, ಆರೋಪಗಳನ್ನು ಧರ್ಮಸ್ಥಳ ಮತ್ತು ಮಂಜುನಾಥ ಸ್ವಾಮಿ ದೇವಾಲಯದ ಹೆಸರು ಕೆಡಿಸುವ ಪಿತೂರಿಯ ಭಾಗವೆಂದು ಆರೋಪಿಸಿದೆ.

ಕೇಂದ್ರ ಹಸ್ತಕ್ಷೇಪದ ಬೇಡಿಕೆಗಳ ಹಿಂದಿನ ತಾರ್ಕಿಕತೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಪ್ರಶ್ನಿಸಿದ ಒಂದು ದಿನದ ನಂತರ ಮುಖ್ಯಮಂತ್ರಿಗಳ ಹೇಳಿಕೆ ನೀಡಿದ್ದಾರೆ. “ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ನಾವು ಒಂದು ಎಸ್‌ಐಟಿ ಅನ್ನು ರಚಿಸಿದ್ದೇವೆ. ಈ ಹಿಂದೆ, ಅವರು (ಧಾರ್ಮಿಕ ಮುಖಂಡರು) ಎಸ್‌ಐಟಿ ತನಿಖೆಯೇ ಸರಿಯಾಗಿಲ್ಲ ಎಂದು ಹೇಳುತ್ತಿದ್ದರು. ಈಗ ಅವರು ಈ ವಿಷಯವನ್ನು ಎನ್‌ಐಎಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅದು ಕೂಡ ಒಂದು ತನಿಖೆಯಲ್ಲವೇ” ಎಂದು ಅವರು ಕೇಳಿದರು.

ದೂರುದಾರರಾದ ಸಿ.ಎನ್. ಚಿನ್ನಯ್ಯ, ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ಲೈಂಗಿಕ ದೌರ್ಜನ್ಯದ ಲಕ್ಷಣಗಳನ್ನು ತೋರಿಸುತ್ತಿರುವ ಮಹಿಳೆಯರು ಸೇರಿದಂತೆ ಹಲವಾರು ಶವಗಳನ್ನು ಹೂಳಿದ್ದಾರೆ ಎಂದು ಹೇಳಿಕೊಂಡ ನಂತರ ವಿವಾದ ಭುಗಿಲೆದ್ದಿತು. ದೇವಾಲಯದ ಆಡಳಿತಾಧಿಕಾರಿಗಳ ಕಡೆಗೆ ತೋರಿಸಲಾದ ಆರೋಪಗಳು ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದವು, ನಂತರ ಚಿನಯ್ಯ ಅವರನ್ನು ಸುಳ್ಳು ಸಾಕ್ಷ್ಯಕ್ಕಾಗಿ ಬಂಧಿಸಲಾಯಿತು.

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ, ಎನ್‌ಐಎ ಅಗತ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...