Homeಮುಖಪುಟಅದಾನಿ ಬಗ್ಗೆ 'ಮಾನಹಾನಿಕರ' ವರದಿಗಳನ್ನು ಪ್ರಕಟಿಸದಂತೆ ಪತ್ರಕರ್ತರು, ವೆಬ್‌ಸೈಟ್‌ಗಳಿಗೆ ನಿರ್ಬಂಧ ವಿಧಿಸಿದ ದೆಹಲಿ ನ್ಯಾಯಾಲಯ

ಅದಾನಿ ಬಗ್ಗೆ ‘ಮಾನಹಾನಿಕರ’ ವರದಿಗಳನ್ನು ಪ್ರಕಟಿಸದಂತೆ ಪತ್ರಕರ್ತರು, ವೆಬ್‌ಸೈಟ್‌ಗಳಿಗೆ ನಿರ್ಬಂಧ ವಿಧಿಸಿದ ದೆಹಲಿ ನ್ಯಾಯಾಲಯ

- Advertisement -
- Advertisement -

ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ದೆಹಲಿ ನ್ಯಾಯಾಲಯವು ಶನಿವಾರ ಐವರು ಪತ್ರಕರ್ತರು ಮತ್ತು ಕೆಲವು ವೆಬ್‌ಸೈಟ್‌ಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ನಿರ್ಬಂಧ ವಿಧಿಸಲಾಗಿದೆ.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ.

ತಕ್ಷಣ ವಿಷಯವನ್ನು ತೆಗೆದುಹಾಕಲು ಸಾಧ್ಯವಾಗದಿದ್ದರೆ, ಐದು ದಿನಗಳಲ್ಲಿ ತೆಗೆದುಹಾಕುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಆದಾಗ್ಯೂ, ‘ನ್ಯಾಯಯುತ, ಪರಿಶೀಲಿಸಿದ ಮತ್ತು ಸಮರ್ಥನೀಯ’ ವರದಿ ಮಾಡುವಿಕೆಯಿಂದ ಮತ್ತು ಅಂತಹ ಲೇಖನಗಳು, ಪೋಸ್ಟ್‌ಗಳು ಅಥವಾ ವೆಬ್‌ಪುಟ ಲಿಂಕ್‌ಗಳನ್ನು ಹೋಸ್ಟ್ ಮಾಡುವುದು, ಸಂಗ್ರಹಿಸುವುದು ಅಥವಾ ಪ್ರಸಾರ ಮಾಡುವುದರಿಂದ ಪ್ರತಿವಾದಿಗಳನ್ನು ನಿರ್ಬಂಧಿಸುವ ಸಂಪೂರ್ಣ ಆದೇಶವನ್ನು ತಾನು ನೀಡುತ್ತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇದು, ಪತ್ರಕರ್ತರು, ಹೋರಾಟಗಾರರು ಮತ್ತು ಸಂಸ್ಥೆಗಳು ಕಂಪನಿಯ ಖ್ಯಾತಿಗೆ ಹಾನಿ ಮಾಡಿದ್ದಾರೆ ಮತ್ತು ಅದರ ಪಾಲುದಾರರಿಗೆ ಶತಕೋಟಿ ಡಾಲರ್‌ಗಳಷ್ಟು ನಷ್ಟವನ್ನುಂಟುಮಾಡಿದ್ದಾರೆ ಎಂದು ಆರೋಪಿಸಿ ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣ ಎಂದು ಬಾರ್ ಮತ್ತು ಬೆಂಚ್ ವರದಿ ಹೇಳಿದೆ.

ಅದಾನಿ ಎಂಟರ್‌ಪ್ರೈಸಸ್, ಅದಾನಿ ಗ್ರೂಪ್‌ನ ಪ್ರಮುಖ ಕಂಪನಿಯಾಗಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಪತ್ರಕರ್ತರು ಮತ್ತು ಹೋರಾಟಗಾರರು ‘ಭಾರತ ವಿರೋಧಿ ಹಿತಾಸಕ್ತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ’ ಮತ್ತು ‘ಗುಪ್ತ ಉದ್ದೇಶಗಳೊಂದಿಗೆ’ ಕಂಪನಿಯ ಮೂಲಸೌಕರ್ಯ ಮತ್ತು ಇಂಧನ ಯೋಜನೆಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ಅದಾನಿ ಎಂಟರ್‌ಪ್ರೈಸಸ್‌ನ ವಕೀಲರು ವಾದಿಸಿದ್ದಾರೆ.

“ಭಾರತಕ್ಕೆ ಪ್ರಮುಖ ಸಂಪನ್ಮೂಲಗಳನ್ನು ಪಡೆಯುವ ಗುರಿಯನ್ನು ಹೊಂದಿರುವ’ ಆಸ್ಟ್ರೇಲಿಯಾದಲ್ಲಿನ ತನ್ನ ಕಾರ್ಯಾಚರಣೆಗಳು ‘ಪ್ರಯಾಸಕರ ಮತ್ತು ವಿಳಂಬಗೊಂಡಿವೆ ಮತ್ತು ಪದೇ ಪದೇ ಅಡಚಣೆಯಾಗಿವೆ. ಪ್ರತಿವಾದಿ ವರದಿಗಾರರು, ಹೋರಾಟಗಾರರು ಮತ್ತು ಸಂಸ್ಥೆಗಳ ಹಸ್ತಕ್ಷೇಪದಿಂದಾಗಿ ಅಭಿವೃದ್ಧಿಯನ್ನು ಹಿಂದಕ್ಕೆ ತಳ್ಳಲಾಗಿದೆ” ಎಂದು ಅದಾನಿ ಎಂಟರ್‌ಪ್ರೈಸಸ್ ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...