Homeಅಂತರಾಷ್ಟ್ರೀಯನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಯುವಜನರ ಪ್ರತಿಭಟನೆ: ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ

- Advertisement -
- Advertisement -

ನೇಪಾಳದಲ್ಲಿ ವಿದ್ಯಾರ್ಥಿಗಳು, ಯುವಜನರ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆ ಮಂಗಳವಾರ ಎರಡನೇ ದಿನವೂ ಮುಂದುವರೆದಿದ್ದು, ಪ್ರತಿಭಟನಾಕಾರರು ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ನೂರಾರು ಪ್ರತಿಭಟನಾಕಾರರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಓಲಿ ಅವರ ಕಚೇರಿಗೆ ಪ್ರವೇಶಿಸಿದ ಸ್ವಲ್ಪ ಸಮಯದ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು, ಸೋಮವಾರ ನಡೆದ ಸಾವುನೋವುಗಳ ಹೊಣೆ ಹೊತ್ತುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಬಾಲ್ಕೋಟ್‌ನಲ್ಲಿರುವ ಪ್ರಧಾನಿಯ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೇಪಾಳದ ನಾಲ್ಕನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಇಪ್ಪತ್ತೊಂದು ಸಂಸದರು ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

‘ಜೆನ್‌ ಝೀ’ ಬ್ಯಾನರ್ ಅಡಿಯಲ್ಲಿ, ರಾಜಧಾನಿ ಕಠ್ಮಂಡುವಿನ ಹಲವು ಭಾಗಗಳಲ್ಲಿ “ಕೆಪಿ ಚೋರ್, ದೇಶ್ ಛೋಡ್” (ಕೆಪಿ ಕಳ್ಳ, ದೇಶ ಬಿಟ್ಟು ತೊಲಗಿ) ಮತ್ತು ‘”ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ” ಮುಂತಾದ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದ್ದಾರೆ.

ಭಕ್ತಪುರದ ಬಾಲ್ಕೋಟ್‌ನಲ್ಲಿರುವ ಪ್ರಧಾನಿ ಓಲಿ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಓಲಿ ಪ್ರಸ್ತುತ ಬಲ್ವತಾರ್‌ನಲ್ಲಿರುವ ಪ್ರಧಾನಿ ನಿವಾಸದಲ್ಲಿದ್ದಾರೆ ಎಂದು ವರದಿ ಹೇಳಿದೆ.

ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ಸರ್ಕಾರದ ನಿಷೇಧವನ್ನು ಪ್ರತಿಭಟಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದ ಪರಿಣಾಮ ಸೋಮವಾರ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರದಂದು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರತಿಭಟನಾಕಾರರು ಅವರ ನಿವಾಸಕ್ಕೂ ಮಂಗಳವಾರ ಬೆಂಕಿ ಹಚ್ಚಿದ್ದಾರೆ. ಗೃಹ ಸಚಿವರ ನಿರ್ಗಮನ ಸಾಕಾಗುವುದಿಲ್ಲ ಎಂದು ಹೇಳಿದ ಪ್ರತಿಭಟನಾಕಾರರು ಪ್ರಧಾನಿ ಓಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು.

ಪ್ರಮುಖ ಆನ್‌ಲೈನ್ ಸುದ್ದಿ ಪೋರ್ಟಲ್‌ಗಳು ಸೋಮವಾರ ಕಠ್ಮಂಡುವಿನಲ್ಲಿ ನಡೆದ ಪೊಲೀಸ್ ದಮನ ಕಾರ್ಯಾಚರಣೆಯನ್ನು ತೀವ್ರವಾಗಿ ಟೀಕಿಸಿದ್ದು, ನೇಪಾಳದ ಇತ್ತೀಚಿನ ಇತಿಹಾಸದಲ್ಲಿ ಇದು ಅತ್ಯಂತ ಕರಾಳ ದಿನಗಳಲ್ಲಿ ಒಂದು ಎಂದು ಬಣ್ಣಿಸಿವೆ.

ಜನಪ್ರಿಯ ಸುದ್ದಿ ಪೋರ್ಟಲ್ Ukeraa.com ಸೆಪ್ಟೆಂಬರ್ 8ಅನ್ನು ‘ಕರಾಳ ದಿನ’ ಎಂದು ಬಣ್ಣಿಸಿತ್ತು. ನೇಪಾಳದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದಿದ್ದ ಮಾಧ್ಯಮ ಸಂಸ್ಥೆ, ಪ್ರಧಾನಿ ಓಲಿ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಮತ್ತೊಂದು ಸುದ್ದಿ ಪೋರ್ಟಲ್, ರಾಟೋಪತಿ, ಸರ್ಕಾರವು ಪ್ರತಿಭಟನಾ ನಿರತ ಯುವಜನರು ಮತ್ತು ವಿದ್ಯಾರ್ಥಿಗಳ ಮೇಲೆ ವಿವೇಚನೆಯಿಲ್ಲದೆ ಗುಂಡು ಹಾರಿಸಿದೆ ಎಂದು ಆರೋಪಿಸಿದೆ. ಇದು ‘ಹೇಡಿತನ’ ಮತ್ತು ‘ಅತ್ಯಂತ ಶೋಚನೀಯ’ ಕ್ರಮ ಎಂದು ಬಣ್ಣಿಸಿದೆ.

ಯುವ ನೇಪಾಳಿಗಳು ನಡೆಸಿದ ಆಂದೋಲನವು ರಾಜಕೀಯ ಪ್ರೇರಿತವಲ್ಲ, ಬದಲಾಗಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರುದ್ಯೋಗ ಮತ್ತು ಬೆಳೆಯುತ್ತಿರುವ ಸಾಮಾಜಿಕ ಅವ್ಯವಸ್ಥೆ ಹತಾಶೆಯಿಂದ ಹೊರ ಹೊಮ್ಮಿದ ಆಕ್ರೋಶ ಎಂದು ಪೋರ್ಟಲ್ ಹೇಳಿದೆ.

ಮಂಗಳವಾರ ಕಠ್ಮಂಡು ಮತ್ತು ದೇಶದ ಇತರ ಭಾಗಗಳಲ್ಲಿ ಕರ್ಫ್ಯೂ ಆದೇಶಗಳ ಹೊರತಾಗಿಯೂ ಪ್ರತಿಭಟನೆಗಳು ಉಲ್ಬಣಗೊಂಡಿದ್ದವು. ಕಠ್ಮಂಡುವಿನ ಕಲಾಂಕಿ, ಕಾಲಿಮತಿ, ತಹಚಲ್ ಮತ್ತು ಬನೇಶ್ವರ್ ಹಾಗೂ ಲಲಿತಪುರ ಜಿಲ್ಲೆಯ ಚ್ಯಾಸಲ್, ಚಾಪಗೌ ಮತ್ತು ಥೆಚೊ ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ವರದಿಯಾಗಿವೆ.

ಪ್ರತಿಭಟನಾಕಾರರು (ಹೆಚ್ಚಾಗಿ ವಿದ್ಯಾರ್ಥಿಗಳು) ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಧಿಕ್ಕರಿಸಿ “ವಿದ್ಯಾರ್ಥಿಗಳನ್ನು ಕೊಲ್ಲಬೇಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕಲಾಂಕಿಯಲ್ಲಿ ಬೆಳಗಿನ ಜಾವದಿಂದಲೇ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು, ಟೈರ್‌ಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಲಲಿತಪುರ ಜಿಲ್ಲೆಯ ಸುನಕೋಠಿಯಲ್ಲಿರುವ ಸಂವಹನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗುರುಂಗ್ ಅವರು ಸಾಮಾಜಿಕ ಮಾಧ್ಯಮ ತಾಣಗಳ ಮೇಲೆ ನಿಷೇಧ ಹೇರಲು ಆದೇಶಿಸಿದ್ದರು.

ಪ್ರತಿಭಟನಾಕಾರರು ಲಲಿತ್‌ಪುರದ ಖುಮಾಲ್ತಾರ್‌ನಲ್ಲಿರುವ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಅವರ ನಿವಾಸವನ್ನು ಧ್ವಂಸಗೊಳಿಸಿದ್ದಾರೆ. ಕಠ್ಮಂಡುವಿನ ಬುಧನೀಲಕಂಠದಲ್ಲಿರುವ ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪಿಸಿದ್ದ ‘ಜೆನ್‌ ಝೀ’ ಗುಂಪು, ಮಂತ್ರಿಗಳು ಮತ್ತು ಇತರ ಪ್ರಭಾವಿ ವ್ಯಕ್ತಿಗಳ ಮಕ್ಕಳ ಐಶಾರಾಮಿ ಜೀವನಶೈಲಿ, ದುಂದುವೆಚ್ಚವನ್ನು ಬಹಿರಂಗಪಡಿಸಲು ರೆಡ್ಡಿಟ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಿಕೊಂಡಿದ್ದರು.

ಭ್ರಷ್ಟಾಚಾರದಿಂದ ಬಂದ ಸಂಪತ್ತಿಗೆ ಹಣಕಾಸು ಒದಗಿಸುವ ಮೂಲಗಳನ್ನು ಪ್ರಶ್ನಿಸಿ ಅವರು ವಿಡಿಯೋಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದರು. ಇದು ರಾಜಕೀಯ ನಾಯಕರಿಗೆ ಮುಜುಗರ ತರಿಸಿತ್ತು. ಈ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗ್ತಿದೆ.

ಸರ್ಕಾರ ಫೇಸ್‌ಬುಕ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮ ತಾಣಗಳು ಕಾನೂನು ಪ್ರಕಾರ ನೋಂದಾಯಿಸಲು ವಿಫಲವಾಗಿವೆ ಎಂಬ  ಕಾರಣ ನೀಡಿ ನಿಷೇಧಿಸಲು ಆದೇಶಿಸಿತ್ತು. ಆದರೆ, ಯುವಜನರ ಆಕ್ರೋಶ ಎದುರಿಸಲಾಗದೆ ಸೋಮವಾರ ತಡರಾತ್ರಿ ಆದೇಶವನ್ನು ವಾಪಸ್ ಪಡೆದಿದೆ. ಆದರೂ, ಪ್ರತಿಭಟನೆ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.

ರಾಷ್ಟ್ರೀಯ ಲಾಂಛನ ವಿರೂಪ ಪ್ರಕರಣ: ಹಜರತ್ಬಲ್‌ನಲ್ಲಿ 30ಕ್ಕೂ ಹೆಚ್ಚು ಬಂಧನ; “ಕಾಶ್ಮೀರಿಗಳ ಹತ್ಯಾಕಾಂಡ” ಎಂದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....