Homeಅಂತರಾಷ್ಟ್ರೀಯನೇಪಾಳ: ಮಂಗಳವಾರವೂ ಸಂಸತ್ತಿಗೆ ನುಗ್ಗಿದ ಪ್ರತಿಭಟನಾಕಾರರು; ಹಲವು ಉನ್ನತ ರಾಜಕೀಯ ನಾಯಕರ ಮನೆಗಳು ಬೆಂಕಿಗಾಹುತಿ

ನೇಪಾಳ: ಮಂಗಳವಾರವೂ ಸಂಸತ್ತಿಗೆ ನುಗ್ಗಿದ ಪ್ರತಿಭಟನಾಕಾರರು; ಹಲವು ಉನ್ನತ ರಾಜಕೀಯ ನಾಯಕರ ಮನೆಗಳು ಬೆಂಕಿಗಾಹುತಿ

- Advertisement -
- Advertisement -

ನೇಪಾಳದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಸತತ ಎರಡನೇ ದಿನವಾದ ಮಂಗಳವಾರವೂ ಸಂಸತ್ತಿನ ಗೋಡೆಗಳನ್ನು ಭೇದಿಸಿ ಫೆಡರಲ್ ಸಂಸತ್ತಿನ ಕಟ್ಟಡಕ್ಕೆ ನುಗ್ಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಮಧ್ಯೆ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನೇಪಾಳದ ಪ್ರಧಾನ ಮಂತ್ರಿ ಕೆ.ಪಿ.ಓಲಿ ಮಂಗಳವಾರ (ಸೆಪ್ಟೆಂಬರ್ 9) ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಚಿವಾಲಯ ಘೋಷಿಸಿದೆ.

“ದೇಶದಲ್ಲಿ ನೆಲೆಸಿರುವ ಅಸಾಮಾನ್ಯ ಪರಿಸ್ಥಿತಿಯನ್ನು ಪರಿಗಣಿಸಿ ಮತ್ತು ಸಂವಿಧಾನಾತ್ಮಕ ರಾಜಕೀಯ ಪರಿಹಾರ ಹಾಗೂ ಸಮಸ್ಯೆ ನಿವಾರಣೆಯತ್ತ ಹೆಚ್ಚಿನ ಪ್ರಯತ್ನಗಳಿಗೆ ಅನುಕೂಲವಾಗುವಂತೆ, ನಾನು ಸಂವಿಧಾನದ ಆರ್ಟಿಕಲ್ 77(1)a ಅಡಿಯಲ್ಲಿ ಪ್ರಧಾನಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತೇನೆ” ಎಂದು ಓಲಿ ನೇಪಾಳದ ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ‘ದಿ ಹಿಮಾಲಯನ್ ವರದಿ’ ಮಾಡಿದೆ.

ಮಂಗಳವಾರ (ಸೆಪ್ಟೆಂಬರ್ 9) ನೇಪಾಳದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಪ್ರತಿಭಟನಾಕಾರರು ಸೋಮವಾರ ಮಧ್ಯಾಹ್ನ ಜಾರಿಗೆ ಬಂದಿದ್ದ ಕರ್ಫ್ಯೂ ಅನ್ನು ಧಿಕ್ಕರಿಸಿ, ದೇಶದ ಉನ್ನತ ರಾಜಕೀಯ ನಾಯಕತ್ವದ ಮನೆಗಳು ಮತ್ತು ಕಚೇರಿಗಳಿಗೆ ಬೆಂಕಿ ಹಚ್ಚಿದರು. ಇದರಲ್ಲಿ ಭಕ್ತಪುರದ ಬಾಲಕೋಟ್‌ನಲ್ಲಿರುವ ಓಲಿಯವರ ಖಾಸಗಿ ನಿವಾಸವೂ ಸೇರಿತ್ತು.

ಬೆಂಕಿಗೆ ಆಹುತಿಯಾದ ಇತರ ಮನೆಗಳಲ್ಲಿ ರಾಷ್ಟ್ರಪತಿ ಪೌಡೆಲ್, ಮಾಜಿ ಗೃಹ ಸಚಿವ ರಮೇಶ್ ಲೇಖಕ್, ನೇಪಾಳಿ ಕಾಂಗ್ರೆಸ್ ನಾಯಕ ಶೇರ್ ಬಹದ್ದೂರ್ ದೇವುಬಾ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ್ ಮಾವೋವಾದಿ ನಾಯಕ ಪುಷ್ಪ ಕಮಲ್ ದಹಲ್ ಅವರ ಮನೆಗಳು ಸೇರಿವೆ. ನೇಪಾಳಿ ವಿದೇಶಾಂಗ ಸಚಿವ ಅರ್ಜು ದೇವುಬಾ ರಾಣಾ ಅವರಿಗೆ ಸೇರಿದ ಶಾಲೆಯೊಂದಕ್ಕೂ ಬೆಂಕಿ ಹಚ್ಚಲಾಗಿದೆ ಎಂದು ಎಪಿ ವರದಿ ಮಾಡಿದೆ.

ಕಠ್ಮಂಡು ಪೋಸ್ಟ್ ಪತ್ರಿಕೆಯು ವರದಿ ಮಾಡಿರುವ ಪ್ರಕಾರ, ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳ ವರದಿಗಳ ಹಿನ್ನೆಲೆಯಲ್ಲಿ ನೇಪಾಳ ಸೇನೆಯು ಹೆಲಿಕಾಪ್ಟರ್‌ಗಳನ್ನು ಬಳಸಿ ಮಂತ್ರಿಗಳನ್ನು ಅವರ ನಿವಾಸಗಳಿಂದ ಸ್ಥಳಾಂತರಿಸಲು ಪ್ರಾರಂಭಿಸಿದೆ.

ಪ್ರತಿಭಟನೆಗಳು ಎರಡನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಓಲಿ ಮಂಗಳವಾರ ಸಂಜೆ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದರು. “ಸೋಮವಾರ ರಾಜಧಾನಿ ಮತ್ತು ದೇಶಾದ್ಯಂತ ನಡೆದ ಪ್ರತಿಭಟನೆಗಳು ಮತ್ತು ನಂತರದ ಘಟನೆಗಳಿಂದ ನನಗೆ ನೋವಾಗಿದೆ” ಎಂದು ಅವರು ಹೇಳಿದ್ದರು. “ಯಾವುದೇ ರೀತಿಯ ಹಿಂಸಾಚಾರವು ದೇಶದ ಹಿತಾಸಕ್ತಿಗೆ ಮಾರಕವಾಗಿದೆ ಮತ್ತು ನಾವು ಶಾಂತಿಯುತ ಹಾಗೂ ಸಂವಾದ ಆಧಾರಿತ ಪರಿಹಾರವನ್ನು ಕಂಡುಕೊಳ್ಳಬೇಕು” ಎಂದು ಅವರು ಹೇಳಿದ್ದರು.

ಪ್ರಧಾನ ಮಂತ್ರಿಯು ಬಿಕ್ಕಟ್ಟನ್ನು ಕೊನೆಗೊಳಿಸಲು ಸಂಬಂಧಿಸಿದ ಎಲ್ಲ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದರು.

ಪ್ರಮುಖ ಅಧಿಕಾರಿಗಳಿಂದ ಸಂಯಮ ವಹಿಸುವಂತೆ ಕರೆ

ನೇಪಾಳ ಸೇನೆಯ ಮುಖ್ಯಸ್ಥ ಅಶೋಕ್ ರಾಜ್ ಸಿಗ್ಡೆಲ್ ಸೇರಿದಂತೆ ಹಲವಾರು ಪ್ರಮುಖ ನೇಪಾಳಿ ಅಧಿಕಾರಿಗಳು ಜಂಟಿ ಮನವಿ ಬಿಡುಗಡೆ ಮಾಡಿ, ಯುವ ಪ್ರತಿಭಟನಾಕಾರರಿಗೆ ಸಂಯಮ ವಹಿಸುವಂತೆ ಕರೆ ನೀಡಿದರು.

“ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ಅವರ ರಾಜೀನಾಮೆಯನ್ನು ಈಗ ಅಂಗೀಕರಿಸಲಾಗಿದೆ. ಎಲ್ಲ ನಾಗರಿಕರು ಶಾಂತಿಯಿಂದ ಇರುವಂತೆ ಮತ್ತು ಜೀವ ಹಾಗೂ ಆಸ್ತಿಗೆ ಮತ್ತಷ್ಟು ಹಾನಿಯಾಗುವುದನ್ನು ತಪ್ಪಿಸುವಂತೆ ನಾವು ಮನಃಪೂರ್ವಕವಾಗಿ ಒತ್ತಾಯಿಸುತ್ತೇವೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

“ರಾಜಕೀಯ ಸಂವಾದದ ಮೂಲಕ ತ್ವರಿತ ಮತ್ತು ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳಲು ಎಲ್ಲ ಸಂಬಂಧಿತ ಪಕ್ಷಗಳನ್ನು ನಾವು ಕರೆಯುತ್ತೇವೆ” ಎಂದಿದ್ದಾರೆ.

ಕಠ್ಮಂಡು ಮೆಟ್ರೋಪಾಲಿಟನ್ ಸಿಟಿ ಮೇಯರ್ ಬಾಲೆಂದ್ರ ಶಾ ಅವರು, ಪ್ರಧಾನಿ ರಾಜೀನಾಮೆ ನೀಡಬೇಕೆಂಬ ಹೋರಾಟಗಾರರ ಬೇಡಿಕೆ ಈಡೇರಿದ್ದರಿಂದ ಪ್ರತಿಭಟನಾಕಾರರಿಗೆ ಸಂಯಮ ವಹಿಸುವಂತೆ ಒತ್ತಾಯಿಸಿದರು.

“ಪ್ರಿಯ ಜೆನ್ ಝೆಡ್, ಸರ್ಕಾರದ ರಾಜೀನಾಮೆಗಾಗಿ ನಿಮ್ಮ ಬೇಡಿಕೆ ಈಡೇರಿದೆ. ಈಗ ಸಂಯಮದಿಂದ ಇರಬೇಕಾದ ಸಮಯ” ಎಂದು ಅವರು ಬರೆದಿದ್ದಾರೆ. ಬಾಲೆಂದ್ರ ಶಾ ಅವರು ಪ್ರಸ್ತುತ ಯುವ ನೇಪಾಳಿಗಳಲ್ಲಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಪರಿಗಣಿಸಲ್ಪಟ್ಟಿದ್ದಾರೆ.

ನೇಪಾಳದಲ್ಲಿ ನಡೆದ ಬೃಹತ್ ಪ್ರತಿಭಟನೆಗಳಿಗೆ, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವು ಕಾರಣವಾಗಿದೆ. ಇದರ ಜೊತೆಗೆ, ವ್ಯಾಪಕ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಓಲಿ ಸರ್ಕಾರದ ವಿರುದ್ಧದ ಅಸಮಾಧಾನವೂ ಇದಕ್ಕೆ ಕಾರಣವಾಗಿತ್ತು.

ಸ್ವಯಂಪ್ರೇರಿತವಾಗಿ ನಡೆದ ಈ ಪ್ರತಿಭಟನೆಗಳು, ಸರ್ಕಾರದ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನ, ರಾಜಕೀಯ ವೈಫಲ್ಯ ಮತ್ತು ಭ್ರಷ್ಟಾಚಾರದ ಆರೋಪಗಳ ಪರಿಣಾಮ ಎಂದು ಪರಿಗಣಿಸಲಾಗಿದೆ.

ಮಂತ್ರಿಗಳು ರಾಜೀನಾಮೆ, ಕರ್ಫ್ಯೂ ಜಾರಿ

ಸೋಮವಾರ ಪ್ರತಿಭಟನೆಗಳು ಆರಂಭವಾದಾಗಿನಿಂದ ಮೂರು ಮಂತ್ರಿಗಳು ರಾಜೀನಾಮೆ ನೀಡಿದ್ದಾರೆ.

ನೇಪಾಳದ ಗೃಹ ಸಚಿವ ರಮೇಶ್ ಲೇಖಕ್ ಸೋಮವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಓಲಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ನಂತರ ಕೃಷಿ ಸಚಿವ ರಾಮನಾಥ್ ಅಧಿಕಾರ ಮತ್ತು ಜಲಸಂಪನ್ಮೂಲ ಸಚಿವ ಪ್ರದೀಪ್ ಯಾದವ್ ಕೂಡ ರಾಜೀನಾಮೆ ನೀಡಿದರು.

ಮಂಗಳವಾರ ಕಠ್ಮಂಡು, ಲಲಿತ್ಪುರ್ ಮತ್ತು ಭಕ್ತಪುರ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ, ಸಾರ್ವಜನಿಕರನ್ನು ಬೀದಿಗಿಳಿಯದಂತೆ ತಡೆಯಲು ಇದು ಹೆಚ್ಚು ಯಶಸ್ವಿಯಾಗಲಿಲ್ಲ.

ಕಳೆದ ವಾರ, ನೇಪಾಳ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಅನ್ವಯ, 2023ರ ನಿರ್ದೇಶನಗಳ ಪ್ರಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದೊಂದಿಗೆ ನೋಂದಾಯಿಸಿಕೊಳ್ಳದ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಪ್ರವೇಶವನ್ನು ನಿರ್ಬಂಧಿಸಲು ನಿರ್ಧರಿಸಿತು.

ಆ ಸಮಯದಲ್ಲಿ, ಮೆಟಾ, ಆಲ್ಫಬೆಟ್, ಎಕ್ಸ್, ರೆಡ್ಡಿಟ್ ಮತ್ತು ಲಿಂಕ್ಡ್‌ಇನ್ ಸೇರಿದಂತೆ ಯಾವುದೇ ದೊಡ್ಡ ಜಾಗತಿಕ ಕಂಪನಿಗಳು ಸಚಿವಾಲಯದಲ್ಲಿ ನೋಂದಣಿಗೆ ಅರ್ಜಿ ಸಲ್ಲಿಸಿರಲಿಲ್ಲ. ಮತ್ತೊಂದೆಡೆ, ಟಿಕ್‌ಟಾಕ್, ಟೆಲಿಗ್ರಾಮ್ ಮತ್ತು ವೈಬರ್ ಸೇರಿದಂತೆ ಕೆಲವು ವೇದಿಕೆಗಳು ನೋಂದಣಿಯಾಗಿದ್ದವು ಅಥವಾ ನೋಂದಣಿಗೆ ಅರ್ಜಿ ಸಲ್ಲಿಸಿದ್ದವು.

ಸಾಮಾಜಿಕ ಮಾಧ್ಯಮ ನಿಷೇಧವನ್ನು ಹಿಂತೆಗೆದುಕೊಂಡರೂ, ಮಂಗಳವಾರ ಕಠ್ಮಂಡು ಕಣಿವೆಯ ನ್ಯೂ ಬಾನೇಶ್ವರ್, ಕಲಂಕಿ ಮತ್ತು ಚಾಪಗೌನ್ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಮುಂದುವರಿದವು. ಪ್ರತಿಭಟನಾಕಾರರು ಭ್ರಷ್ಟಾಚಾರದ ವಿರುದ್ಧ ಘೋಷಣೆ ಕೂಗಿದರು ಮತ್ತು ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಫೆಡರಲ್ ಸಂಸತ್ ಕಟ್ಟಡದ ಬಳಿ ಪೊಲೀಸರು ಹಲವಾರು ಜನರನ್ನು ಬಂಧಿಸಿದರು.

ಭಾರತ, ಯುಕೆ, ಯುಎಸ್ ಮತ್ತು ಇತರ ದೇಶಗಳಿಂದ ಸಂಯಮಕ್ಕೆ ಕರೆ

ಮಂಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಭಾರತವು, ನೇಪಾಳದ ಪ್ರತಿಭಟನೆಗಳಲ್ಲಿ “ಹಲವು ಯುವ ಜೀವನಗಳ ನಷ್ಟದಿಂದ ತೀವ್ರವಾಗಿ ದುಃಖಿತವಾಗಿದೆ” ಎಂದು ತಿಳಿಸಿದೆ ಮತ್ತು ಈ ಬಿಕ್ಕಟ್ಟನ್ನು “ಶಾಂತಿಯುತ ವಿಧಾನ ಮತ್ತು ಸಂವಾದದ” ಮೂಲಕ ಬಗೆಹರಿಸುವಂತೆ ಒತ್ತಾಯಿಸಿದೆ.

ಭಾರತವು ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಶೀಘ್ರ ಗುಣಮುಖರಾಗಲೆಂದು ಹಾರೈಸಿದೆ. “ನಿಕಟ ಸ್ನೇಹಿತ ಮತ್ತು ನೆರೆಯ ದೇಶವಾಗಿ, ಎಲ್ಲರೂ ಸಂಯಮ ವಹಿಸಿ ಮತ್ತು ಶಾಂತಿಯುತ ವಿಧಾನ ಮತ್ತು ಸಂವಾದದ ಮೂಲಕ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ನಾವು ಆಶಿಸುತ್ತೇವೆ” ಎಂದು ಹೇಳಿಕೆ ತಿಳಿಸಿದೆ.

ಆಸ್ಟ್ರೇಲಿಯಾ, ಫಿನ್‌ಲ್ಯಾಂಡ್, ಫ್ರಾನ್ಸ್, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ನೇಪಾಳದ ರಾಯಭಾರ ಕಚೇರಿಗಳು ಸೋಮವಾರ ಸಂಜೆ ಜಂಟಿ ಹೇಳಿಕೆ ನೀಡಿದವು.

“ಕಠ್ಮಂಡು ಮತ್ತು ನೇಪಾಳದ ಇತರ ಭಾಗಗಳಲ್ಲಿ ಇಂದು ನಡೆದ ಹಿಂಸಾಚಾರದಿಂದ, ವಿಶೇಷವಾಗಿ ಪ್ರದರ್ಶನಗಳ ಸಮಯದಲ್ಲಿ ಸಂಭವಿಸಿದ ಜೀವಹಾನಿ ಮತ್ತು ಗಾಯಗಳಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ. ಮೃತರ ಕುಟುಂಬಗಳಿಗೆ ಮತ್ತು ಇದರಿಂದ ಬಾಧಿತರಾದ ಎಲ್ಲರಿಗೂ ನಾವು ನಮ್ಮ ಪ್ರಾಮಾಣಿಕ ಸಂತಾಪಗಳನ್ನು ತಿಳಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಪೂರ್ಣ ಗುಣಮುಖರಾಗಲೆಂದು ಹಾರೈಸುತ್ತೇವೆ. ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾರ್ವತ್ರಿಕ ಹಕ್ಕುಗಳಿಗೆ ನಮ್ಮ ಸರ್ಕಾರಗಳು ಬಲವಾದ ಬೆಂಬಲವನ್ನು ಪುನರುಚ್ಚರಿಸುತ್ತವೆ. ಎಲ್ಲ ಪಕ್ಷಗಳು ಗರಿಷ್ಠ ಸಂಯಮ ವಹಿಸಬೇಕು, ಮತ್ತಷ್ಟು ಉದ್ವಿಗ್ನತೆಯನ್ನು ತಪ್ಪಿಸಬೇಕು ಮತ್ತು ಈ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಮತ್ತು ನೇಪಾಳದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೇರಿದಂತೆ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಹಕ್ಕುಗಳ ಸಂಸ್ಥೆಗಳು ಈ ಹತ್ಯೆಗಳನ್ನು ಖಂಡಿಸಿವೆ ಮತ್ತು ತಕ್ಷಣದ ತನಿಖೆಗೆ ಕರೆ ನೀಡಿವೆ. ಜೊತೆಗೆ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿವೆ.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಂಗಳವಾರ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದ್ದು, ಪರಿಸ್ಥಿತಿ ಸ್ಥಿರವಾಗುವವರೆಗೆ ನೇಪಾಳಕ್ಕೆ ಪ್ರಯಾಣಿಸುವುದನ್ನು ಮುಂದೂಡುವಂತೆ ಮತ್ತು ದೇಶದಲ್ಲಿರುವವರು ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದೆ.

“ನೇಪಾಳದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ನಾಗರಿಕರು ಪರಿಸ್ಥಿತಿ ಸ್ಥಿರವಾಗುವವರೆಗೆ ಅಲ್ಲಿಗೆ ಪ್ರಯಾಣಿಸುವುದನ್ನು ಮುಂದೂಡುವಂತೆ ಸೂಚಿಸಲಾಗಿದೆ. ಪ್ರಸ್ತುತ ನೇಪಾಳದಲ್ಲಿರುವ ಭಾರತೀಯ ನಾಗರಿಕರು ತಮ್ಮ ಪ್ರಸ್ತುತ ವಾಸಸ್ಥಳಗಳಲ್ಲಿ ಆಶ್ರಯ ಪಡೆಯಲು, ಬೀದಿಗಳಿಗೆ ಹೋಗುವುದನ್ನು ತಪ್ಪಿಸಲು ಮತ್ತು ಎಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ನೇಪಾಳ ಅಧಿಕಾರಿಗಳಿಂದ ಮತ್ತು ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಸ್ಥಳೀಯ ಸುರಕ್ಷತಾ ಸಲಹೆಗಳನ್ನು ಅನುಸರಿಸುವಂತೆ ಸಹ ಅವರಿಗೆ ಸೂಚಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೇಪಾಳ ಪ್ರಧಾನಿ ಕೆ.ಪಿ.ಒಲಿ ರಾಜೀನಾಮೆ: ಕಾರಣವೇನು?

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...