Homeಮುಖಪುಟದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ...

ದನದ ಕರು ಸಾವಿಗೆ ಕಾರಣ ಆರೋಪದಡಿ ಮುಸ್ಲಿಂ ಡ್ರೈವರ್ ಬಂಧನ; ಬಜರಂಗ ದಳ ಒತ್ತಡಕ್ಕೆ ಮಣಿದ ರತ್ಲಂ ಆಡಳಿತ

- Advertisement -
- Advertisement -

ರತ್ಲಂ: ದನದ ಕರುವಿನ ಸಾವಿಗೆ ಕಾರಣರಾದ ಆರೋಪದ ಮೇಲೆ ಮಧ್ಯಪ್ರದೇಶದ ರತ್ಲಂ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಡ್ರೈವರ್ ಅನ್ನು ಕೆಲಸದಿಂದ ವಜಾ ಮಾಡಿ, ಜೈಲಿಗೆ ಕಳುಹಿಸಿದ ನಂತರ ಮಧ್ಯಪ್ರದೇಶದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಬಲಪಂಥೀಯ ಸಂಘಟನೆಯಾದ ಬಜರಂಗ ದಳದ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಲಾಗಿದೆ. ಕ್ರಮವನ್ನು ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಹಿಂದೂ ನೌಕರರು ಸೇರಿದಂತೆ ಮುನ್ಸಿಪಲ್ ನೈರ್ಮಲ್ಯ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ, ಮುನ್ಸಿಪಲ್ ಡ್ರೈವರ್ ಸಾದಿಕ್ ಖುರೇಷಿ ಮತ್ತು ಅವರ ಸಹಾಯಕರ ಮೇಲೆ ಕಸದ ಟ್ರಕ್ನಿಂದ ಕರು ಬಿದ್ದಿದೆ ಎಂದು ಆರೋಪಿಸಲಾಗಿತ್ತು. ಇದರಿಂದಲೇ ಅದು ಸಾವನ್ನಪ್ಪಿದೆ ಎಂದು ಹೇಳಿಕೊಂಡು ಬಜರಂಗ ದಳದ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಡ್ರೈವರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪು ಸಾದಿಕ್‌ ಮೇಲೆ ಹಲ್ಲೆ ನಡೆಸುತ್ತಿರುವ ಮತ್ತು ಪೊಲೀಸರು ಸುಮ್ಮನೆ ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಆನ್ಲೈನ್ನಲ್ಲಿ ಹರಿದಾಡುತ್ತಿದೆ.

ಬಜರಂಗ ದಳದ ಪ್ರತಿಭಟನೆಯ ನಂತರ, ಕಾರ್ಪೊರೇಷನ್ ಅಧಿಕಾರಿಗಳು ಸಾದಿಕ್ ಮತ್ತು ಅವರ ಸಹಾಯಕರನ್ನು ಅಮಾನತುಗೊಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಯಾವುದೇ ಔಪಚಾರಿಕ ತನಿಖೆ ಇಲ್ಲದೆ ಇಬ್ಬರನ್ನೂ ಜೈಲಿಗೆ ಕಳುಹಿಸಲಾಯಿತು.

ಮುಸ್ಲಿಂ ಸಮುದಾಯದ ಮುಖಂಡರು ಘಟನೆಯನ್ನು ಪಕ್ಷಪಾತ ಮತ್ತು ಅಧಿಕಾರದ ದುರುಪಯೋಗ ಎಂದು ಬಲವಾಗಿ ಆಕ್ಷೇಪಿಸಿದ್ದಾರೆ. ಸ್ಥಳೀಯ ಮುಖಂಡ ಇಮ್ರಾನ್ ಖೋಖರ್, “ಬಜರಂಗ ದಳದವರು ಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಸಾದಿಕ್ ಖುರೇಷಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೂ, ಯಾರನ್ನೂ ಬಂಧಿಸಿಲ್ಲ. ಬದಲಾಗಿ, ಚಾಲಕನಿಗೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಅವಕಾಶವನ್ನೂ ನೀಡದೆ ಜೈಲಿಗೆ ಕಳುಹಿಸಲಾಗಿದೆ. ಆತ ನಿರಪರಾಧಿಎಂದು ಹೇಳಿದ್ದಾರೆ.

ದಾಳಿಕೋರರ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖೋಖರ್ ಹೇಳಿದ್ದಾರೆ.

ಪ್ರಕರಣವು ಅನೇಕ ಹಿಂದೂಗಳನ್ನೂ ಒಳಗೊಂಡಂತೆ, ಮುನ್ಸಿಪಲ್ ನೈರ್ಮಲ್ಯ ಕೆಲಸಗಾರರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ, ನೌಕರರು ಸ್ವಚ್ಛತಾ ಕಾರ್ಯವನ್ನು ನಿಲ್ಲಿಸಿ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ನಡೆಸುತ್ತಿದ್ದಾರೆ.

ಒಬ್ಬ ನೈರ್ಮಲ್ಯ ಕಾರ್ಮಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ವಿಚಾರಣೆಗೂ ಮೊದಲು ಆಡಳಿತ ನಮ್ಮ ಸಹೋದ್ಯೋಗಿಗೆ ಹೇಗೆ ಶಿಕ್ಷೆ ನೀಡಬಹುದು? ದನದ ಕರು ಖುರೇಷಿಯವರ ಟ್ರಕ್ನಿಂದ ಬೀಳಲಿಲ್ಲ. ಅದು ಮತ್ತೊಂದು ವಾಹನದಿಂದ ಬಂದಿದೆ. ಅವನ ಮೇಲೆ ತಪ್ಪಾಗಿ ಆರೋಪ ಹೊರಿಸಲಾಗಿದೆ,” ಎಂದು ಹೇಳಿದ್ದಾರೆ.

ಪ್ರತಿಭಟನೆಯಿಂದ ನಗರದ ದೊಡ್ಡ ಭಾಗದಲ್ಲಿ ಸ್ವಚ್ಛತಾ ಸೇವೆಗಳಿಗೆ ಅಡ್ಡಿಯುಂಟಾಗಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ಮೇಲೆ ಒತ್ತಡ ಹೆಚ್ಚುತ್ತಿದೆ.

ರತ್ಲಂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್, “ಇದು ಹಬ್ಬದ ಸಮಯ ಮತ್ತು ಉದ್ವಿಗ್ನತೆ ಹೆಚ್ಚಲು ನಾವು ಬಯಸುವುದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುಎಂದು ಹೇಳುವ ಮೂಲಕ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಯಾವುದೇ ತನಿಖೆ ಇಲ್ಲದೆ ಸಾದಿಕ್ ಖುರೇಷಿಯವರನ್ನು ಬಂಧಿಸುವ ನಿರ್ಧಾರವು ಟೀಕೆಗೆ ಗುರಿಯಾಗಿದೆ. ನಾಗರಿಕ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರು ಕಾನೂನು ಪ್ರಕ್ರಿಯೆಯನ್ನು ಅನುಸರಿಸುವ ಬದಲು, ಬಜರಂಗ ದಳದ ಪ್ರಭಾವದಡಿಯಲ್ಲಿ ಪೊಲೀಸರು ಮತ್ತು ಕಾರ್ಪೊರೇಷನ್ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿಯೇ ಉಳಿದಿದೆ. ಸಮುದಾಯದ ಸದಸ್ಯರು ಮತ್ತು ಮುನ್ಸಿಪಲ್ ಕೆಲಸಗಾರರು ಇಬ್ಬರೂ ಡ್ರೈವರ್ ಅನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶ್ರೀಲಂಕಾದಲ್ಲಿ ಮಹಿಳಾ ರೈತ ಹೋರಾಟಗಾರ್ತಿ ‘ ನೈಲೆನಿ ಜಾಗತಿಕ ವೇದಿಕೆ’ಯಿಂದ 3ನೇ ಸಮಾವೇಶ: 102 ದೇಶಗಳಿಂದ 700 ಕಾರ್ಯಕರ್ತರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...