Homeಮುಖಪುಟಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

- Advertisement -
- Advertisement -

ಅಹಮದಾಬಾದ್‌ನ ಒಳಚರಂಡಿ ಸ್ವಚ್ಛಗೊಳಿಸುವಾಗ ಅಮೇಥಿಯ ಇಬ್ಬರು ದಲಿತ ಯುವಕರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಜಿನಿಯರ್, ಗುತ್ತಿಗೆದಾರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಗರದ ಬೋಪಾಲ್ ಪ್ರದೇಶದಲ್ಲಿ ಕೆಲಸ ಮಾಡುವಾಗ ವಿಕಾಸ್ ಲಾಲ್‌ಬಹಾದ್ದೂರ್ ಕೋರಿ (20) ಮತ್ತು ಕನ್ಹಯ್ಯಾಲಾಲ್ ಖುಷಿರಾಮ್ ಕೋರಿ (21) ಇಬ್ಬರೂ ಸೆಪ್ಟೆಂಬರ್ 5 ರಂದು ಸಾವನ್ನಪ್ಪಿದ್ದರು.

ಆರಂಭದಲ್ಲಿ ಗುತ್ತಿಗೆ ಕಾರ್ಮಿಕ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅಹಮದಾಬಾದ್ ಗ್ರಾಮೀಣ ಪೊಲೀಸರು ಈಗ ಈ ಪ್ರಕರಣದಲ್ಲಿ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳ ಹೆಸರುಗಳನ್ನೂ ಪ್ರಕರಣದಲ್ಲಿ ಸೇರಿಸಿದ್ದಾರೆ; ಅವರನ್ನೂ ಬಂಧಿಸಲು ಬಲೆ ಬೀಸಿದ್ದಾರೆ.

ಮುಖೇಶ್‌ಕುಮಾರ್, ಸೋಮೇಶ್ವರ್ ಅದಾಲತ್ ಠಾಕೂರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 105 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು 125 (ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು), ಹಾಗೆಯೇ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯ ಸೆಕ್ಷನ್ 7 ಮತ್ತು 9 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ದೌರ್ಜನ್ಯ ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಅಮೇಥಿಯ ಲಾಲ್‌ಬಹಾದೂರ್ ಛೋಟೆಲಾಲ್ ಕೋರಿ (48) ಎಂಬುವರು ನೀಡಿದ ದೂರಿನ ಮೇರೆಗೆ ಬೋಪಾಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಮಗ ವಿಕಾಸ್ ಕಳೆದ ಮೂರು ವರ್ಷಗಳಿಂದ ಅಹಮದಾಬಾದ್‌ನಲ್ಲಿ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 6 ರಂದು, ಲಾಲ್‌ಬಹಾದೂರ್ ತನ್ನ ಸಂಬಂಧಿ ಅನೀಶ್‌ನಿಂದ ವಿಕಾಸ್ ಮತ್ತು ಅವನ ಸ್ನೇಹಿತ ಕನ್ಹಯ್ಯಾಲಾಲ್ ಅವರನ್ನು ಭೋಪಾಲ್‌ನ ‘ದಿ ಗಾರ್ಡನ್ ಬಂಗಲೋಸ್’ ಬಳಿಯ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಇಳಿಯಲು ಒತ್ತಾಯಿಸಲಾಗಿದೆ. ಇಳಿದಕೂಡಲೇ ಅವರು ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕರೆ ಬಂದಿತು. ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ವಿಕಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಅವರಿಗೆ ತಿಳಿಸಲಾಯಿತು. ಆದದೆ, ಮರುದಿನ ಸೆಪ್ಟೆಂಬರ್ 7 ರಂದು ಆಂಬ್ಯುಲೆನ್ಸ್ ಅಮೇಥಿಯಲ್ಲಿರುವ ಅವರ ಮನೆಗೆ ತಲುಪಿದಾಗ, ವಾಹನದಿಂದ ಕೆಳಗಿಳಿಸಿದ್ದು ವಿಕಾಸ್‌ನ ನಿರ್ಜೀವ ದೇಹವನ್ನು ಎಂದು ಅವರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ವಿಕಾಸ್ ಸಾವಿನ ಬಗ್ಗೆ ಅನೀಶ್ ಅವರನ್ನು ಕೇಳಿದಾಗ, ಲಾಲ್‌ಬಹಾದ್ದೂರ್ ಅವರು ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಗುತ್ತಿಗೆದಾರ ಠಾಕೂರ್ ಯಂತ್ರ ತಂದು ವಿಕಾಸ್ ಅವರನ್ನು ಗಟಾರಕ್ಕೆ ಇಳಿಸಿ ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅದನ್ನು ಸ್ವಚ್ಛಗೊಳಿಸಲು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ. ವಿಕಾಸ್ ಪ್ರಜ್ಞೆ ತಪ್ಪಿದಾಗ, ಕನ್ಹಯಲಾಲ್ ಅವರಿಗೆ ಸಹಾಯ ಮಾಡಲು ಒಳಗೆ ಹೋದರು. ಆದರೆ, ಅವರೂ ಸಹ ಮೂರ್ಛೆ ಹೋದರು. ಸ್ಥಳದಲ್ಲಿದ್ದ ಇತರ ಜನರು ನಂತರ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಇಬ್ಬರನ್ನೂ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಕನ್ಹಯಲಾಲ್ ಮಧ್ಯಾಹ್ನ 3.40 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟರೆ, ವಿಕಾಸ್ ರಾತ್ರಿ 10.40 ಕ್ಕೆ ಕೊನೆಯುಸಿರೆಳೆದರು.

ಗುರುವಾರ, ಅಹಮದಾಬಾದ್ ಗ್ರಾಮೀಣ ಪೊಲೀಸರ ಎಸ್‌ಸಿ/ಎಸ್‌ಟಿ ಸೆಲ್‌ನ ಉಪ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ತಪನ್‌ಸಿನ್ಹ್ ದೋಡಿಯಾ ಅವರು ಮೃತ ಇಬ್ಬರು ವ್ಯಕ್ತಿಗಳನ್ನು ನಿರ್ಮಾಣ ಸ್ಥಳದ ಖಾಸಗಿ ಒಳಚರಂಡಿ ಮಾರ್ಗದಲ್ಲಿ ಕೆಲಸ ಮಾಡಲು ಗುತ್ತಿಗೆ ಪಡೆದಿದ್ದರು ಎಂದು ಹೇಳಿದರು.

“ಪ್ಲಂಬಿಂಗ್ ಕೆಲಸ ಮುಗಿಸಿದ ನಂತರ ಅವರು ಪುರಸಭೆಯ ಮುಖ್ಯ ಒಳಚರಂಡಿ ಮಾರ್ಗಕ್ಕೆ ಸಂಪರ್ಕಿಸಬೇಕಾಗಿತ್ತು. ಆದರೆ, ಮಳೆಯಿಂದಾಗಿ ಮಾರ್ಗವು ಮುಚ್ಚಿಹೋಗಿತ್ತು. ನಂತರ ಖಾಸಗಿ ಒಳಚರಂಡಿಯನ್ನು ಮುಖ್ಯ ಮಾರ್ಗಕ್ಕೆ ಸಂಪರ್ಕಿಸುವ ಮಾರ್ಗವನ್ನು ಸ್ವಚ್ಛಗೊಳಿಸಲು ಇಬ್ಬರನ್ನು ಕೇಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಈ ಸಂದರ್ಭದಲ್ಲಿ ಅವರ ಸಾವು ಸಂಭವಿಸಿದೆ” ಎಂದು ಅವರು ಹೇಳಿದರು.

ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಸ್ತುತ ವಿಚಾರಣೆಯಲ್ಲಿರುವ ನೈರ್ಮಲ್ಯ ಕಾರ್ಮಿಕರ ಸಾವಿನ ಕುರಿತು ಪಿಐಎಲ್‌ನಲ್ಲಿ ಅರ್ಜಿದಾರನಾಗಿರುವ ಮಾನವ್ ಗರಿಮಾ ಎನ್‌ಜಿಒದ ಪರ್ಶೋತ್ತಮ್ ವಘೇಲಾ, “ಉಸ್ತುವಾರಿ ವಹಿಸಿಕೊಂಡಿರುವ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾರ್ಮಿಕರ ಸಾವಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಕಾನೂನು ಸ್ಪಷ್ಟವಾಗಿದೆ” ಎಂದು ಹೇಳಿದರು.

ಗುಜರಾತ್‌: ಕಳ್ಳತನ ಆರೋಪದಡಿ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ಶಾಸಕ ಜಿಗ್ನೇಶ್‌ ಮೇವಾನಿ  ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...