Homeಮುಖಪುಟಗುಜರಾತ್| ಪೊಲೀಸರಿಂದ ಅಪ್ರಾಪ್ತನ ಮೇಲೆ ಕಸ್ಟಡಿ ಚಿತ್ರಹಿಂಸೆ; ಸೆ.15ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಗುಜರಾತ್| ಪೊಲೀಸರಿಂದ ಅಪ್ರಾಪ್ತನ ಮೇಲೆ ಕಸ್ಟಡಿ ಚಿತ್ರಹಿಂಸೆ; ಸೆ.15ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

- Advertisement -
- Advertisement -

ಗುಜರಾತ್ ಪೊಲೀಸರಿಂದ 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 15ರ ಶುಕ್ರವಾರಕ್ಕೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ಉಲ್ಲೇಖಿಸಲಾದ ಅರ್ಜಿಯು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಘಟನೆಯ ತನಿಖೆಗಾಗಿ ಗುಜರಾತ್ ಕೇಡರ್ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರದ ಎಸ್‌ಐಟಿ ಸ್ಥಾಪಿಸಲು ನಿರ್ದೇಶನ ಸೇರಿದಂತೆ ಪರಿಹಾರಗಳನ್ನು ಕೋರಿದೆ.

ಪರ್ಯಾಯವಾಗಿ, ಆರೋಪಿ ಬಲಿಪಶುವಿನ ಸಹೋದರಿ ಸಲ್ಲಿಸಿದ ಅರ್ಜಿಯು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನವನ್ನು ಕೋರಿದೆ.

“ಇದು ಆರ್ಟಿಕಲ್ 32ರ ಅರ್ಜಿಯಾಗಿದೆ, ಅರ್ಜಿದಾರರ ಅಪ್ರಾಪ್ತ ಸಹೋದರನನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದಾರೆ, ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ, ಲೈಂಗಿಕ ದೌರ್ಜನ್ಯ ಎಸಗಿ ಆತನ ಗುದದ್ವಾರಕ್ಕೆ ಕೋಲುಗಳನ್ನು ಸೇರಿಸಿದ್ದಾರೆ. ಏಮ್ಸ್ ದೆಹಲಿಯಿಂದ ವೈದ್ಯಕೀಯ ಮಂಡಳಿಯ ತಂಡಕ್ಕಾಗಿ ನಾವು ಮವಿ ಮಾಡುತ್ತಿದ್ದೇವೆ” ಎಂದು ವಕೀಲ ರೋಹಿನ್ ಭಟ್ ಪೀಠಕ್ಕೆ ತಿಳಿಸಿ, ವಿಚಾರಣೆಗೆ ಮನವಿ ಮಾಡಿದರು.

“ಸೋಮವಾರ ವಿಚಾರಣೆಗೆ ಪಟ್ಟಿ ಮಾಡುತ್ತೇವೆ” ಎಂದು ಸಿಜೆಐ ಹೇಳಿದರು.

ಚಿನ್ನ ಮತ್ತು ನಗದು ಕಳ್ಳತನದಲ್ಲಿ ಬಾಲಕನ ಶಾಮೀಲಾಗಿದ್ದಾನೆ ಎಂದು ಶಂಕಿಸಿ ಗುಜರಾತ್‌ನ ಬೋಟಾಡ್ ಪಟ್ಟಣದ ಪೊಲೀಸರು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆಗಸ್ಟ್ 19 ರಿಂದ 28 ರವರೆಗೆ ಬಾಲಕ ಅಕ್ರಮ ಬಂಧನದಲ್ಲಿದ್ದನು, ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳಿಂದ ಕ್ರೂರವಾಗಿ ಥಳಿಸಲ್ಪಟ್ಟಿದ್ದಾನೆ. ಜೊತೆಗೆ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಎಂದು ಅರ್ಜಿಯಲ್ಲಿ ಆರೋಪಿಸಿದೆ.

ಬಂಧನದ 24 ಗಂಟೆಗಳ ಒಳಗೆ ಅಪ್ರಾಪ್ತ ವಯಸ್ಕ ಬಾಲಕನನ್ನು ಬಾಲ ನ್ಯಾಯ ಮಂಡಳಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿಲ್ಲ. ಮೇಲಾಗಿ, ಬಂಧನದ ನಂತರ ಪೊಲೀಸರು ಆತನ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ವಿಫಲರಾಗಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆದ್ದರಿಂದ, ಬಿಎನ್‌ಎಸ್, ಪೋಕ್ಸೊ ಕಾಯ್ದೆ, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಅಪ್ರಾಪ್ತ ವಯಸ್ಕನಿಗೆ ನೀಡಲಾದ ‘ಕಸ್ಟಡಿಯಲ್ಲಿ ಹಿಂಸೆ ಮತ್ತು ಲೈಂಗಿಕ ಹಿಂಸೆಯ ಬಗ್ಗೆ ತನಿಖೆ ನಡೆಸಲು’ ಎಫ್‌ಐಆರ್ ದಾಖಲಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

“ಬೋಟಾಡ್ ಟೌನ್ ಪೊಲೀಸ್ ಠಾಣೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ” ಸುಪ್ರೀಂ ಕೋರ್ಟ್‌ನ ದಾಖಲೆಯಲ್ಲಿ ಇರಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಲಾಯಿತು.

ಅರ್ಜಿಯು ರಾಜ್ಯ ಪೊಲೀಸರನ್ನು ಅಪ್ರಾಪ್ತ ವಯಸ್ಕನ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸುವಂತೆ ಕೋರಿತು.

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...