Homeಕರ್ನಾಟಕಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

ಹಾಸನ ಅಪಘಾತ: ಘಟನೆಗೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ; ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಪಘಾತಕ್ಕೆ ಕೋಮು ಬಣ್ಣ ಬಳಿಯುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಶನಿವಾರ (ಸೆ.13) ಹಾಸನಕ್ಕೆ ಭೇಟಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಇದಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟಿರುವ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲ ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಕೂಡ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ದುರಂತಕ್ಕೆ ರಸ್ತೆ ಸಮಸ್ಯೆಯೂ ಒಂದು ಕಾರಣ. ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ, ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಮತ್ತು ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಾಟೀಲ್ ಪತ್ರ ಬರೆಯುತ್ತೇವೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆಯೂ ಪತ್ರದಲ್ಲಿ ಒತ್ತಾಯಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ (ಸೆ.12) ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಮಂದಿ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ದುರಂತದ ಗಾಯಾಳುಗಳಿಗೂ ಸರ್ಕಾರದಿಂದ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚುವರಿ ಕೆಎಸ್‌ಆರ್‌ಪಿ ತುಕಡಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...