Homeಮುಖಪುಟತೆಲಂಗಾಣ| ಪೊಲೀಸರಿಗೆ ಶರಣಾದ ಹಿರಿಯ ಮಾವೋವಾದಿ ನಾಯಕಿ ಪೋತುಲಾ ಕಲ್ಪನಾ

ತೆಲಂಗಾಣ| ಪೊಲೀಸರಿಗೆ ಶರಣಾದ ಹಿರಿಯ ಮಾವೋವಾದಿ ನಾಯಕಿ ಪೋತುಲಾ ಕಲ್ಪನಾ

- Advertisement -
- Advertisement -

ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ನ ಹಿರಿಯ ಸದಸ್ಯೆಯೊಬ್ಬರು ಸೆಪ್ಟೆಂಬರ್ 12, ಶುಕ್ರವಾರ ತೆಲಂಗಾಣ ಪೊಲೀಸರ ಮುಂದೆ ಶರಣಾಗಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ, ಪೋತುಲಾ ಕಲ್ಪನಾ ಅಲಿಯಾಸ್ ಸುಜಾತಕ್ಕ, ನವೆಂಬರ್ 2011 ರಲ್ಲಿ ಕೊಲ್ಲಲ್ಪಟ್ಟ ಮಾವೋವಾದಿ ನಾಯಕ ಕಿಶನ್‌ಜಿಯ ಅವರ ಪತ್ನಿಯಾಗಿದ್ದಾರೆ. ಅವರನ್ನು ಮೋಸ್ಟ್‌ ವಾಂಟೆಡ್ ನಾಯಕಿಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಅವರು ತೆಲುಗು ನಿಯತಕಾಲಿಕೆಗಳಲ್ಲಿ ‘ಮೈನಾ’ ಎಂಬ ಕಾವ್ಯನಾಮದಲ್ಲಿ ಕಥೆಗಳನ್ನು ಬರೆಯುತ್ತಿದ್ದರು. ಜನರು ಅವರನ್ನು ಮೈನಕ್ಕ ಎಂದೂ ಕರೆಯುತ್ತಾರೆ. ಛತ್ತೀಸ್‌ಗಢ ದಕ್ಷಿಣ ಉಪ ವಲಯ ಬ್ಯೂರೋದ ಉಸ್ತುವಾರಿ ವಹಿಸಿದ್ದರು, ಅವರ ವಿರುದ್ಧ 106 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇವರೆ ಜೊತೆಗೆ ಇನ್ನೂ ಕೆಲವು ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಸೆಪ್ಟೆಂಬರ್ 13, ಶನಿವಾರ ಔಪಚಾರಿಕ ಪತ್ರಿಕಾಗೋಷ್ಠಿಗಾಗಿ ಕಾಯಲಾಗುತ್ತಿದೆ. ಜುಲೈನಲ್ಲಿ, ಮುಲುಗು ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರ ಮುಂದೆ ಐದು ಮಾವೋವಾದಿಗಳು ಶರಣಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಸಂಖ್ಯೆಯ ಹಿರಿಯ ಮಾವೋವಾದಿ ಪಕ್ಷದ ಕಾರ್ಯಕರ್ತರು ಶರಣಾಗುತ್ತಿದ್ದಾರೆ.  ಹೆಚ್ಚಾಗಿ ಆರೋಗ್ಯ ಸಮಸ್ಯೆಗಳಿಂದ ಎನ್ನಲಾಗುತ್ತಿದೆ.

ಛತ್ತೀಸ್‌ಗಢ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಮಾವೋವಾದಿ ಪಕ್ಷವು ಭಾರಿ ನಷ್ಟವನ್ನು ಅನುಭವಿಸುತ್ತಿದೆ.

ಪಕ್ಷವು ಮೇ 21 ರಂದು 27 ಕ್ರಾಂತಿಕಾರಿಗಳ ಪ್ರಾಣವನ್ನು ಬಲಿ ಪಡೆದ ಎನ್‌ಕೌಂಟರ್‌ನಲ್ಲಿ ತನ್ನ ಉನ್ನತ ನಾಯಕ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಅವರನ್ನು ಕಳೆದುಕೊಂಡಿದೆ.

ಟೆಂಟು ಲಕ್ಷ್ಮಿ ನರಸಿಂಹ ಚಲಂ ಅಲಿಯಾಸ್ ಸುಧಾಕರ್ (65), ಮೋಡೆಮ್ ಬಾಲಕೃಷ್ಣ ಅಲಿಯಾಸ್ ಬಾಲಣ್ಣ, ಕಟಕಂ ಸುದರ್ಶನ್, ಪ್ರತಾಪ್ ರೆಡ್ಡಿ ರಾಮಚಂದ್ರ ರೆಡ್ಡಿ ಅಲಿಯಾಸ್ ಚಲಪತಿ (62), ಮೈಲಾರಪು ಅಡೆಲ್ಲು ಅಲಿಯಾಸ್ ಭಾಸ್ಕರ್ ಮತ್ತು ಇನ್ನೂ ಅನೇಕ ಉನ್ನತ ನಾಯಕರು ಇತ್ತೀಚಿನ ದಿನಗಳಲ್ಲಿ ಕೊಲ್ಲಲ್ಪಟ್ಟರು.

ಪೊಲಿಟ್‌ಬ್ಯೂರೋ ಸದಸ್ಯ ಮತ್ತು ಮಾವೋವಾದಿ ಪಕ್ಷದ ಸ್ಥಾಪಕ ಸದಸ್ಯ ಸುಶೀಲ್ ರಾಯ್ (78), ದೀರ್ಘಕಾಲದ ಅನಾರೋಗ್ಯದ ನಂತರ ಜೂನ್ 18, 2014 ರಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಐಐಎಂಎಸ್) ನಿಧನರಾದರು.

ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಬಿ. ನಾರಾಯಣ್ ಸನ್ಯಾಲ್ ಅಲಿಯಾಸ್ ನವೀನ್ ಪ್ರಸಾದ್ ಅಲಿಯಾಸ್ ಬಿಜೋಯ್ ದಾ, ಏಪ್ರಿಲ್ 17, 2017 ರಂದು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ನಿಧನರಾದ ನಂತರ ಎರಡನೇ ಸ್ಥಾನದಲ್ಲಿದ್ದರು. ಅವರಿಗೆ 80 ರ ದಶಕದ ಆರಂಭದಲ್ಲಿ ಕ್ಯಾನ್ಸರ್ ಇತ್ತು.

ಮಣಿಪುರ| ಇಂಫಾಲ್‌ನಿಂದ ಕುಕಿ ಪ್ರಾಬಲ್ಯದ ಪ್ರದೇಶಕ್ಕೆ ಪ್ರಧಾನಿ ಮೋದಿ ಪ್ರಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...