Homeಅಂತರಾಷ್ಟ್ರೀಯ'ಜೆನ್ ಝೀʼ ಪ್ರತಿಭಟನೆಯಲ್ಲಿ ಸಾವಿಗೀಡಾದವರು 'ಹುತಾತ್ಮರು': ನೇಪಾಳದ ಹೊಸ ಪ್ರಧಾನಿ ಘೋಷಣೆ

‘ಜೆನ್ ಝೀʼ ಪ್ರತಿಭಟನೆಯಲ್ಲಿ ಸಾವಿಗೀಡಾದವರು ‘ಹುತಾತ್ಮರು’: ನೇಪಾಳದ ಹೊಸ ಪ್ರಧಾನಿ ಘೋಷಣೆ

- Advertisement -
- Advertisement -

ನೇಪಾಳದ ‘ಜೆನ್‌ ಝೀ’ ಪ್ರತಿಭಟನೆಯ ವೇಳೆ ಸಾವಿಗೀಡಾದವರನ್ನು ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲ ಕರ್ಕಿ ‘ಹುತಾತ್ಮರು’ ಎಂದು ಘೋಷಿಸಿದ್ದಾರೆ.

ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದವರನ್ನು ಸರ್ಕಾರ ಹುತಾತ್ಮರೆಂದು ಗುರುತಿಸಿದೆ ಮತ್ತು ಅವರ ಕುಟುಂಬಕ್ಕೆ 1 ಮಿಲಿಯನ್ ನೇಪಾಳಿ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಏಕನಾರಾಯಣ್ ಆರ್ಯಲ್ ಹೇಳಿದ್ದಾರೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಮತ್ತು ಹೊಸ ನಿರ್ದೇಶನದ ಅಡಿಯಲ್ಲಿ ಚಿಕಿತ್ಸೆ ಈಗಾಗಲೇ ಪ್ರಾರಂಭವಾಗಿದೆ ಎಂದು ಆರ್ಯಲ್ ತಿಳಿಸಿದ್ದಾರೆ.

ಪ್ರಧಾನಿ ಕರ್ಕಿ ಶನಿವಾರ (ಸೆಪ್ಟೆಂಬರ್ 13) ಕಠ್ಮಂಡುವಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ಪ್ರತಿಭಟನಾಕಾರರನ್ನು ಭೇಟಿಯಾಗಿದ್ದಾರೆ.

ಈ ನಡುವೆ, ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಸುಶೀಲಾ ಕರ್ಕಿ ಅವರ ನೇಮಕವನ್ನು ಅಮೆರಿಕ ಸ್ವಾಗತಿಸಿದೆ. ಕಳೆದ ವಾರದ ಅಶಾಂತಿಯ ನಂತರ ಸ್ಥಿರತೆಯತ್ತ ಒಂದು ಹೆಜ್ಜೆ ಎಂದು ಕರೆದಿದೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ನೇಪಾಳದ ಅಮೆರಿಕ ರಾಯಭಾರಿ ಡೀನ್ ಆರ್ ಥಾಂಪ್ಸನ್, “ಅಮೆರಿಕ ಕಳೆದ ವಾರದ ದುರಂತ ಘಟನೆಗಳ ನಂತರ ಶಾಂತತೆಯ ಪುನಃಸ್ಥಾಪನೆ ಮತ್ತು ಶಾಂತಿಯುತ ನಿರ್ಣಯವನ್ನು ಸ್ವಾಗತಿಸುತ್ತದೆ” ಎಂದು ಹೇಳಿದ್ದಾರೆ.

ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೂಲಕ ಪರಿಹಾರಕ್ಕೆ ಬದ್ಧತೆ ತೋರಿಸಿದ್ದಕ್ಕಾಗಿ ಅಧ್ಯಕ್ಷ ರಾಮಚಂದ್ರ ಪೌಡೆಲ್ ಮತ್ತು ಯುವ ನಾಯಕರನ್ನು ಥಾಂಪ್ಸನ್ ಶ್ಲಾಘಿಸಿದ್ದಾರೆ. ಶಾಂತಿ, ಸುವ್ಯವಸ್ಥೆ ಪುನಃಸ್ಥಾಪಿಸಲು ಮತ್ತು ಸುಗಮ ನಾಗರಿಕ ಪರಿವರ್ತನೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಿದ್ದಕ್ಕಾಗಿ ನೇಪಾಳಿ ಸೇನೆ ಮತ್ತು ಅದರ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಅವರ ಪಾತ್ರವನ್ನು ಅವರು ಕೊಂಡಾಡಿದ್ದಾರೆ.

“ಮುಂದಿನ ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸುವ ತಯಾರಿಯಲ್ಲಿರುವ ಮಧ್ಯಂತರ ಸರ್ಕಾರದ ನಾಯಕತ್ವದೊಂದಿಗೆ ಕೆಲಸ ಮಾಡಲು ನಮ್ಮ ಸರ್ಕಾರ ಎದುರು ನೋಡುತ್ತಿದೆ. ನೇಪಾಳದ ನಷ್ಟಗಳ ಬಗ್ಗೆ ಅಮೆರಿಕ ಬೇಸರ ವ್ಯಕ್ತಪಡಿಸುತ್ತಿದೆ. ಆದರೆ, ರಾಜಕೀಯ ಪರಿವರ್ತನೆಯು ಶಾಂತಿಯುತವಾಗಿ ಮುಂದುವರಿಯಲು ಅವಕಾಶವನ್ನು ನೀಡುತ್ತದೆ” ಎಂದು ಥಾಂಪ್ಸನ್ ಒತ್ತಿ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದು ಕೆ.ಪಿ ಶರ್ಮಾ ಓಲಿ ಸರ್ಕಾರದ ಪತನದ ನಂತರ ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಕೊನೆಗೊಂಡಿದೆ. ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಶುಕ್ರವಾರ ರಾತ್ರಿ ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ದೇಶವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...