Homeಮುಖಪುಟಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಭಾಷಣ ಮಾಡಿ ಬಂದ ಮರುದಿನವೇ ಭಾನುವಾರ (ಸೆ.14) ಮಣಿಪುರದ ಚುರಚಂದ್‌ಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆ ಮಾಡಲಾಗಿದ್ದ ಅಲಂಕಾರವನ್ನು ಹಾನಿ ಮಾಡಿದ್ದಕ್ಕಾಗಿ ಈ ವಾರದ ಆರಂಭದಲ್ಲಿ ಬಂಧಿಸಲಾದ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

ಭಾನುವಾರ ಮಧ್ಯಾಹ್ನ ಸ್ಥಳೀಯರ ಗುಂಪೊಂದು ಬಂಧಿತ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕುಕಿ-ಝೋ ಸಮುದಾಯ ಹೆಚ್ಚಾಗಿ ವಾಸಿಸುವ ಚುರಚಂದ್‌ಪುರ ಜಿಲ್ಲೆಯ ಕೇಂದ್ರ ಸ್ಥಾನ ಚುರಚಂದ್‌ಪುರ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನೆ ಪ್ರಾರಂಭಿಸಿತ್ತು.

ಹಿರಿಯ ಭದ್ರತಾ ಅಧಿಕಾರಿಯೊಬ್ಬರ ಪ್ರಕಾರ, ಪ್ರತಿಭಟನಾಕಾರರು ಚುರಚಂದ್‌ಪುರ ಪೊಲೀಸ್ ಠಾಣೆಗೆ ನುಗ್ಗಲು ಪ್ರಯತ್ನಿಸಿದ್ದರು. ಪ್ರತಿಭಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಆರ್‌ಎಎಫ್ ಸಿಬ್ಬಂದಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಂಧಿತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಭಾನುವಾರ ಸಂಜೆಯ ವೇಳೆಗೆ ಅವರನ್ನು ಬಿಡುಗಡೆ ಮಾಡಲು ಸೂಚಿಸಿದ್ದಾರೆ ಎಂದು ಅಧಿಕಾರಿಗಳನ್ನುಉಲ್ಲೇಖಿಸಿ ವರದಿ ಹೇಳಿದೆ.

“ಪ್ರತಿಭಟನಾ ನಿರತರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಕಾನೂನು ಮಾರ್ಗಗಳ ಮೂಲಕ ಇಬ್ಬರ ಬಿಡುಗಡೆಗೆ ಪ್ರಯತ್ನಿಸುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದ್ದಾರೆ. ನಂತರ, ಪ್ರತಿಭಟನಾಕಾರರು ವಕೀಲರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಸಂಜೆಯ ವೇಳೆಗೆ ಇಬ್ಬರಿಗೆ ಜಾಮೀನು ನೀಡಿದ್ದಾರೆ. ಆ ಬಳಿಕ ಪರಿಸ್ಥಿತಿ ಶಾಂತವಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮುನ್ನ ಗುರುವಾರ ರಾತ್ರಿ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಪ್ರಧಾನಿ ಭೇಟಿ ಹಿನ್ನೆಲೆ ಹಾಕಲಾಗಿದ್ದ ಕೆಲವು ಅಲಂಕಾರಿಕ ವಸ್ತುಗಳನ್ನು ನಾಶ ಮಾಡಿರುವುದು ಈ ಘಟನೆ ಕಾರಣ. ಆಲಂಕಾರಿಕ ವಸ್ತುಗಳನ್ನು ನಾಶ ಮಾಡಿದ್ದಲ್ಲದೆ ಪಿಯರ್ಸನ್‌ಮನ್ ಪ್ರದೇಶದಲ್ಲಿ ಗುಂಪೊಂದು ಬೆಂಕಿ ಹಚ್ಚಿತ್ತು. ಅದನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗುರುವಾರ ರಾತ್ರಿಯ ಉದ್ವಿಗ್ನತೆಯ ನಂತರ, ಚುರಚಂದ್‌ಪುರ ಪಟ್ಟಣದ ವಿವಿಧ ನಾಗರಿಕ ಸಂಘಟನೆಗಳು ಶಾಂತಿಗೆ ಕರೆ ನೀಡಿತ್ತು. ಆ ಬಳಿಕ ಪಟ್ಟಣದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿತ್ತು. ಪ್ರಧಾನಿಯ ಭೇಟಿಯ ದಿನವಾದ ಶನಿವಾರ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...