Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: ಎರಡು ತಿಂಗಳೊಳಗೆ ನಿಯಮ ರೂಪಿಸಲು ಯುಜಿಸಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಖಂಡಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್‌) ವಿವಿಧ ಪಕ್ಷಕಾರರು ನೀಡಿದ ಸಲಹೆಗಳನ್ನು ಪರಿಗಣಿಸಲು ಮತ್ತು ನಿಯಮಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸುಪ್ರೀಂ ಕೋರ್ಟ್ ಸೋಮವಾರ 8 ವಾರಗಳ (2 ತಿಂಗಳು) ಕಾಲಾವಕಾಶ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಕಿರುಕುಳವನ್ನು ಎದುರಿಸಿ ಆತ್ಮಹತ್ಯೆ ಮಾಡಿಕೊಂಡ ಹಿಂದುಳಿದ ಸಮುದಾಯಗಳ ಇಬ್ಬರು ವಿದ್ಯಾರ್ಥಿಗಳಾದ ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ತಾಯಂದಿರು 2019ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಪಿಐಎಲ್‌ ವಿಚಾರಣೆ ನಡೆಸಿ, ಅರ್ಜಿದಾರರು ನೀಡಿರುವ ಈ ಕೆಳಗಿನ ಸಲಹೆಗಳನ್ನು ಯುಜಿಸಿ ಪರಿಗಣಿಸಬಹುದು ಎಂದು ಹೇಳಿದೆ.

ತಾರತಮ್ಯದ ಚಟುವಟಿಕೆಗಳನ್ನು ನಿಷೇಧಿಸುವುದು- ತಿಳಿದಿರುವ ಎಲ್ಲಾ ರೀತಿಯ ತಾರತಮ್ಯಗಳ ಮೇಲೆ ಸ್ಪಷ್ಟ ನಿಷೇಧ ಹೇರುವುದು ಮತ್ತು ಶಿಸ್ತು ಕ್ರಮಗಳನ್ನು ಜಾರಿಗೊಳಿಸುವುದು.

ವರ್ಗೀಕರಣ ಮಾಡದಿರುವುದು- ಪ್ರವೇಶ ಶ್ರೇಣಿ (Entrance rank)ಅಥವಾ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಸ್ಟೆಲ್‌ಗಳು, ತರಗತಿ ಕೊಠಡಿಗಳು ಅಥವಾ ಪ್ರಾಯೋಗಿಕ ಬ್ಯಾಚ್‌ಗಳನ್ನು ವರ್ಗೀಕರಣ ಮಾಡದಿರುವುದು.

ವಿದ್ಯಾರ್ಥಿವೇತನ ವಿತರಣೆ- ದೂರುಗಳನ್ನು ಪತ್ತೆಹಚ್ಚಲು ಮತ್ತು ಸರ್ಕಾರ ಪಾವತಿ ವಿಳಂಬ ಮಾಡಿದಾಗ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದನ್ನು ತಡೆಯಲು ವಿದ್ಯಾರ್ಥಿವೇತನ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು.

ಕುಂದುಕೊರತೆ ಪರಿಹಾರ- ಕನಿಷ್ಠ 50 ಶೇಕಡ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ಹೊಂದಿರುವ, ಹಾಗೂ ಅದೇ ಸಮುದಾಯದ ಅಧ್ಯಕ್ಷರನ್ನು ಹೊಂದಿರುವ ಕುಂದು ಕೊರತೆ ಪರಿಹಾರ ಸಮಿತಿಯನ್ನು ರಚಿಸಬೇಕು; ಅಂತಹ ಸಮಿತಿಯ ಆದೇಶಗಳ ವಿರುದ್ಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳ ಆಯೋಗದ ಮುಂದೆ ಮೇಲ್ಮನವಿ ಸಲ್ಲಿಸಬಹುದು.

ದೂರುದಾರರ ರಕ್ಷಣೆ- ದೂರುದಾರರು ಕಿರುಕುಳ, ಅವಮಾನ ಮತ್ತು ಬೆದರಿಕೆಗೆ ಒಳಗಾಗಿಲ್ಲ. ಅವರು ದೂರನ್ನು ಮುಂದುವರಿಸಲು ಅವಕಾಶ ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಾಕ್ಷಿ ರಕ್ಷಣೆಯಂತಹ ಮಾದರಿಯನ್ನು ಅನ್ವಯಿಸುದು.

ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ- ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಿಬ್ಬಂದಿ ಸದಸ್ಯರನ್ನು ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರರನ್ನಾಗಿ ಮಾಡುವುದು.

ಮಾನಸಿಕ ಆರೋಗ್ಯ ಸಮಾಲೋಚನೆ- ತಳ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿಶೇಷವಾಗಿ ತರಬೇತಿ ಪಡೆದ ಸಲಹೆಗಾರರ ನೇಮಕ ಕಡ್ಡಾಯಗೊಳಿಸುವುದು.

ಮಾನ್ಯತೆ ಮತ್ತು ಮೌಲ್ಯಮಾಪನ- ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ಎನ್‌ಎಎಸಿ) ತಾರತಮ್ಯ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ನಿರ್ದಿಷ್ಟ ಮಾನದಂಡಗಳನ್ನು ಸೇರಿಸಬೇಕು. ಲಿಂಗ ಮತ್ತು ಇತರ ಸಾಮಾಜಿಕ ಗುಂಪುಗಳ ಕುರಿತು ಅನಾಮಧೇಯ ಡೇಟಾವನ್ನು ಸಂಗ್ರಹಿಸಲು ಮತ್ತು ಪ್ರಕಟಿಸಲು ಸಾಮಾಜಿಕ ಮೌಲ್ಯಮಾಪನ ನಡೆಸುವುದನ್ನು ಕಡ್ಡಾಯಗೊಳಿಸಬೇಕು.

ನಿಯಮ ಪಾಲಿಸದ ಸಂಸ್ಥೆಗಳ ಮೇಲೆ ಕ್ರಮ- ಯುಜಿಸಿ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ಅನುದಾನ ಮತ್ತು ಮಾನ್ಯತೆಗಳನ್ನು ಹಿಂಪಡೆಯುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ಸಮಾನ ಕಲಿಕಾ ಬೆಂಬಲ- ತಳ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕೋರ್ಸ್‌ಗಳನ್ನು ನಡೆಸಬೇಕು.

ವಿಚಾರಣೆಯ ಸಮಯದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕರಡು ನಿಯಮಗಳನ್ನು ಪ್ರಕಟಿಸಿದ ನಂತರ 391 ಸಲಹೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವುಗಳನ್ನು ತಜ್ಞರ ಸಮಿತಿಯು ಪರಿಗಣಿಸಿದೆ. ಯುಜಿಸಿಯಿಂದ ಅವುಗಳ ಪರಿಶೀಲನೆಗೆ ಶಿಫಾರಸು ಮಾಡಿದೆ. ಹಾಗಾಗಿ, ಆ ಹಂತದಲ್ಲಿ ವಿಷಯ ಬಾಕಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸಲಹೆಗಳಲ್ಲಿ, ಕೆಲವು ‘ತುಂಬಾ ಒಳ್ಳೆಯದಿದೆ. 1-2 ‘ಸಮಸ್ಯಾತ್ಮಕ’ವಾಗಿದೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು, ಪ್ರಕರಣವನ್ನು 2019 ರಲ್ಲಿ ದಾಖಲಿಸಲಾಗಿದ್ದು, ಹಲವು ವಿದ್ಯಾರ್ಥಿಗಳು ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ಕರಡು ನಿಯಮಗಳನ್ನು ಪ್ರಕಟಿಸಲಾಗಿದೆ. ಅರ್ಜಿದಾರರು ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನ ಎರಡು ಸಮನ್ವಯ ಪೀಠಗಳು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿವೆ. ಅರ್ಜಿದಾರರು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವಲ್ಲಿ ಆಸಕ್ತಿ ಹೊಂದಿದ್ದಾರೆ. ಈಗ ನಿಯಮಗಳನ್ನು ಜಾರಿಗೆ ತರಲಾಗುತ್ತಿಲ್ಲ ಎಂಬ ಸರಳ ದೂರಿನೊಂದಿಗೆ ನಾವು ನ್ಯಾಯಾಲಯಕ್ಕೆ ಬಂದಿದ್ದೇವೆ. ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಅರ್ಜಿದಾರರ ಸಲಹೆಗಳನ್ನು ಪರಿಗಣಿಸಬೇಕು” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ಅವರು, “ಅರ್ಜಿದಾರರು ತಮ್ಮ ಟಿಪ್ಪಣಿಯಲ್ಲಿ ದೂರುದಾರರ ರಕ್ಷಣೆ, ಮಾನಸಿಕ ಆರೋಗ್ಯ ಸಮಾಲೋಚನೆ, ನಿರ್ಲಕ್ಷ್ಯಕ್ಕೆ ವೈಯಕ್ತಿಕ ಹೊಣೆಗಾರಿಕೆ, ಲೆಕ್ಕಪರಿಶೋಧನೆ, ಅನುಸರಣೆ ಮಾಡದಿದ್ದಕ್ಕಾಗಿ ಕ್ರಮ ಇತ್ಯಾದಿ 10 ವಿಷಯಗಳನ್ನು ವಿವರಿಸಿದ್ದಾರೆ. ಈಗ ಈ ವಿಷಯವು ಯುಜಿಸಿಯಲ್ಲಿ ಬಾಕಿ ಇದೆ. ಪ್ರಸ್ತಾವಿತ ನಿಯಮಗಳಲ್ಲಿ ಅರ್ಜಿದಾರರು ನೀಡಿರುವ ಸಲಹೆಗಳನ್ನು ಕೂಡ ಪರಿಗಣಿಸಬೇಕೆಂದು ನಾವು ಇಂದು ನಿರ್ದೇಶಿಸುತ್ತೇವೆ. ಅವರು (ಯುಜಿಸಿ) ಹೇಗೆ ಹಿಂದೆ ಸರಿಯುತ್ತಾರೆ ನೋಡೋಣ” ಎಂದರು.

ನ್ಯಾಯಾಧೀಶರ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ ಇಂದಿರಾ ಜೈಸಿಂಗ್, ಅಂತಿಮ ನಿಯಮಗಳನ್ನು ಜಾರಿಗೊಳಿಸಲು ಸಮಯ ಮಿತಿಯನ್ನು ವಿಧಿಸಬಹುದು. ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ತೀರ್ಪಿಗಾಗಿ ನಾವು ಎದುರು ನೋಡುತ್ತಿದ್ದೇವೆ. ಯಾವುದೇ ವಿಷಯವನ್ನು ಅಂತಿಮಗೊಳಿಸುವ ಮೊದಲು ಈ ಬಗ್ಗೆ ನಿಮ್ಮೊಂದಿಗೆ ಮಾತನಾಡಲು ದಯವಿಟ್ಟು ಅವಕಾಶ ನೀಡಿ, ಅದು ನನ್ನ ಏಕೈಕ ವಿನಂತಿ. ನಾವು 2019 ರಿಂದ ತಾಳ್ಮೆಯಿಂದ ವಿಚಾರಣೆಗಾಗಿ ಕಾಯುತ್ತಿದ್ದೇವೆ” ಎಂದು ಮನವಿ ಮಾಡಿದರು.

ನ್ಯಾಯಾಲಯವು ತನ್ನ ಆದೇಶದಲ್ಲಿ, ಅರ್ಜಿದಾರರು ಸಲ್ಲಿಸಿದ ಸಂಕ್ಷಿಪ್ತ ಟಿಪ್ಪಣಿಯನ್ನು ಯುಜಿಸಿಗೆ ಕಳುಹಿಸಲು ಸೂಚಿಸಿದೆ, ಅದರಲ್ಲಿರುವ ಅರ್ಜಿದಾರರ ಸಲಹೆಗಳನ್ನು ಪರಿಶೀಲಿಸಲು ಹೇಳಿದೆ. ಜೊತೆಗೆ, ತಜ್ಞರ ಸಮಿತಿಯ ವರದಿಯಲ್ಲಿ ಒಳಗೊಂಡಿರುವ ಸಲಹೆಗಳು ಮತ್ತು ಇತರ ಪಕ್ಷಕಾರರಿಂದ ಬಂದ ಸಲಹೆಗಳನ್ನು ಕೂಡ ಪರಿಗಣಿಸಿ, ಯುಜಿಸಿ ಶೀಘ್ರವಾಗಿ ಅಂತಿಮ ನಿಯಮಗಳನ್ನು ಅಧಿಸೂಚಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...